Homeಮುಖಪುಟಕನ್ವರ್ ಯಾತ್ರೆ 2024: ಹೋಟೆಲ್ ಹೊರಗೆ ಹೆಸರು-ಸಂಪರ್ಕ ಸಂಖ್ಯೆ ಪ್ರದರ್ಶಿಸುವಂತೆ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ನಿರ್ದೇಶನ

ಕನ್ವರ್ ಯಾತ್ರೆ 2024: ಹೋಟೆಲ್ ಹೊರಗೆ ಹೆಸರು-ಸಂಪರ್ಕ ಸಂಖ್ಯೆ ಪ್ರದರ್ಶಿಸುವಂತೆ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ನಿರ್ದೇಶನ

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ಆಡಳಿತದ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಶನ್ ಆಡಳಿತವು, ಕನ್ವರ್ ಯಾತ್ರಾ 2024 ಮಾರ್ಗದಲ್ಲಿನ ಅಂಗಡಿ ಮಾಲೀಕರಿಗೆ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಗಳನ್ನು ಪುರಾತನ ನಗರದಲ್ಲಿರುವ ತಮ್ಮ ಸಂಸ್ಥೆಗಳ ಹೊರಗೆ ಪ್ರದರ್ಶಿಸುವಂತೆ ಸೂಚಿಸಿದೆ. ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಇದೇ ರೀತಿಯ ಆದೇಶ ನೀಡಿದ ನಂತರ ಈ ನಿರ್ದೇಶನ ಬಂದಿದೆ.

ಕಾರ್ಪೊರೇಷನ್ ಆದೇಶವನ್ನು ಮೊದಲ ಬಾರಿಗೆ ಉಲ್ಲಂಘಿಸಿದರೆ  ₹2,000 ದಂಡ ಮತ್ತು ಎರಡನೇ ಬಾರಿಗೆ ಈ ಆದೇಶವನ್ನು ಉಲ್ಲಂಘಿಸಿದರೆ ₹5,000 ದಂಡ ಪಾವತಿಸಬೇಕಾಗುತ್ತದೆ ಎಂದು ಉಜ್ಜಯಿನಿ ಮೇಯರ್ ಮುಖೇಶ್ ತತ್ವಾಲ್ ಶನಿವಾರ (ಜುಲೈ 20) ತಿಳಿಸಿದ್ದಾರೆ. ಈ ಆದೇಶವು ಸುರಕ್ಷತೆ ಮತ್ತು ಪಾರದರ್ಶಕತೆಯನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆ ಮತ್ತು ಮುಸ್ಲಿಂ ಅಂಗಡಿ ಮಾಲೀಕರನ್ನು ಗುರಿಯಾಗಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಮೇಯರ್ ಹೇಳಿದ್ದಾರೆ.

ಸೆಪ್ಟೆಂಬರ್ 26, 2002 ರಂದು ಅಂಗಡಿಯವರು ತಮ್ಮ ಹೆಸರನ್ನು ಪ್ರದರ್ಶಿಸಲು ಉಜ್ಜಯಿನಿಯ ಮೇಯರ್-ಇನ್-ಕೌನ್ಸಿಲ್ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ, ನಂತರ, ಕಾರ್ಪೊರೇಷನ್ ಹೌಸ್ ಅದನ್ನು ಆಕ್ಷೇಪಣೆಗಳು ಮತ್ತು ಔಪಚಾರಿಕತೆಗಳಿಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದಾರೆ ಎಂದು ತತ್ವಾಲ್ ಹೇಳಿದರು.

“ಎಲ್ಲಾ ವಿಧಿವಿಧಾನಗಳು ಈಗಾಗಲೇ ಪೂರ್ಣಗೊಂಡಿವೆ. ಆರಂಭದಲ್ಲಿ ನಾಮಫಲಕಗಳು ಒಂದೇ ಗಾತ್ರ ಮತ್ತು ಬಣ್ಣದಲ್ಲಿ ಇರಬೇಕಾಗಿದ್ದರಿಂದ ಅನುಷ್ಠಾನವು ವಿಳಂಬವಾಯಿತು. ಈಗ ನಾವು ಈ ನಿಯಮಗಳನ್ನು ಸಡಿಲಿಸಿದ್ದೇವೆ. ಅಂಗಡಿಕಾರರ ಹೆಸರುಗಳು ಮತ್ತು ಮೊಬೈಲ್ ಸಂಖ್ಯೆಗಳನ್ನು ಪ್ರದರ್ಶಿಸಿದರೆ ಸಾಕು” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಕ್ರಮವು ‘ಮಧ್ಯಪ್ರದೇಶ ಶಾಪ್ ಎಸ್ಟಾಬ್ಲಿಷ್‌ಮೆಂಟ್ ಆಕ್ಟ್ ಅಥವಾ ಗುಮಾಸ್ತಾ ಪರವಾನಗಿಗೆ’ಮಸಂಬಂಧಿಸಿದೆ ಎನ್ನಲಾಗಿದ್ದು, ಇದು ಗ್ರಾಹಕರ ಸುರಕ್ಷತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಅವರು ಒತ್ತಿ ಹೇಳಿದರು.

“ಉಜ್ಜಯಿನಿ ಧಾರ್ಮಿಕ ಮತ್ತು ಪವಿತ್ರ ನಗರವಾಗಿದೆ. ಜನರು ಧಾರ್ಮಿಕ ಆಸ್ಥೆ (ನಂಬಿಕೆ)ಯೊಂದಿಗೆ ಇಲ್ಲಿಗೆ ಬರುತ್ತಾರೆ. ಅವರು ಯಾರ ಸೇವೆಯನ್ನು ಪಡೆಯುತ್ತಿದ್ದಾರೆಂದು ಅವರು ತಿಳಿದುಕೊಳ್ಳುವ ಹಕ್ಕನ್ನು ಹೊಂದಿರುತ್ತಾರೆ. ಗ್ರಾಹಕರು ಅತೃಪ್ತರಾಗಿದ್ದರೆ ಅಥವಾ ಮೋಸ ಹೋದರೆ, ಪರಿಹಾರ ಪಡೆಯಲು ಅವರು ಅಂಗಡಿಯ ಮಾಲೀಕರ ವಿವರಗಳನ್ನು ತಿಳಿದುಕೊಳ್ಳುವುದು ಸಹಾಯ ಮಾಡುತ್ತದೆ” ಎಂದು ಮೇಯರ್ ಹೇಳಿದರು.

ಕುಂಭಮೇಳ

ಉಜ್ಜಯಿನಿಯು 2028 ರಲ್ಲಿ ಸಿಂಹಸ್ಥ (ಕುಂಭ) ಮೇಳವನ್ನು ಆಯೋಜಿಸಲಿದೆ, ಇದು ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹತ್ವದ ಧಾರ್ಮಿಕ ಜಾತ್ರೆಯಾಗಿದೆ. ಈ ಕ್ರಮವು ಉತ್ತರ ಪ್ರದೇಶದಲ್ಲಿ ಇತ್ತೀಚಿನ ನಿರ್ದೇಶನವನ್ನು ಪ್ರತಿಬಿಂಬಿಸುತ್ತದೆ. ಅಲ್ಲಿ ಕನ್ವರ್ ಯಾತ್ರಾ ಮಾರ್ಗದಲ್ಲಿರುವ ಎಲ್ಲಾ ತಿನಿಸುಗಳ ಮಾರಾಟಗಾರರ ಮಾಲೀಕರ ಹೆಸರನ್ನು ಪ್ರದರ್ಶಿಸಲು ಕೇಳಲಾಯಿತು.

ಉತ್ತರ ಪ್ರದೇಶ ಸರ್ಕಾರವು ಶುಕ್ರವಾರ (ಜುಲೈ 19) ರಾಜ್ಯಾದ್ಯಂತ ಈ ಆದೇಶವನ್ನು ವಿಸ್ತರಿಸಿದೆ. ಆದರೆ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತಮ್ಮ ರಾಜ್ಯದಲ್ಲಿ ಈಗಾಗಲೇ ಇದೇ ರೀತಿಯ ಸೂಚನೆಗಳು ಜಾರಿಯಲ್ಲಿವೆ ಎಂದು ಹೇಳಿದರು. ಈ ಆದೇಶವು ವಿರೋಧ ಪಕ್ಷಗಳು ಮತ್ತು ಆಡಳಿತ ಮೈತ್ರಿಕೂಟದ ಕೆಲವು ಸದಸ್ಯರಿಂದ ಟೀಕೆಗಳನ್ನು ಎದುರಿಸಿದೆ, ಇದು ಮುಸ್ಲಿಂ ವ್ಯಾಪಾರಿಗಳನ್ನು ಗುರಿಯಾಗಿಸುತ್ತದೆ ಎಂದು ವಾದಿಸುತ್ತಾರೆ.

ಇದನ್ನೂ ಓದಿ; ಮೂಡಾ ಹಗರಣ ಆರೋಪ : ಸಿಎಂ ಸಿದ್ದರಾಮಯ್ಯ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...