Homeಮುಖಪುಟಭಾರತದ ವಾಯುಮಾಲಿನ್ಯ ಬಿಕ್ಕಟ್ಟಿಗೆ ಮೋದಿ ಸರ್ಕಾರದ 'ಕಳಪೆ ನೀತಿ ನಿರೂಪಣೆ' ಕಾರಣ: ಜೈರಾಮ್ ರಮೇಶ್

ಭಾರತದ ವಾಯುಮಾಲಿನ್ಯ ಬಿಕ್ಕಟ್ಟಿಗೆ ಮೋದಿ ಸರ್ಕಾರದ ‘ಕಳಪೆ ನೀತಿ ನಿರೂಪಣೆ’ ಕಾರಣ: ಜೈರಾಮ್ ರಮೇಶ್

- Advertisement -
- Advertisement -

ಮೋದಿ ಸರ್ಕಾರವು “ಕಳಪೆ ನೀತಿ ನಿರೂಪಣೆ”ಯಿದ ವಾಯುಮಾಲಿನ್ಯವನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದು, “ಗಂಭೀರ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟುನ್ನು ಎದುರಿಸಲು ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಸ್ಥಳೀಯ ಸಂಸ್ಥೆಗಳು ಮತ್ತು ರಾಜ್ಯ ಸರ್ಕಾರಗಳನ್ನು ಸಜ್ಜುಗೊಳಿಸಬೇಕು” ಎಂದು ಭಾನುವಾರ ಆಗ್ರಹಿಸಿದ್ದಾರೆ.

“ಭಾರತದಲ್ಲಿನ ಕೇವಲ 10 ನಗರಗಳಲ್ಲಿ ಪ್ರತಿ ವರ್ಷ ಸುಮಾರು 34,000 ಸಾವುಗಳು ಸಮಭವಿಸಿವೆ. ಈ ತಿಂಗಳ ಆರಂಭದಲ್ಲಿನ ಎಲ್ಲ ಸಾವುಗಳಲ್ಲಿ 7.2 ರಷ್ಟು ವಾಯುಮಾಲಿನ್ಯಕ್ಕೆ ಸಂಬಂಧಿಸಿವೆ ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನದ ಉಸ್ತುವಾರಿ ಜೈರಾಮ್ ರಮೇಶ್ ಹೇಳಿದ್ದಾರೆ.

ದೆಹಲಿಯ ವಿಜ್ಞಾನ ಮತ್ತು ಪರಿಸರ ಕೇಂದ್ರದ ಹೊಸ ಅಧ್ಯಯನವು ರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮವನ್ನು (ಎನ್‌ಸಿಎಪಿ) ಮೌಲ್ಯಮಾಪನ ಮಾಡಿದೆ ಮತ್ತು ಈ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಿಗೆ ಕಾರಣವಾದ ನೀತಿ ಅವ್ಯವಸ್ಥೆಯನ್ನು ಬೆಳಕಿಗೆ ತಂದಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“15 ನೇ ಹಣಕಾಸು ಆಯೋಗದ ಅನುದಾನ ಸೇರಿದಂತೆ ‘ಎನ್‌ಸಿಎಪಿ’ಯ ಪ್ರಸ್ತುತ ಬಜೆಟ್ ಸುಮಾರು 10,500 ಕೋಟಿ ರೂ ಆಗಿದೆ. ಇದು 131 ನಗರಗಳಲ್ಲಿ ಹರಡಿದೆ! ಆದ್ದರಿಂದ ಕಾರ್ಯಕ್ರಮವು ಹತಾಶವಾಗಿ ಕಡಿಮೆ ಹಣವನ್ನು ಹೊಂದಿದೆ. ಈ ಅಲ್ಪ ಮೊತ್ತದಲ್ಲಿ ಕೇವಲ 64% ನಿಧಿಗಳು ಮಾತ್ರ ಬಳಸಲಾಗಿದೆ” ಎಂದು ರಮೇಶ್ ಹೇಳಿದರು.

ಎನ್‌ಸಿಎಪಿ ಅಡಿಯಲ್ಲಿ 131 ನಗರಗಳ ಪೈಕಿ ಹೆಚ್ಚಿನವುಗಳು ತಮ್ಮ ವಾಯು ಮಾಲಿನ್ಯವನ್ನು ಪತ್ತೆಹಚ್ಚಲು ಡೇಟಾವನ್ನು ಹೊಂದಿಲ್ಲ. ದತ್ತಾಂಶವನ್ನು ಹೊಂದಿರುವ 46 ನಗರಗಳಲ್ಲಿ ಕೇವಲ ಎಂಟು ನಗರಗಳು ಮಾತ್ರ ಎನ್‌ಸಿಎಪಿಯ ಕಡಿಮೆ ಗುರಿಯನ್ನು ತಲುಪಿವೆ. ಆದರೆ, 22 ನಗರಗಳು ವಾಸ್ತವವಾಗಿ ವಾಯುಮಾಲಿನ್ಯವು ಹದಗೆಟ್ಟಿದೆ ಎಂದು ಅವರು ಹೇಳಿದ್ದಾರೆ.

“ಸರ್ಕಾರವು ಮುಂದೆ ಸಾಗಬೇಕಾದ ಸ್ಪಷ್ಟ ಕ್ರಮಗಳಿವೆ; ವಾಯು ಮಾಲಿನ್ಯ (ನಿಯಂತ್ರಣ ಮತ್ತು ತಡೆಗಟ್ಟುವಿಕೆ) ಕಾಯಿದೆಯು 1981 ರಲ್ಲಿ ಅಸ್ತಿತ್ವಕ್ಕೆ ಬಂದಿತು ಮತ್ತು ರಾಷ್ಟ್ರೀಯ ಸುತ್ತುವರಿದ ವಾಯು ಗುಣಮಟ್ಟ ಮಾನದಂಡಗಳನ್ನು (NAAQS) ನವೆಂಬರ್ 2009 ರಲ್ಲಿ ಜಾರಿಗೆ ತರಲಾಯಿತು. ಆದಾಗ್ಯೂ, ಕಳೆದ ಒಂದು ದಶಕದಲ್ಲಿ, ವಾಯು ಮಾಲಿನ್ಯದ ಸಾರ್ವಜನಿಕ ಆರೋಗ್ಯದ ಪರಿಣಾಮಗಳು, ಅನಾರೋಗ್ಯ ಮತ್ತು ಮರಣ ಎರಡರಲ್ಲೂ ಎಲ್ಲವೂ ತುಂಬಾ ಸ್ಪಷ್ಟವಾಗಿವೆ” ಎಂದು ಅವರು ಹೇಳಿದರು.

ಇದೀಗ ವಾಯುಮಾಲಿನ್ಯ (ನಿಯಂತ್ರಣ ಮತ್ತು ತಡೆಗಟ್ಟುವಿಕೆ) ಕಾಯಿದೆ ಮತ್ತು ಎನ್‌ಎಎಕ್ಯೂಎಸ್ ಎರಡರ ಮರುಪರಿಶೀಲನೆ ಮತ್ತು ಸಂಪೂರ್ಣ ಪುನರುಜ್ಜೀವನದ ಸಮಯವಾಗಿದೆ ಎಂದು ರಮೇಶ್ ಹೇಳಿದರು.

“ನಮ್ಮ ನಗರಗಳಿಗೆ ಕನಿಷ್ಠ 10-20 ಪಟ್ಟು ಹೆಚ್ಚು ಹಣದ ಅಗತ್ಯವಿದೆ; ಎನ್‌ಸಿಎಪಿ ಅನ್ನು 25,000 ಕೋಟಿ ರೂ.ಗಳ ಕಾರ್ಯಕ್ರಮವನ್ನಾಗಿ ಮಾಡಬೇಕು ಎನ್‌ಸಿಎಪಿ ‘ಪಿಎಂ 2.5’ ಹಂತಗಳ ಮಾಪನವನ್ನು ಅಳವಡಿಸಿಕೊಳ್ಳಬೇಕು. ಏಕೆಂದರೆ, ಕಾರ್ಯಕ್ಷಮತೆಯ ಮಾನದಂಡವು ಎನ್‌ಸಿಎಪಿ ಹೊರಸೂಸುವಿಕೆಯ ಪ್ರಮುಖ ಮೂಲಗಳತ್ತ ತನ್ನ ಗಮನವನ್ನು ಮರುಹೊಂದಿಸಬೇಕು” ಎಂದು ಅವರು ಹೇಳಿದರು.

ಎನ್‌ಸಿಎಪಿ ಗಾಳಿಯ ಗುಣಮಟ್ಟ ನಿಯಂತ್ರಣಕ್ಕಾಗಿ ಪ್ರಾದೇಶಿಕ/ಏರ್‌ಶೆಡ್ ವಿಧಾನವನ್ನು ಅಳವಡಿಸಿಕೊಳ್ಳಬೇಕು. ಪುರಸಭೆ ಮತ್ತು ರಾಜ್ಯ ಅಧಿಕಾರಿಗಳು ನ್ಯಾಯವ್ಯಾಪ್ತಿಯಲ್ಲಿ ಸಹಕರಿಸಲು ಅಗತ್ಯವಿರುವ ಆಡಳಿತ ಯೋಜನೆ ಮತ್ತು ಸಂಪನ್ಮೂಲಗಳನ್ನು ಹೊಂದಿರಬೇಕು ಎಂದು ರಮೇಶ್ ಹೇಳಿದರು.

“ಎನ್‌ಸಿಎಪಿಗೆ ಕಾನೂನು ಬೆಂಬಲ, ಜಾರಿ ಕಾರ್ಯವಿಧಾನ ಮತ್ತು ದೇಶದ ಪ್ರತಿ ನಗರಕ್ಕೆ ಗಂಭೀರ ದತ್ತಾಂಶ ಮಾನಿಟರಿಂಗ್ ಸಾಮರ್ಥ್ಯವನ್ನು ನೀಡಬೇಕು, ಪ್ರಸ್ತುತ ಗಮನವನ್ನು ಕೇವಲ ‘ಸಾಧನೆ ಮಾಡದ’ ನಗರಗಳ ಮೇಲೆ ಮಾತ್ರ ನೀಡಬೇಕು” ಎಂದು ಅವರು ವಾದಿಸಿದರು.

“ಕಲ್ಲಿದ್ದಲು ವಿದ್ಯುತ್ ಸ್ಥಾವರಗಳಿಗೆ ವಾಯು ಮಾಲಿನ್ಯ ನಿಯಮಾವಳಿಗಳನ್ನು ತಕ್ಷಣವೇ ಜಾರಿಗೊಳಿಸಬೇಕು. ಎಲ್ಲಾ ವಿದ್ಯುತ್ ಸ್ಥಾವರಗಳು 2024 ರ ಅಂತ್ಯದೊಳಗೆ ಫ್ಲೋರೈಡ್ ಗ್ಯಾಸ್ ಡಿಸಲ್ಫ್ರೈಸರ್ (ಎಫ್ಜಿಡಿ) ಅನ್ನು ಅಳವಡಿಸಬೇಕು” ಎಂದು ಸಲಹೆ ನಿಡಿದರು.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಸ್ವಾತಂತ್ರ್ಯವನ್ನು ಮರುಸ್ಥಾಪಿಸಬೇಕು ಮತ್ತು ಕಳೆದ 10 ವರ್ಷಗಳಲ್ಲಿ ಮಾಡಿದ “ಜನವಿರೋಧಿ ಪರಿಸರ ಕಾನೂನು ತಿದ್ದುಪಡಿಗಳನ್ನು” ಹಿಂಪಡೆಯಬೇಕು ಎಂದು ರಮೇಶ್ ಒತ್ತಾಯಿಸಿದರು.

“ಮುಂಬರುವ ಕೇಂದ್ರ ಬಜೆಟ್ ಈ ಗಂಭೀರ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಭಾರತದ ಸ್ಥಳೀಯ ಸಂಸ್ಥೆಗಳು, ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರವನ್ನು ಸಂಪನ್ಮೂಲ ಮತ್ತು ಸಜ್ಜುಗೊಳಿಸಲು ಮುಂದಿನ ಹಾದಿಯನ್ನು ಒದಗಿಸಬೇಕು” ಎಂದು ಅವರು ಹೇಳಿದರು.

ಇದನ್ನೂ ಓದಿ; ಕೇರಳ: ನಿಪಾ ವೈರಸ್ ಸೋಂಕಿತ 14 ವರ್ಷದ ಬಾಲಕ ಹೃದಯ ಸ್ತಂಭನದಿಂದ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...