Homeಕರ್ನಾಟಕಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಅಪರಾಧವಲ್ಲ ಎಂದಿದ್ದ ಆದೇಶ ಹಿಂಪಡೆದ ಹೈಕೋರ್ಟ್

ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಅಪರಾಧವಲ್ಲ ಎಂದಿದ್ದ ಆದೇಶ ಹಿಂಪಡೆದ ಹೈಕೋರ್ಟ್

- Advertisement -
- Advertisement -

ಆನ್‌ಲೈನ್‌ನಲ್ಲಿ ಮಕ್ಕಳ ಅಶ್ಲೀಲ ವಿಡಿಯೋ/ಚಿತ್ರ ವೀಕ್ಷಿಸಿದ ವ್ಯಕ್ತಿಯ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ 67 ಬಿ ಅಡಿ ಪ್ರಕರಣ ದಾಖಲಿಸಲಾಗದು ಎಂದು ಜುಲೈ 10ರಂದು ನೀಡಿದ್ದ ತನ್ನ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಹಿಂಪಡೆದಿದೆ.

ಐಟಿ ಕಾಯ್ದೆಯ ಸೆಕ್ಷನ್‌ 67ಬಿ (ಬಿ) ಅನ್ನು ಪರಿಗಣಿಸದೆ ಆದೇಶ ನೀಡಲಾಗಿದ್ದು, ಇದು ತಪ್ಪಾಗಿದೆ ಎಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಈ ಹಿಂದೆ ನೀಡಿದ್ದ ತನ್ನದೇ ಆದೇಶವನ್ನು ಹಿಂಪಡೆದಿದೆ.

ಅಶ್ಲೀಲ ವೆಬ್‌ಸೈಟ್‌ ವೀಕ್ಷಿಸುವುದು ಮಾಹಿತಿ ಪ್ರಸಾರ ಅಥವಾ ವರ್ಗಾವಣೆ ಮಾಡಿದಂತಾಗುವುದಿಲ್ಲ ಎಂದು ನ್ಯಾಯಾಲಯವು ಅರ್ಜಿದಾರ ಇನಾಯುತುಲ್ಲಾ ಎನ್‌ ವಿರುದ್ಧ ಪ್ರಕರಣ ರದ್ದುಪಡಿಸಿತ್ತು. ಐಟಿ ಕಾಯ್ದೆಯ ಸೆಕ್ಷನ್‌ 67ಬಿ ಅಡಿ ಅಪರಾಧವಾಗಬೇಕಾದರೆ ಮಾಹಿತಿ ಪ್ರಸಾರ ಅಥವಾ ವರ್ಗಾವಣೆ ಮಾಡಬೇಕು ಎಂದು ಹೇಳಿತ್ತು.

ಆದೇಶ ಹಿಂಪಡೆಯುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೆಮೊ ವಿಚಾರಣೆ ನಡೆಸಿದ ನ್ಯಾ. ನಾಗಪ್ರಸನ್ನ ಅವರು, ಐಟಿ ಕಾಯ್ದೆಯ ಸೆಕ್ಷನ್‌ 67 ಬಿ (ಎ) ಆಧರಿಸಿ ಆದೇಶ ನೀಡಲಾಗಿತ್ತು. ಆದರೆ, ಕಾಯ್ದೆಯೆ ಸೆಕ್ಷನ್‌ 67ಬಿ (ಬಿ) ಅಡಿ ವಿದ್ಯುನ್ಮಾನ ಮಾದರಿಯಲ್ಲಿ ಮಕ್ಕಳನ್ನು ಅಶ್ಲೀಲ, ಲೈಂಗಿಕವಾಗಿ ಬಿಂಬಿಸುವ ಟೆಕ್ಸ್ಟ್‌ ಅಥವಾ ಡಿಜಿಟಲ್‌ ಇಮೇಜ್‌ಗಳನ್ನು ಕಳುಹಿಸುವುದು, ಕೇಳುವುದು, ಅದನ್ನು ಬ್ರೌಸ್‌ ಮಾಡುವುದು, ಡೌನ್‌ಲೋಡ್‌, ಜಾಹೀರಾತು, ಪ್ರಮೋಟ್‌, ಹಂಚಿಕೆ ಮಾಡುವುದು ಸೆಕ್ಷನ್‌ 67ಬಿ ಅಡಿ ಪ್ರಕ್ರಿಯೆಗೆ ನಾಂದಿ ಹಾಡಲಿದೆ ಎಂದಿದೆ.

ಹಾಲಿ ಪ್ರಕರಣಕ್ಕೆ ಕಾಯ್ದೆಯೆ ಸೆಕ್ಷನ್‌ 67ಬಿ ಯ ಉಪ ಸೆಕ್ಷನ್‌ ಬಿ ಅನ್ವಯಿಸುತ್ತದೆ. ಮುಂದಿನ ತನಿಖೆಗೆ ಅವಕಾಶ ನೀಡದೇ ಪ್ರಕ್ರಿಯೆ ರದ್ದುಪಡಿಸಿದ್ದು, ಐಟಿ ಕಾಯಿದೆ ಸೆಕ್ಷನ್‌ 67ಬಿ (ಬಿ) ಹಿನ್ನೆಲೆಯಲ್ಲಿ ನಿಸ್ಸಂಶಯವಾಗಿ ಅರ್ಜಿದಾರರ ವಿರುದ್ಧದ ಪ್ರಕ್ರಿಯೆ ವಜಾ ಮಾಡಿರುವುದನ್ನು ಹಿಂಪಡೆಯಲು ಸಕಾರಣವಿದೆ” ಎಂದು ಪೀಠ ಹೇಳಿದೆ.

ಒಮ್ಮೆ ಆದೇಶ ನೀಡಿದ ಮೇಲೆ ಹಿಂಪಡೆಯಲು ಅಥವಾ ಅದನ್ನು ಮರು ಪರಿಶೀಲಿಸಿಲು ಸಿಆರ್‌ಪಿಸಿ ಸೆಕ್ಷನ್‌ 362 ಅಡಿ ಈ ನ್ಯಾಯಾಲಯಕ್ಕೆ ನಿರ್ಬಂಧವಿದೆ ಎಂಬ ಅರ್ಜಿದಾರರ ಪರ ವಕೀಲರ ವಾದ ತಿರಸ್ಕರಿಸಿದ ನ್ಯಾಯಾಲಯ, “ಸಿಆರ್‌ಪಿಸಿ ಸೆಕ್ಷನ್‌ 482 ಅನ್ನು ಸೆಕ್ಷನ್‌ 362 ನಿಯಂತ್ರಿಸಲಾಗದು. ಅಂತರ್ಗತವಾದ ಅಧಿಕಾರಗಳನ್ನು ಇತರೆ ನಿಬಂಧನೆಗಳು ನಿಯಂತ್ರಿಸಲಾಗದು” ಎಂದು ಹೇಳಿದೆ.

ಇದನ್ನೂ ಓದಿ : ದಲಿತ ಸಮುದಾಯದ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ; ‘ಪ್ರಬುದ್ಧ’ ಯೋಜನೆ ಪುನರಾರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....