Homeಮುಖಪುಟಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ

ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ

- Advertisement -
- Advertisement -

ಈಶಾನ್ಯ ದೆಹಲಿ ಗಲಭೆಯ ಪಿತೂರಿ ಪ್ರಕರಣದ ಆರೋಪಿಯಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌ ಖಾಲಿದ್ ಜಾಮೀನು ಅರ್ಜಿ ವಿಚಾರಣೆಯಿಂದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಅಮಿತ್‌ ವರ್ಮಾ ಹಿಂದೆ ಸರಿದಿದ್ದಾರೆ.

ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದ ಪರಿಣಾಮ ಉಮರ್‌ ಖಾಲಿದ್ ಜಾಮೀನು ಅರ್ಜಿಯನ್ನು ಜುಲೈ 24ರಂದು ಬೇರೊಂದು ಪೀಠ ವಿಚಾರಣೆ ನಡೆಸಲಿದೆ. ಉಮರ್‌ ಅವರ ಜಾಮೀನು ಅರ್ಜಿಯನ್ನು ಇಂದು (ಜು.22) ನ್ಯಾಯಮೂರ್ತಿಗಳಾದ ಪ್ರತಿಭಾ ಎಂ ಸಿಂಗ್‌ ಹಾಗೂ ಅಮಿತ್‌ ಶರ್ಮಾ ಅವರಿದ್ದ ಪೀಠ ವಿಚಾರಣೆ ನಡೆಸಬೇಕಿತ್ತು.

ತನ್ನ ಎರಡನೇ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ ಮೇ 28ರ ಆದೇಶದ ವಿರುದ್ಧ ಉಮರ್ ಖಾಲಿದ್ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಉಮರ್ ಖಾಲಿದ್ ಅವರನ್ನು ಸೆಪ್ಟೆಂಬರ್ 2020ರಲ್ಲಿ ಕ್ರಿಮಿನಲ್ ಪಿತೂರಿ, ಗಲಭೆ, ಕಾನೂನುಬಾಹಿರ ಸಭೆ ಆರೋಪದ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಲಾಗಿದೆ.

ಅಂದಿನಿಂದ ಜೈಲಿನಲ್ಲಿರುವ ಉಮರ್ ಖಾಲಿದ್ ಸಲ್ಲಿಸಿರುವ ಎರಡನೇ ಸುತ್ತಿನ ಜಾಮೀನು ಅರ್ಜಿ ಇದಾಗಿದೆ. ಖಾಲಿದ್‌ಗೆ ಎರಡು ಬಾರಿ ವಿಚಾರಣಾ ನ್ಯಾಯಾಲಯ ಮತ್ತು ಒಂದು ಬಾರಿ ಹೈಕೋರ್ಟ್ ಜಾಮೀನು ನಿರಾಕರಿಸಿವೆ.

ವಿಚಾರಣಾ ನ್ಯಾಯಾಲಯವು ಮೊದಲು ಮಾರ್ಚ್ 2022ರಲ್ಲಿ ಅವರಿಗೆ ಜಾಮೀನು ನಿರಾಕರಿಸಿತ್ತು. ನಂತರ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಅಕ್ಟೋಬರ್ 2022ರಲ್ಲಿ ಹೈಕೋರ್ಟ್ ಕೂಡ ಜಾಮೀನು ನಿರಾಕರಿಸಿತ್ತು. ನಂತರ ಖಾಲಿದ್ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ಮೇ 2023ರಲ್ಲಿ, ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರ ಪ್ರತಿಕ್ರಿಯೆ ಕೇಳಿತ್ತು. ನಂತರ ಖಾಲಿದ್‌ ಅವರ ಮನವಿಯನ್ನು 14 ಬಾರಿ ಮುಂದೂಡಿತ್ತು.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿತ್ತಲ್‌ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ ಫೆಬ್ರವರಿ 14 ರಂದು ಪ್ರಕರಣದ ವಿಚಾರಣೆ ನಡೆಸಬೇಕಿತ್ತು. ಆದರೆ, ಖಾಲಿದ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಜಾಮೀನು ಅರ್ಜಿಯನ್ನು ಹಿಂತೆಗೆದುಕೊಳ್ಳುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದರು.

ನಂತರ ಎರಡನೇ ಬಾರಿ ಉಮರ್ ಖಾಲಿದ್ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯದ ಮೊರೆ ಹೋಗಿದ್ದರು. ಮೇ 28ರಂದು ವಿಚಾರಣಾ ನ್ಯಾಯಾಲಯ ಮತ್ತೊಮ್ಮೆ ಅರ್ಜಿ ತಿರಸ್ಕರಿಸಿದೆ. ಈ ಆದೇಶದ ವಿರುದ್ದ ಖಾಲಿದ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳೇ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

ಇದನ್ನೂ ಓದಿ : ಕನ್ವರ್ ಯಾತ್ರೆ | ಹೋಟೆಲ್, ಅಂಗಡಿ ಮಾಲೀಕರ ಹೆಸರು ಪ್ರದರ್ಶನ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...