Homeಮುಖಪುಟಧನ್ಯಾ ರಾಜೇಂದ್ರನ್ ವಿರುದ್ಧದ ಅವಹೇಳನಕಾರಿ ವಿಡಿಯೋ, ಪೋಸ್ಟ್‌ಗಳನ್ನು ತೆಗೆದುಹಾಕಲು ಹೈಕೋರ್ಟ್ ಆದೇಶ

ಧನ್ಯಾ ರಾಜೇಂದ್ರನ್ ವಿರುದ್ಧದ ಅವಹೇಳನಕಾರಿ ವಿಡಿಯೋ, ಪೋಸ್ಟ್‌ಗಳನ್ನು ತೆಗೆದುಹಾಕಲು ಹೈಕೋರ್ಟ್ ಆದೇಶ

- Advertisement -
- Advertisement -

‘ದಿ ನ್ಯೂಸ್ ಮಿನಿಟ್’ ಸುದ್ದಿ ಸಂಸ್ಥೆಯ ಸಂಸ್ಥಾಪಕಿ ಧನ್ಯಾ ರಾಜೇಂದ್ರನ್ ಮತ್ತು ಡಿಜಿಪಬ್ ನ್ಯೂಸ್ ಇಂಡಿಯಾ ಫೌಂಡೇಶನ್ ವಿರುದ್ಧದ ಅವಹೇಳನಕಾರಿ ಯೂಟ್ಯೂಬ್ ವಿಡಿಯೋಗಳು ಮತ್ತು ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.

ನ್ಯಾಯಮೂರ್ತಿ ವಿಕಾಸ್ ಮಹಾಜನ್ ಅವರು ಧನ್ಯಾ ರಾಜೇಂದ್ರನ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಿದ್ದಾರೆ.

ಮಾಧ್ಯಮ ಸಂಸ್ಥೆಗಳಾದ ಕರ್ಮ ನ್ಯೂಸ್, ಜನ್ಮಭೂಮಿ, ಜನಂ ಟಿವಿ ಮತ್ತು ನ್ಯೂಸ್ ಇಂಡಿಯಾ ಮಲಯಾಳಂನ ಲೇಖನಗಳು ಮತ್ತು ವಿಡಿಯೋಗಳು ಧನ್ಯಾ ರಾಜೇಂದ್ರನ್ ಅವರು “ಭಾರತದಲ್ಲಿ ನಾಗರಿಕ ಸಂಘರ್ಷವನ್ನು ಸೃಷ್ಟಿಸುವ ಗುರಿಯನ್ನು ಹೊಂದಿರುವ ಜಾರ್ಜ್ ಸೊರೊಸ್‌ನ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರ ದೇಶ ವಿರೋಧಿ ಚಟುವಟಿಕೆಗಳ ಬಗ್ಗೆ ಕೇಂದ್ರ ಏಜೆನ್ಸಿಗಳಿಗೆ ಮಾಹಿತಿ ಸಿಕ್ಕಿದೆ. ‘ಕಟ್ಟಿಂಗ್ ಸೌತ್-2023’ ಎಂಬ ಅವರ ಕಾರ್ಯಕ್ರಮ ಭಾರತವನ್ನು ವಿಭಜಿಸುವ ಉದ್ದೇಶ ಹೊಂದಿದೆ” ಎಂದು ಆರೋಪಿಸಿತ್ತು.

ಕಳೆದ ವರ್ಷ ಮಾರ್ಚ್ 25 ರಂದು ರಾಜೇಂದ್ರನ್ ಅವರು ಸ್ವತಂತ್ರ ಮಾಧ್ಯಮ ವಾಹಿನಿಗಳೊಂದಿಗೆ “ಕಟಿಂಗ್ ಸೌತ್ 2023” ಎಂಬ ಶೀರ್ಷಿಕೆಯ ಸಮಾವೇಶವನ್ನು ಆಯೋಜಿಸಿದ ನಂತರ ಅವರ ವಿರುದ್ದ ಆರೋಪಗಳನ್ನು ಮಾಡಲಾಗಿತ್ತು.

ರೂ. 2 ಕೋಟಿ ಮಾನನಷ್ಟ ಪರಿಹಾರ, ಕಡ್ಡಾಯ ತಡೆಯಾಜ್ಞೆ ಮತ್ತು ಕರ್ಮ ನ್ಯೂಸ್‌ ಕ್ಷಮೆಯಾಚಿಸುವಂತೆ ಕೋರಿ ಧನ್ಯಾ ರಾಜೇಂದ್ರನ್ ಮತ್ತು ಡಿಜಿಪಬ್ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಧನ್ಯಾ ರಾಜೇಂದ್ರನ್ ವಿರುದ್ಧದ ಅವಹೇಳನಕಾರಿ ವಿಡಿಯೋ, ಪೋಸ್ಟ್‌ಗಳನ್ನು ತೆಗೆದು ಹಾಕಲು ಆದೇಶಿಸಿದೆ.

2023ರಲ್ಲಿ, ನ್ಯೂಸ್‌ಲಾಂಡ್ರಿ ಮತ್ತು ಕನ್‌ಫ್ಲೂಯೆನ್ಸ್ ಮೀಡಿಯಾ ಕೂಡ ದೆಹಲಿ ಹೈಕೋರ್ಟ್‌ ಮೊರೆ ಹೋಗಿತ್ತು. ‘ಕಟಿಂಗ್ ಸೌತ್- 2023’ ಎಂಬ ಹೆಸರು ವಿಭಜಿಸುವ ಉದ್ದೇಶವನ್ನು ಸೂಚಿಸುವುದಿಲ್ಲ. ಬದಲಾಗಿ, ಕಟಿಂಗ್ ಸೌತ್ ಎಂಬ ಹೆಸರು “ಕಟಿಂಗ್ ಚಾಯ್” ಮತ್ತು “ಕಟಿಂಗ್ ಎಡ್ಜ್” ಪದಗಳ ನಾಟಕವನ್ನು ಆಧರಿಸಿದೆ ಎಂದಿತ್ತು.

ಇದನ್ನೂ ಓದಿ : ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...