Homeಕರ್ನಾಟಕಕಲಬುರ್ಗಿ, ಗೌರಿ ಹತ್ಯೆ ಪ್ರಕರಣ : ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ ಸ್ಥಾಪಿಸದ ಸರ್ಕಾರದ ನಡೆಗೆ ಹೈಕೋರ್ಟ್‌...

ಕಲಬುರ್ಗಿ, ಗೌರಿ ಹತ್ಯೆ ಪ್ರಕರಣ : ವಿಚಾರಣೆಗೆ ತ್ವರಿತಗತಿ ನ್ಯಾಯಾಲಯ ಸ್ಥಾಪಿಸದ ಸರ್ಕಾರದ ನಡೆಗೆ ಹೈಕೋರ್ಟ್‌ ಅಸಮಾಧಾನ

- Advertisement -
- Advertisement -

ಹಿರಿಯ ಸಂಶೋಧಕ ಎಂ.ಎಂ ಕಲಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ವಿಚಾರಣೆಗೆ ತ್ವರಿತಗತಿಯ ವಿಶೇಷ ನ್ಯಾಯಾಲಯ ಸ್ಥಾಪಿಸುವ ಸಂಬಂಧ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ (ಜು.22) ಹೈಕೋರ್ಟ್‌ ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ಪ್ರಕರಣದ ನಾಲ್ಕನೇ ಆರೋಪಿಯಾಗಿರುವ ವಾಸುದೇವ್‌ ಭಗವಾನ್‌ ಸೂರ್ಯವಂಶಿ, ಆರನೇ ಆರೋಪಿ ಅಮಿತ್‌ ಬಡ್ಡಿ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ಜಿ ಉಮಾ ಅವರ ಏಕಸದಸ್ಯ ಪೀಠ ನಡೆಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ “ಕಲಬುರ್ಗಿ ಅವರ ಕೊಲೆಗೆ ಬಳಸಲಾದ ವಾಹನ ಕಳವು ಮಾಡಲಾದ ಆರೋಪ ಮಾತ್ರ ಅರ್ಜಿದಾರರ ಮೇಲಿದೆ. ಈ ಸಂಬಂಧ ಆರೋಪಿಗಳು ಕಳೆದ ಆರು ವರ್ಷಗಳಿಂದ ಜೈಲಿನಲ್ಲಿದ್ದಾರೆ. ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲೂ ಆರೋಪಿಗಳ ಪಾತ್ರವಿದೆ. ಈ ಸಂಬಂಧ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಆರಂಭಿಸುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ಆದರೆ, ಈವರೆಗೂ ಆ ಕೆಲಸವಾಗಿಲ್ಲ. ಕಲಬುರ್ಗಿ ಅವರ ಪ್ರಕರಣದಲ್ಲಿ 138 ಸಾಕ್ಷ್ಯಗಳ ಪೈಕಿ ಕೇವಲ 10 ಸಾಕ್ಷ್ಯಗಳ ವಿಚಾರಣೆ ಮಾತ್ರ ಈಗ ಮುಗಿದಿದೆ. ಉಳಿದ ಸಾಕ್ಷಿಗಳ ವಿಚಾರಣೆ ಸದ್ಯಕ್ಕೆ ಮುಗಿಯುವ ಸಾಧ್ಯತೆ ಇಲ್ಲ. ಹೀಗಾಗಿ, ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು “ಕಳೆದ ಮಾರ್ಚ್‌ನಲ್ಲಿ ಪ್ರಕರಣದಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನಿರಾಕರಿಸುವ ಸಂದರ್ಭದಲ್ಲಿ ಪ್ರಾಸಿಕ್ಯೂಷನ್‌ ವಿಶೇಷ ನ್ಯಾಯಾಲಯ ಆರಂಭಿಸುವುದಾಗಿ ಹೇಳಿತ್ತು. ಈಗ ಜುಲೈ ಅಂತ್ಯ ಸಮೀಪಿಸುತ್ತಿದ್ದು, ಇದುವರೆಗೂ ವಿಶೇಷ ನ್ಯಾಯಾಲಯವೇಕೆ ಸ್ಥಾಪನೆಯಾಗಿಲ್ಲ?” ಎಂದು ಪ್ರಶ್ನಿಸಿತು.

ಆಗ ಪ್ರಾಸಿಕ್ಯೂಷನ್‌ ಪರ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್‌ ನಾಯಕ್‌ ಅವರು “ಹೈಕೋರ್ಟ್‌ನಲ್ಲಿ ಸಂಬಂಧಿತರ ಜೊತೆ ಅಡ್ವೊಕೇಟ್‌ ಜನರಲ್‌ ಮಾತುಕತೆ ನಡೆಸಿದ್ದಾರೆ. ಮುಂದಿನ ವಿಚಾರಣೆ ವೇಳೆಗೆ ಈ ವಿಚಾರದ ಬಗೆಗಿನ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು” ಎಂದರು.

ಆಗ ಪೀಠವು “ವಿಶೇಷ ನ್ಯಾಯಾಲಯ ಆರಂಭಿಸಿ, ನ್ಯಾಯಾಧೀಶರನ್ನು ನೇಮಿಸಿ ಅಧಿಸೂಚನೆ ಹೊರಡಿಸಬೇಕು. ಸರ್ಕಾರ ಹೇಗೆ ಕೆಲಸ ಮಾಡುತ್ತದೆ ಎಂಬುದು ನಮಗೆ ಗೊತ್ತಿದೆ ಬಿಡಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ, ಅರುಣ್‌ ಶ್ಯಾಮ್‌ ಅವರು “2019ರ ಜುಲೈ 14ರಂದು ತನಿಖಾಧಿಕಾರಿ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದುವರೆಗೆ 10 ಸಾಕ್ಷ್ಯಗಳ ವಿಚಾರಣೆ ಮಾತ್ರ ನಡೆದಿದೆ. ವಿಚಾರಣೆಯ ನೆಪದಲ್ಲಿ ದೀರ್ಘಕಾಲ ಆರೋಪಿಗಳನ್ನು ಜೈಲಿನಲ್ಲಿಡಬಾರದು ಎಂದು ಸುಪ್ರೀಂ ಕೋರ್ಟ್‌ ಆದೇಶ ಮಾಡಿದೆ. ಗೌರಿ ಲಂಕೇಶ್‌ ಪ್ರಕರಣದಲ್ಲಿ ಈಗಾಗಲೇ ಕರ್ನಾಟಕ ಹೈಕೋರ್ಟ್‌ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ” ಎಂದರು.

ಆಗ ಎಸ್‌ಪಿಪಿ ಅಶೋಕ್‌ ನಾಯಕ್‌ ಅವರು “ಅರ್ಜಿದಾರರು ಕೊಲೆಯಂಥಹ ಹೀನ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಸೂರ್ಯವಂಶಿಯು ಅನಿಲ್‌ ಜೊತೆ ಸೇರಿ ಎರಡನೇ ಆರೋಪಿಯ ಸೂಚನೆಯಂತೆ ಹುಬ್ಬಳ್ಳಿಯಲ್ಲಿ ಬೈಕ್‌ ಕಳವು ಮಾಡಿದ್ದಾನೆ. ಅದನ್ನು ಕೊಲೆ ಬಳಕೆ ಮಾಡಲಾಗಿದೆ” ಎಂದು ತಿಳಿಸಿದರು.

ಆಗ ಪೀಠವು “ಕಳವು ಮಾಡಿದ ಬೈಕ್‌ ಅನ್ನು ಕೊಲೆಗೆ ಬಳಸಲಾಗಿದೆ ಎಂಬ ಆರೋಪ ಹೊರತುಪಡಿಸಿ ಅರ್ಜಿದಾರರ ಮೇಲೆ ಇರುವ ನಿರ್ದಿಷ್ಟ ಮತ್ತು ಗುರುತರ ಆರೋಪವೇನು?” ಎಂದು ಎಸ್‌ಪಿಪಿಗೆ ಪ್ರಶ್ನಿಸಿತು.

ಆಗ ಎಸ್‌ಪಿಪಿಯವರು “ಪ್ರಕರಣದ ಮೆರಿಟ್‌ ಮೇಲೆ ವಾದಿಸಲು ಒಂದು ದಿನ ಕಾಲಾವಕಾಶ ನೀಡಬೇಕು” ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ “ಮೆರಿಟ್‌ ಮೇಲೆ ವಾದಿಸಲು ಹೇಳುತ್ತಿಲ್ಲ. ಮೆರಿಟ್‌ ಮೇಲಿನ ವಾದ ಆಲಿಸುವುದು ವಿಚಾರಣಾಧೀನ ನ್ಯಾಯಾಲಯದ ವ್ಯಾಪ್ತಿಗೆ ಬರುತ್ತದೆ. ಅದು ಹೈಕೋರ್ಟ್‌ ಕೆಲಸವಲ್ಲ. ಆರೋಪಪಟ್ಟಿ ಸಲ್ಲಿಸುವಾಗ ಸಂಗ್ರಹಿಸಿರುವ ದಾಖಲೆಯನ್ನು ಆಧರಿಸಿ, ಮೇಲ್ನೋಟಕ್ಕೆ ಪ್ರಕರಣವಿದೆ ಎಂದು ಸಾಬೀತುಪಡಿಸಿ” ಎಂದಿತು. ಅಂತಿಮವಾಗಿ ಎಸ್‌ಪಿಪಿ ಕೋರಿಕೆಯಂತೆ ಇಂದು (ಜು.23) ಮಧ್ಯಾಹ್ನಕ್ಕೆ ನ್ಯಾಯಾಲಯ ವಿಚಾರಣೆ ಮುಂದೂಡಿತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ‘ಶೈಕ್ಷಣಿಕ ವಲಯದ ಮಹಾ ದುರಂತ’: ಕೇಂದ್ರೀಯ ವಿವಿಯಲ್ಲಿ ಆರ್‌ಎಸ್‌ಎಸ್‌ ಸಭೆಗೆ ಜಾಗೃತ ನಾಗರಿಕರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...