Homeಮುಖಪುಟ‘ಅಭಿಜಿತ್ ಬ್ಯಾನರ್ಜಿ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ’ : ರಾಹುಲ್ ಗಾಂಧಿ

‘ಅಭಿಜಿತ್ ಬ್ಯಾನರ್ಜಿ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ’ : ರಾಹುಲ್ ಗಾಂಧಿ

- Advertisement -
- Advertisement -

ಅರ್ಥಶಾಸ್ತ್ರ ವಿಷಯದಲ್ಲಿ ನೊಬೆಲ್ ಪ್ರಶಸ್ತಿ ಪಡೆದು ಭಾರತದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ ಅಭಿಜಿತ್ ಬ್ಯಾನರ್ಜಿ ಬಗ್ಗೆ ಬಿಜೆಪಿ ಸಚಿವ ಪೀಯೂಷ್ ಗೋಯಲ್ ನೀಡಿದ್ದ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಇಡೀ ದೇಶವೇ ಅಭಿಜಿತ್ ಬ್ಯಾನರ್ಜಿ ಅವರ ಕಾರ್ಯವನ್ನು ಮೆಚ್ಚಿಕೊಂಡಿದ್ದು, ಲಕ್ಷಾಂತರ ಭಾರತೀಯರು ಅಭಿಜಿತ್ ಅವರ ಬಗ್ಗೆ ಹೆಮ್ಮೆ ಪಡುತ್ತಿದ್ದಾರೆ. ಇದನ್ನು ಅರ್ಥಮಾಡಿಕೊಳ್ಳಿ ಎಂದು ತಿವಿದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ಪೀಯೂಷ್ ಗೋಯಲ್, ನೊಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಎಡಪಂಥೀಯ ಚಿಂತನೆಯುಳ್ಳವರು. ಆದರೂ ಅವರು ಭಾರತೀಯರಾಗಿದ್ದು, ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದು, ಹೆಮ್ಮೆಯ ವಿಷಯ ಎಂದು ಹೇಳುವ ಮೂಲಕ ಸಂಕುಚಿತ ಪ್ರವೃತ್ತಿಯನ್ನು ಹೊರಹಾಕಿದ್ದರು. ಗೋಯಲ್ ಅವರ ವಿಚಾರಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ದೇಶದ ಜನತೆ ಪಕ್ಷ ಭೇದ ಮರೆತು, ಗೋಯಲ್ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಟ್ವೀಟ್ ಮಾಡಿ, ಗೋಯಲ್ ಅವರ ಹೇಳಿಕೆ ಮತ್ತು ಬಿಜೆಪಿಯ ಸಂಕುಚಿತ ಮನಸ್ಥಿತಿಯನ್ನು ಖಂಡಿಸಿದ್ದಾರೆ.

ದೇಶದಲ್ಲಿ ಬಡತನ ಹೋಗಲಾಡಿಸಿ, ಭಾರತದ ಆರ್ಥಿಕತೆಗೆ ಪುಷ್ಠಿ ನೀಡಲು ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಅಳವಡಿಸಿದ್ದ ನ್ಯಾಯ್ ಯೋಜನೆಯನ್ನು ರೂಪಿಸಿದ್ದು, ಅಭಿಜಿತ್ ಬ್ಯಾನರ್ಜಿ  ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಆರ್ಥಿಕ ತಜ್ಞ ಅಭಿಜಿತ್ ಬ್ಯಾನರ್ಜಿ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

‘ಲಕ್ಷಾಂತರ ಭಾರತೀಯರು ನಿಮ್ಮ ಕೆಲಸದ ಬಗ್ಗೆ ಹೆಮ್ಮೆ ಪಡುತ್ತಾರೆ ಎಂಬುದನ್ನು ಖಚಿತಪಡಿಸಿಕೊಳ್ಳಿ. ನೀವು ದಶಕದಿಂದ ಪ್ರಯತ್ನಿಸಿದ ಕಾರ್ಯವನ್ನು ವೃತ್ತಿಪರರು, ಧರ್ಮಾಂಧರಿಗೆ ವಿವರಿಸಲು ಸಾಧ್ಯವಿಲ್ಲ. ದ್ವೇಷದಿಂದ  ಅವರೆಲ್ಲರೂ ಕುರುಡಾಗಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನೂ ಸುದ್ದಿವಾಹಿನಿಯೊಂದರ ಜತೆ ಮಾತನಾಡಿದ ಆರ್ಥಿಕ ತಜ್ಞ ಅಭಿಜಿತ್ ಬ್ಯಾನರ್ಜಿ, ‘ನಾನು ವೃತ್ತಿಪರನಾಗಿದ್ದು, ಎಲ್ಲರೊಂದಿಗೂ ವೃತ್ತಿಪರನಾಗಿರಲು ಬಯಸುತ್ತೇನೆ. ಕಾಂಗ್ರೆಸ್ ಪಕ್ಷದಂತೆ, ಬಿಜೆಪಿ ಸರ್ಕಾರವು ನಿರ್ದಿಷ್ಟ ಆದಾಯ ಹೆಚ್ಚಿಸುವ ಬಗ್ಗೆ ಕೇಳಿದ್ದರೆ, ನಾನು ಸತ್ಯವನ್ನು ಹೇಳುತ್ತಿರಲಿಲ್ಲವೇ.. ಎಂದು ಪ್ರಶ್ನಿಸಿದ್ದಾರೆ. ಆರ್ಥಿಕ ಚಿಂತನೆಯಲ್ಲಿ ಯಾವುದೇ ಪಕ್ಷಪಾತ ಮಾಡುವುದಿಲ್ಲ. ಪ್ರಧಾನಿ ಮೋದಿ ಅವರು ಗುಜರಾತ್ ಸಿಎಂ ಆಗಿದ್ದಾಗ, ಮಾಲಿನ್ಯ ಮಂಡಳಿಯಲ್ಲಿ ಕೆಲಸ ಮಾಡಿದ್ದನ್ನು ಬ್ಯಾನರ್ಜಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...