Homeಮುಖಪುಟಸಂಸತ್ತಿನ ಸಂಕೀರ್ಣದಲ್ಲಿ ರಾಹುಲ್ ಗಾಂಧಿ ಜತೆಗೆ ಸಭೆ ನಡೆಸಿದ ಪ್ರತಿಭಟನಾ ನಿರತ ರೈತರು

ಸಂಸತ್ತಿನ ಸಂಕೀರ್ಣದಲ್ಲಿ ರಾಹುಲ್ ಗಾಂಧಿ ಜತೆಗೆ ಸಭೆ ನಡೆಸಿದ ಪ್ರತಿಭಟನಾ ನಿರತ ರೈತರು

- Advertisement -
- Advertisement -

ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀತಿಯನ್ನು ಪರಿಷ್ಕರಿಸಲು ಸರ್ಕಾರವನ್ನು ಒತ್ತಾಯಿಸುತ್ತಿರುವ ರೈತರು ಬುಧವಾರ ಬೆಳಿಗ್ಗೆ ಸಂಸತ್ತಿನ ಸಂಕೀರ್ಣದಲ್ಲಿ ಕಾಂಗ್ರೆಸ್ ಸಂಸದ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಗಾಂಧಿ ಅವರು ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದ 12 ರೈತ ಮುಖಂಡರ ನಿಯೋಗವನ್ನು ಭೇಟಿ ಮಾಡಿದರು.

ಕಾಂಗ್ರೆಸ್‌ನ ಹಿರಿಯ ನಾಯಕರಾದ ಕೆಸಿ ವೇಣುಗೋಪಾಲ್ ಮತ್ತು ದೀಪೇಂದರ್ ಸಿಂಗ್ ಹೂಡಾ ಅವರು ಸಂಸದರಾದ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಮತ್ತು ಸುಖಜಿಂದರ್ ಸಿಂಗ್ ರಾಂಧವಾ ಅವರು ಸಭೆಯಲ್ಲಿ ಭಾಗವಹಿಸಿದ್ದರು.

ರೈತರನ್ನು ಒಳಗೆ ಬಿಡದ ಕಾರಣ ಸಭೆಗೂ ಮುನ್ನವೇ ಗೊಂದಲ ಉಂಟಾಯಿತು. “ನಾವು ಅವರನ್ನು ಆಹ್ವಾನಿಸಿದ್ದೇವೆ.. ಆದರೆ, ಅವರು ಸಂಸತ್ತಿನ ಒಳಗೆ ಅವರನ್ನು ಅನುಮತಿಸುತ್ತಿಲ್ಲ. ಬಹುಶಃ ಅವರು ರೈತರಾಗಿರುವ ಕಾರಣಕ್ಕೆ ಇರಬಹುದು.. ಇದಕ್ಕೆ ಕಾರಣವನ್ನು ನೀವು ಪ್ರಧಾನಿಯವರನ್ನು ಕೇಳಬೇಕಾಗುತ್ತದೆ..” ಎಂದು ರಾಹುಲ್ ಗಾಂಧಿ ಹೇಳಿದರು.

“ರಾಹುಲ್ ಗಾಂಧಿಯವರು ಸಂಸತ್ತಿನ ಒಳಗೆ ರೈತರ ಪರವಾಗಿ ಧ್ವನಿ ಎತ್ತುತ್ತಾರೆ…” ಎಂದು ಸಭೆಯ ನಂತರ ವಾರಿಂಗ್ ತಿಳಿಸಿದರು. ರೈತರು ದೆಹಲಿಯಲ್ಲಿ ಮತ್ತೊಂದು ಮೆರವಣಿಗೆಯನ್ನು ಯೋಜಿಸುತ್ತಿದ್ದಾರೆ ಎಂಬ ವರದಿಗಳ ಮೇಲೆ, ಅವರು ದೆಹಲಿಗೆ ಬಂದು ಪ್ರತಿಭಟಿಸಲು ಎಲ್ಲ ಹಕ್ಕುಗಳನ್ನು ಹೊಂದಿದ್ದಾರೆ. ಖಾಸಗಿ ಸದಸ್ಯರ ಮಸೂದೆ ಅಗತ್ಯವಿದ್ದರೆ ನಾವು ಅದನ್ನು ಸಹ ತರುತ್ತೇವೆ ಎಂದರು.

ರೈತರಲ್ಲಿ ಒಬ್ಬರಾದ ಜಗಜಿತ್ ಸಿಂಗ್ ದಲ್ಲೆವಾಲ್ ಮಾತನಾಡಿ, “ಸರ್ಕಾರ ಇದುವರೆಗೆ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ; ಸ್ವಾಮಿನಾಥನ್ ವರದಿ ಅನುಷ್ಠಾನ ಅತ್ಯಗತ್ಯ. ನಾವು ದೆಹಲಿ ಕಡೆಗೆ ಪಾದಯಾತ್ರೆಯನ್ನು ಮುಂದುವರಿಸುತ್ತೇವೆ..” ಎಂದು ಅವರು ತಿಳಿಸಿದರು.

ಇದಕ್ಕೂ ಮೊದಲು, ರೈತರು ತಮ್ಮ ರಾಜ್ಯಗಳಲ್ಲಿನ ಸಮಸ್ಯೆಗಳ ಬಗ್ಗೆ ರಾಹುಲ್ ಗಾಂಧಿಯವರೊಂದಿಗೆ ಮಾತನಾಡಿದರು. ದೀರ್ಘಾವಧಿಯ ಬೇಡಿಕೆಗಳನ್ನು ಈಡೇರಿಸಲು ಖಾಸಗಿ ಸದಸ್ಯರ ಮಸೂದೆಯನ್ನು ಪರಿಚಯಿಸಲು ಕೇಳಿಕೊಂಡರು. ಎಂಎಸ್‌ಪಿಯನ್ನು ಪರಿಷ್ಕರಿಸಲು ಮತ್ತು ಕಾನೂನು ಬೆಂಬಲವನ್ನು ಖಚಿತಪಡಿಸಿಕೊಳ್ಳುವ ಈ ಬೇಡಿಕೆಗಳು 2020 ರಲ್ಲಿ ಪ್ರಾರಂಭವಾದಾಗಿನಿಂದ ಅವರ ಪ್ರತಿಭಟನೆಯ ಮುಖ್ಯ ಭಾಗವಾಗಿದೆ.

ದೇಶದಾದ್ಯಂತದ ರೈತ ಸಂಘಗಳು ಎಂಎಸ್‌ಪಿಯನ್ನು ಬಯಸುತ್ತವೆ, ಸ್ವಾಮಿನಾಥನ್ ಆಯೋಗದ ಸಿ2+50 ಸೂತ್ರವನ್ನು ಆಧರಿಸಿರಬೇಕು, ಇದು ಬಂಡವಾಳದ ವೆಚ್ಚ ಮತ್ತು ಬೆಂಬಲ ಬೆಲೆಯನ್ನು ಲೆಕ್ಕಾಚಾರ ಮಾಡುವಾಗ ಭೂಮಿ ಬಾಡಿಗೆಯೂ ಸೇರಿರುತ್ತದೆ. ಆದರೆ, ಈಗಿರುವ ಎ2+ಎಫ್‌ಎಲ್‌+50 ಶೇಕಡಾ ವಿಧಾನವನ್ನು ಕೈಬಿಡಲು ಸರ್ಕಾರ ಹಿಂದೇಟು ಹಾಕುತ್ತಿದೆ.

ಸೂತ್ರವನ್ನು ಬದಲಾಯಿಸುವುದರ ಹೊರತಾಗಿ, ರೈತರು ಈ ಖರೀದಿ ಬೆಲೆಗೆ ಕಾನೂನು ಬೆಂಬಲವನ್ನು ಬಯಸುತ್ತಾರೆ; ಪ್ರಸ್ತುತ ಸರ್ಕಾರವು ಭತ್ತದ ಬೆಳೆಗೆ 10 ಪ್ರತಿಶತವನ್ನು ಮೂಲ ಬೆಲೆಗೆ ಖರೀದಿಸಲು ನಿರ್ಬಂಧವನ್ನು ಹೊಂದಿಲ್ಲ.

ಇದನ್ನೂ ಓದಿ; ನೇಪಾಳ ವಿಮಾನ ನಿಲ್ದಾಣದಲ್ಲಿ ವಿಮಾನ ಪತನ; 18 ಜನ ಪ್ರಯಾಣಿಕರು ದುರ್ಮರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...