Homeಮುಖಪುಟಉತ್ತರ ಪ್ರದೇಶ: ಹಣ್ಣು ಕೀಳಲು ನಿರಾಕರಿಸಿದ ದಲಿತ ವಿದ್ಯಾರ್ಥಿಯನ್ನು ಥಳಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕಿ

ಉತ್ತರ ಪ್ರದೇಶ: ಹಣ್ಣು ಕೀಳಲು ನಿರಾಕರಿಸಿದ ದಲಿತ ವಿದ್ಯಾರ್ಥಿಯನ್ನು ಥಳಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕಿ

- Advertisement -
- Advertisement -

ತಾನು ಹೇಳಿದಾಗ ಹಣ್ಣುಗಳನ್ನು ಕೀಳಲು ನಿರಾಕರಿಸಿದ್ದಕ್ಕಾಗಿ ನಾಲ್ಕನೇ ತರಗತಿಯ ವಿದ್ಯಾರ್ಥಿಯನ್ನು ಆತನ ಪ್ರಾಥಮಿಕ ಶಾಲಾ ಶಿಕ್ಷಕಿಯೊಬ್ಬರು ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಬರೇಲಿಯ ಕುಲಾಡಿಯಾದಲ್ಲಿ ಘಟನೆ ನಡೆದಿದ್ದು, “ತಮ್ಮ ಒಂಬತ್ತು ವರ್ಷದ ಮಗನನ್ನು ತರಗತಿಯಲ್ಲಿ ಬಂಧಿಸಿ, ಅವರ ಶಿಕ್ಷಕಿಯು ನಿಷ್ಕರುಣೆಯಿಂದ ಹೊಡೆದಿದ್ದಾರೆ” ಎಂದು ಪೋಷಕರು ಆರೋಪಿಸಿದ್ದಾರೆ.

ವಿವಾದದ ನಂತರ ಬರೇಲಿಯ ಶಿಕ್ಷಣ ಅಧಿಕಾರಿ (ಬಿಎಸ್‌ಎ) ಸೋಮವಾರ ಸಂಜೆ ಶಿಕ್ಷಕಿಯನ್ನು ಅಮಾನತುಗೊಳಿಸಿದ್ದಾರೆ. “ತನ್ನ ಮಗು ಶನಿವಾರ (ಜುಲೈ 20) ಭುಜದ ಮೇಲೆ ಮತ್ತು ಬೆನ್ನಿನಲ್ಲಿ ಹಲವಾರು ಗಾಯಗಳೊಂದಿಗೆ ಮನೆಗೆ ಮರಳಿದ” ಬಾಲಕನ ತಂದೆ ಪೋತಿರಾಮ್ ಪೊಲೀಸರಿಗೆ ತಿಳಿಸಿದ್ದಾರೆ.

“ನನ್ನ ಮಗ ಅಳುತ್ತಿದ್ದನು, ಏಕೆ ಎಂದು ಕೇಳಿದಾಗ, ಜಾಮೂನ್ ಮರ (ನೇರಳೆ) ಹತ್ತಿ ಹಣ್ಣುಗಳನ್ನು ಕೀಳುವಂತೆ ಆತನ ಶಿಕ್ಷಕಿ ರಾಣಿ ಗಂಗ್ವಾರ್ ಮಗನಿಗೆ ಬಲವಂತಪಡಿಸಿದ್ದಾರೆ. ಅವನು ನಿರಾಕರಿಸಿದಾಗ, ಆಕೆ ತರಗತಿಯೊಳಗೆ ಬಂಧಿಸಿ ಸುಮಾರು ಎರಡು ಗಂಟೆಗಳ ಕಾಲ ನಿರಂತರವಾಗಿ ಥಳಿಸಿದರು” ಎಂದು ಪೋಷಕರು ಹೇಳಿದರು.

“ನಾವು ಈ ಬಗ್ಗೆ ಪ್ರಶ್ನಿಸಿದಾಗ, ಗ್ರಾಮದ ಕೆಲವು ‘ಪ್ರಭಾವಿ’ ವ್ಯಕ್ತಿಗಳಿಂದ ರಾಜಿ ಮಾಡಿಕೊಳ್ಳುವಂತೆ ನಮ್ಮನ್ನು ಒತ್ತಾಯಿಸಿದರು. ಅದಕ್ಕೆ ನನ್ನ ಪತಿ ಒಪ್ಪಿದರು. ಆದರೆ, ನಾನು ಪೊಲೀಸರನ್ನು ಸಂಪರ್ಕಿಸಲು ನಿರ್ಧರಿಸಿದೆ. ವೈದ್ಯರು ನನ್ನ ಮಗನ ಮೇಲೆ ಗಾಯಗಳನ್ನು ದೃಢಪಡಿಸಿದ ನಂತರವೇ ಎಫ್ಐಆರ್ ದಾಖಲಿಸಲಾಗಿದೆ. ನನ್ನ ಮಗ ಇನ್ನೂ ಆಘಾತಕ್ಕೊಳಗಾಗಿದ್ದಾನೆ ಮತ್ತು ಶಾಲೆಗೆ ಹೋಗಲು ಹೆದರುತ್ತಾನೆ” ಎಂದು ಬಾಲಕನ ತಾಯಿ ಹೇಳಿದ್ದಾರೆ.

ಬಾಲಕನ ವೈದ್ಯಕೀಯ ಪರೀಕ್ಷೆಯ ನಂತರ ಎಸ್‌ಸಿ/ಎಸ್‌ಟಿ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ. “ವೈದ್ಯಕೀಯ ಪರೀಕ್ಷೆಯು ಮಗುವಿನ ಮೇಲೆ ಗಾಯಗಳನ್ನು ದೃಢಪಡಿಸಿದೆ ಮತ್ತು ನಾವು ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸುತ್ತಿದ್ದೇವೆ. ನಾವು ಇತರ ಸಿಬ್ಬಂದಿಗಳೊಂದಿಗೆ ಮಾತನಾಡುತ್ತೇವೆ ಮತ್ತು ಕಾನೂನಿನ ಪ್ರಕಾರ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಆರೋಪಿತ ಶಿಕ್ಷಕಿ ರಾಣಿ ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ; ಶಂಭು ಗಡಿ ದಿಗ್ಬಂಧನ: ರೈತರು ಮತ್ತು ಸರ್ಕಾರದ ನಡುವೆ ವಿಶ್ವಾಸದ ಕೊರತೆಯಿದೆ ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. These type of atrocities on sc/St s are routine in Buldozer Baba,s Government.
    Reported cases not even percent.99%
    Cases closed without anybody’s notice.officers themselves currupt and they are yeilding to local influenced gundas. Government will never take any serious action against culprits.

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...