Homeಮುಖಪುಟಧಾರ್ಮಿಕ ಭಾವನೆ ರಕ್ಷಿಸುವ ಉದ್ದೇಶದಿಂದ ಹೋಟೆಲ್ ಮಾಲೀಕರ ಹೆಸರು ಪ್ರದರ್ಶನ: ಯುಪಿ ಸರ್ಕಾರ

ಧಾರ್ಮಿಕ ಭಾವನೆ ರಕ್ಷಿಸುವ ಉದ್ದೇಶದಿಂದ ಹೋಟೆಲ್ ಮಾಲೀಕರ ಹೆಸರು ಪ್ರದರ್ಶನ: ಯುಪಿ ಸರ್ಕಾರ

- Advertisement -
- Advertisement -

ಕನ್ವರ್ ಮಾರ್ಗದಲ್ಲಿ ಅಂಗಡಿ ಮಾಲೀಕರ ಹೆಸರುಗಳನ್ನು ಪ್ರದರ್ಶಿಸುವ ಕುರಿತು ತನ್ನ ನಿರ್ದೇಶನವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ವಿರೋಧಿಸಿ ಉತ್ತರ ಪ್ರದೇಶ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

ಯಾತ್ರೆಯ ಸಮಯದಲ್ಲಿ ವ್ಯಕ್ತಿಗಳು ತಾವು ಸೇವಿಸುವ ಆಹಾರದ ಬಗ್ಗೆ ತಿಳುವಳಿಕೆಯುಳ್ಳ ಆಯ್ಕೆಯನ್ನು ಮಾಡಲು ಈ ಆದೇಶವನ್ನು ಹೊರಡಿಸಲಾಗಿದೆ ಎಂದು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಹೇಳಿದೆ.

“ನಿರ್ದೇಶನಗಳ ಹಿಂದಿನ ಕಲ್ಪನೆಯು ಪಾರದರ್ಶಕತೆ ಮತ್ತು ಗ್ರಾಹಕರು-ಕನ್ವಾರಿಯಾಗಳು ಯಾತ್ರೆಯ ಅವಧಿಯಲ್ಲಿ ಅವರು ಸೇವಿಸುವ ಆಹಾರದ ಬಗ್ಗೆ ತಿಳುವಳಿಕೆಯುಳ್ಳ ಆಯ್ಕೆಯಾಗಿದೆ ಎಂದು ಗಮನಿಸಬಹುದು. ಯಾತ್ರಾರ್ಥಿಗಳ ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಮಾಡಲಾಗಿದೆ” ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.

“ಲಕ್ಷ ಮತ್ತು ಕೋಟಿಗಟ್ಟಲೆ ಜನರು ಪವಿತ್ರ ನೀರನ್ನು ಹೊತ್ತುಕೊಂಡು ಬರಿಗಾಲಿನಲ್ಲಿ ನಡೆಯುತ್ತಿರುವ ಸಂದರ್ಭದಲ್ಲಿ ಅಂತಹ ಸಂದರ್ಭಗಳು ಪರಿಸ್ಥಿತಿ ಭುಗಿಲೇಳಿಯುವುದಕ್ಕೆ ಕಾರಣವಾಗಬಹುದು” ಎಂದು ಯುಪಿ ಸರ್ಕಾರವು ಅಭಿಪ್ರಾಯಪಟ್ಟಿದೆ.

“ಉದ್ದೇಶಪೂರ್ವಕ ಆಹಾರದ ಬದಲಾಗಿ, ತಿಳಿಯದೆ ಬೇರೆ ಊಟವನ್ನು ತೆಗೆದುಕೊಳ್ಳುವುದು ಇಡೀ ಯಾತ್ರೆಗೆ ಹಾನಿಯುಂಟುಮಾಡಬಹುದು. ಕನ್ವಾರಿಯಾ ಪ್ರದೇಶದಲ್ಲಿ ಶಾಂತಿ ಮತ್ತು ನೆಮ್ಮದಿ, ಇದನ್ನು ನಿರ್ವಹಿಸುವುದು ರಾಜ್ಯದ ಬದ್ಧ ಕರ್ತವ್ಯವಾಗಿದೆ” ಎಂದು ಅಫಿಡವಿಟ್‌ನಲ್ಲಿ ತಿಳಿಸಿದೆ.

ಹೆಚ್ಚುವರಿಯಾಗಿ, ಕಳೆದ ಕೆಲವು ವಾರಗಳಲ್ಲಿ ಕನ್ವರ್ ಯಾತ್ರೆಯ ಮಾರ್ಗದಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ತಿನಿಸುಗಳಲ್ಲಿ ನೀಡುವುದಕ್ಕೆ ಸಂಬಂಧಿಸಿದಂತೆ ವಾಗ್ವಾದಗಳು ನಡೆದಿವೆ ಎಂದು ಅಫಿಡವಿಟ್‌ನಲ್ಲಿ ಹೇಳಿದೆ.

ಜುಲೈ 22 ರಂದು, ಕನ್ವರ್ ಯಾತ್ರಾ ಮಾರ್ಗದ ಉದ್ದಕ್ಕೂ ತಿನಿಸುಗಳ ಮಾಲೀಕರಿಗೆ ಮಾಲೀಕರು ಮತ್ತು ಅವರು ಕೆಲಸ ಮಾಡುವ ಸಿಬ್ಬಂದಿಯ ಹೆಸರನ್ನು ಪ್ರದರ್ಶಿಸುವಂತೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಪೊಲೀಸರ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿತ್ತು. ರಾಜ್ಯ ಸರ್ಕಾರದ ಆದೇಶಗಳು ತಾರತಮ್ಯದಿಂದ ಕೂಡಿವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸರ್ಕಾರೇತರ ಸಂಸ್ಥೆಯೊಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಕನ್ವರ್ ಯಾತ್ರೆ ಮಾರ್ಗದಲ್ಲಿರುವ ಅಂಗಡಿ ಮಾಲೀಕರು ಮತ್ತು ತಿನಿಸುಗಳು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಅಸೋಸಿಯೇಷನ್ ​​ಆಫ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್‌ವಿಎನ್ ಭಟ್ಟಿ ಅವರು ಆಲಿಸಿದರು.

ಇದನ್ನೂ ಓದಿ; ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ನಿಧಿ ಬಳಕೆ: ಸದನ ಸಮಿತಿ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ತಿರಸ್ಕರಿಸುವಂತೆ ರಾಜ್ಯ ಸರ್ಕಾರಕ್ಕೆ ಜನಪರ ಸಂಘಟನೆಗಳ ಒತ್ತಾಯ

ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿರುವ ಎಸ್‌ಐಆರ್‌ (ಎಸ್‌ಐಆರ್) ಅಂತಿಮ ಮತದಾರರ ಪಟ್ಟಿಯನ್ನು ಕರ್ನಾಟಕ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಬೇಕು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈ ಪಟ್ಟಿಯನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ವಿಡಿಯೋ ಪ್ರಕರಣ: ಪವರ್ ಟಿವಿ ರಾಕೇಶ್ ಶೆಟ್ಟಿ ಮನೆ, ಕಚೇರಿ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಸಿದ್ಧಪಡಿಸಲಾಗಿದೆ ಎನ್ನಲಾದ ವಿವಾದಾತ್ಮಕ ಸ್ಟಿಂಗ್ ವಿಡಿಯೋ ಪ್ರಕರಣದ ತನಿಖೆಯನ್ನು ಬೆಂಗಳೂರು ಪೊಲೀಸರು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಪ್ರಕರಣದ ಪ್ರಮುಖ ಶಂಕಿತರಾಗಿರುವ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ...

ಮರ ಕತ್ತರಿಸುವ ಯಂತ್ರದಿಂದ ದಾಳಿ ಪ್ರಕರಣ : ಗಾಯಾಳು ಆಂಧ್ರ ವಿದ್ಯಾರ್ಥಿನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ, ಆರೋಪಿಗೆ ಪೊಲೀಸರಿಂದ ಗುಂಡೇಟು

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಪ್ತಾಡುವಿನ ಸರ್ಕಾರಿ ಶಾಲೆಯ ತರಗತಿಯೊಳಗೆ ಹೇಮಂತ್ ಎಂಬಾತ ಮರ ಕತ್ತರಿಸುವ ಯಂತ್ರದಿಂದ ನಡೆಸಿದ ಭೀಕರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿ ಗೋಪಿಕಾ ಅವರನ್ನು, ಘಟನೆ ನಡೆದ...

“ಮೋದಿ ಎಂಬ ರಾವಣನನ್ನು ಕೆಳಗಿಳಿಸಲು ವಾನರ ಸೇನೆ ಬಂದಿದೆ”: ದೆಹಲಿಯಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಾಗ್ದಾಳಿ!

ದೇಶದಲ್ಲಿ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೂಲಕ ಸದ್ದಿಲ್ಲದೆ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲ್ಲಾಡಿಸಲಾಗುತ್ತಿದೆ ಎಂಬ ಆರೋಪಗಳ ನಡುವೆ, ರಾಜಧಾನಿ ನವದೆಹಲಿ ಬೃಹತ್ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಯಿತು. 'ಇಂಡಿಯಾ' (INDIA) ಒಕ್ಕೂಟ...

ಕರ್ನಾಟಕ SIR | ಎರಡು ಫಾರಂ-6 ಹಾಕಿದ ವ್ಯಕ್ತಿಗೆ 5 ವೋಟರ್ ಐಡಿ ನೀಡಿದ ಚು. ಆಯೋಗ!

ವಿಶೇಷ ತೀವ್ರ ಪರಿಷ್ಕರಣೆಯ ಬಳಿಕ ಕರ್ನಾಟಕದ ಮತದಾರರ ಪಟ್ಟಿ ಶುದ್ದವಾಗಿದೆ. ಅನರ್ಹ ಮತದಾರರ ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಒ) ಅನ್ಬುಕುಮಾರ್ ಪ್ರತಿಪಾದಿಸುತ್ತಿದ್ದಾರೆ. ಆದರೆ, ಅಕ್ಟೋಬರ್ 27ರಂದು ಅಂತಿಮ...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್: ವಿಡಿಯೋ ಅಪ್‌ಲೋಡ್‌ಗೆ ಬಳಸಿದ ಫೋನ್ ಕುಮಾರಸ್ವಾಮಿ ದೆಹಲಿ ನಿವಾಸದಲ್ಲಿ ಹಸ್ತಾಂತರ: ಬೆಂಗಳೂರು ಪೊಲೀಸ್ ಆಯುಕ್ತರ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದಂತೆ ವೈರಲ್ ಆಗಿದ್ದ ವಿವಾದಾತ್ಮಕ ‘ಸ್ಟಿಂಗ್ ಆಪರೇಷನ್’ ವಿಡಿಯೊವನ್ನು ಅಪ್‌ಲೋಡ್ ಮಾಡಲು ಬಳಸಿದ್ದ ಮೊಬೈಲ್ ಫೋನ್ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನವದೆಹಲಿಯ ಅಧಿಕೃತ ನಿವಾಸದಲ್ಲಿ...

‘ಗ್ಯಾನೇಶ್ ಕುಮಾರ್ ನಂತರ ನಿಮ್ಮ ಸರದಿ’: ಮತಗಳ್ಳತನಕ್ಕೆ ಮೋದಿ, ಅಮಿತ್ ಶಾ ಕೂಡ ಕಾನೂನು ಕ್ರಮ ಎದುರಿಸಬೇಕಾಗುತ್ತದೆ; ರಾಹುಲ್ ಗಾಂಧಿ ಎಚ್ಚರಿಕೆ

ನವದೆಹಲಿ: ಮತಗಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ನಂತರ...

‘ಅಗತ್ಯಬಿದ್ದರೆ ನಿಮ್ಮನ್ನು ನೆಲದಿಂದಲೇ ಕಿತ್ತು ಹಾಕುತ್ತೇವೆ’: ಸಿಇಸಿ ಗ್ಯಾನೇಶ್ ಕುಮಾರ್‌ಗೆ ಖರ್ಗೆ ಎಚ್ಚರಿಕೆ; ಹೋರಾಟ ಮುಂದುವರಿಸುವ ಪ್ರತಿಜ್ಞೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆ ಪಡೆಯುವವರೆಗೂ ವಿರೋಧ ಪಕ್ಷಗಳ ಹೋರಾಟ ನಿಲ್ಲುವುದಿಲ್ಲ. ಅಗತ್ಯ ಬಿದ್ದರೆ ನಿಮ್ಮನ್ನು ನೆಲದಿಂದಲೇ ಕಿತ್ತು ಹಾಕುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ...

ಕನ್ನಾಟ್ ಪ್ಲೇಸ್‌ನಲ್ಲಿ ಬಿಜೆಪಿ ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿದೆ; ವ್ಯಾಪಾರಿಗಳಿಗೆ ನಷ್ಟ ಉಂಟುಮಾಡುತ್ತಿದೆ: ರಾಹುಲ್ ಗಾಂಧಿ ಆರೋಪ

ನವದೆಹಲಿ: ಚುನಾವಣಾ ಅಕ್ರಮಗಳು ಮತ್ತು ಮತದಾರರ ಹಕ್ಕುಗಳ ಮೇಲಿನ ದಾಳಿಯ ವಿರುದ್ಧ ಇಂಡಿಯಾ ಬ್ಲಾಕ್ ನಡೆಸುತ್ತಿರುವ ಬೃಹತ್ ‘ಚಲೋ ದಿಲ್ಲಿ’ ಪ್ರತಿಭಟನೆಗೆ ರಾಷ್ಟ್ರ ರಾಜಧಾನಿಯಲ್ಲಿ ಜನಸಾಗರವೇ ಹರಿದುಬಂದಿದೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ...

ಸಿಇಸಿ ರಾಜೀನಾಮೆಗೆ ಆಗ್ರಹಿಸಿ ಇಂಡಿಯಾ ಬ್ಲಾಕ್ ಪ್ರತಿಭಟನೆ: ಮೋದಿ, ಅಮಿತ್ ಶಾಗೆ ಇದು ಕಠಿಣ ಎಚ್ಚರಿಕೆ; ಕೆ.ಸಿ. ವೇಣುಗೋಪಾಲ್

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಬ್ಲಾಕ್ ಆಯೋಜಿಸಿರುವ ಬೃಹತ್ ಪ್ರತಿಭಟನಾ ರ್ಯಾಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ...