Homeಕರ್ನಾಟಕಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಪುನೀತ್ ಕೆರೆಹಳ್ಳಿ ಬಂಧನ, ಠಾಣೆಯಲ್ಲಿ ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಪುನೀತ್ ಕೆರೆಹಳ್ಳಿ ಬಂಧನ, ಠಾಣೆಯಲ್ಲಿ ಅಸ್ವಸ್ಥ-ಆಸ್ಪತ್ರೆಗೆ ದಾಖಲು

- Advertisement -
- Advertisement -

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ‌ ನಿನ್ನೆ (ಜು.26) ರಾತ್ರಿ ಬಂಧನಕ್ಕೊಳಗಾದ ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಪೊಲೀಸ್ ಠಾಣೆಯಲ್ಲಿ ಅಸ್ವಸ್ಥಗೊಂಡಿದ್ದಾನೆ ಎನ್ನಲಾಗಿದ್ದು, ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುರಿ ಮಾಂಸದ ಜೊತೆ ನಾಯಿ ಮಾಂಸವನ್ನು ರಾಜಸ್ಥಾನದಿಂದ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪುನೀತ್ ಕೆರೆಹಳ್ಳಿ ಮತ್ತು ತಂಡ ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಪ್ರತಿಭಟಿಸಿದ್ದರು. ಈ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು. ಆತನ ವಿರುದ್ದ ಬಿಎನ್‌ಎಸ್‌ನ ಸೆಕ್ಷನ್ 132 (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) ಮತ್ತು ಸೆಕ್ಷನ್‌ 351 (2) (ಶಾಂತಿಭಂಗ) ಅಡಿ ಪ್ರಕರಣ ದಾಖಲಿಸಲಾಗಿದೆ.

ಕಾಟನ್​ಪೇಟೆ ಪೊಲೀಸರು ಪುನೀತ್​ ಕೆರೆಹಳ್ಳಿಯನ್ನು ರಾತ್ರಿ 12 ಗಂಟೆ ವೇಳೆಗೆ ಬಂಧಿಸಿದ್ದರು. ಠಾಣೆಯಲ್ಲಿ ಮಲಗಿದ್ದ ಪುನೀತ್, ಮುಂಜಾನೆ 4:45ರ ವೇಳೆಗೆ ಅಸ್ವಸ್ಥಗೊಂಡಿದ್ದಾನೆ ಎನ್ನಲಾಗಿದ್ದು, ಆತನನ್ನು ಕೆ.ಸಿ ಜನರಲ್​​ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಊಟ ಮಾಡದ ಕಾರಣ ಆತ ಅಸ್ವಸ್ಥನಾಗಿದ್ದಾನೆ ಎಂದು ವರದಿಗಳು ಹೇಳಿವೆ.

ಅಬ್ದುಲ್ ರಝಾಕ್ ಎಂಬವರು ರಾಜಸ್ಥಾನದಿಂದ ಕುರಿ ಮಾಂಸ ತರಿಸಿ ಬೆಂಗಳೂರಿನ ಹೋಟೆಲ್‌ಗಳಿಗೆ ಸರಬರಾಜು ಮಾಡುತ್ತಿದ್ದರು. ನಿನ್ನೆ ಮೆಜೆಸ್ಟಿಕ್ ರೈಲು ನಿಲ್ದಾಣಕ್ಕೆ ಮಾಂಸ ತಲುಪಿದಾಗ, ಅದರಲ್ಲಿ ನಾಯಿಮಾಂಸ ಬೆರೆಸಲಾಗಿದೆ ಎಂದು ಆರೋಪಿಸಿ ಪುನೀತ್ ಮತ್ತು ಆತನ ತಂಡ ಪ್ರತಿಭಟನೆ ನಡೆಸಿತ್ತು. ಈ ವೇಳೆ ರಝಾಕ್ ಮತ್ತು ಪುನೀತ್ ತಂಡದ ನಡುವೆ ವಾಗ್ವಾದ ನಡೆದಿದೆ ಎಂದು ತಿಳಿದು ಬಂದಿದೆ.

ಈ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ. ಇದೇ ವೇಳೆ ಬಿಬಿಎಂಪಿ ಆಹಾರ ಸುರಕ್ಷತೆಯ ಅಧಿಕಾರಿಗಳು ಮಾಂಸದ ಮಾದರಿ ತೆಗೆದುಕೊಂಡು ಹೋಗಿದ್ದು, ಅದರಲ್ಲಿ ನಾಯಿ ಮಾಂಸ ಇದೆಯಾ? ಎಂದು ಪರಿಶೀಲಿಸಿ ಹೇಳಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಬಿಜೆಪಿ-ಜೆಡಿಎಸ್‌ನಿಂದ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...