ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು, ಮಲಿಕ್ ಅವರು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಅವರ ಪರ ವಕೀಲರ ವಾದವನ್ನು ಮಾನ್ಯ ಮಾಡಿದೆ.
ಬಾಂಬೆ ಹೈಕೋರ್ಟ್ ಸಾಮಾನ್ಯ ಜಾಮೀನು ಅರ್ಜಿಯನ್ನು ವಿಲೇವಾರಿ ಮಾಡುವವರೆಗೆ ಮಲಿಕ್ ಅವರ ವೈದ್ಯಕೀಯ ಜಾಮೀನು ಮಾನ್ಯವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಜಾಮೀನು ನೀಡುವುದನ್ನು ವಿರೋಧಿಸಿಲ್ಲ ಮತ್ತು ಮಧ್ಯಂತರ ವೈದ್ಯಕೀಯ ಜಾಮೀನನ್ನು ಮುಂದುವರೆಸಬಹುದು ಎಂದಿದ್ದಾರೆ.
ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಫೆಬ್ರವರಿ 2022ರಲ್ಲಿ ಜಾರಿ ನಿರ್ದೇಶನಾಲಯವು ನವಾಬ್ ಮಲಿಕ್ ಅವರನ್ನು ಬಂಧಿಸಿತ್ತು.
ಇದನ್ನೂ ಓದಿ : ಲೆ. ಗವರ್ನರ್ ಸಹಿತ 15 ಮಂದಿ ಅಬಕಾರಿ ನೀತಿಗೆ ಸಹಿ ಹಾಕಿದ್ದರು : ಸಿಬಿಐ ವಾದಕ್ಕೆ ಕೇಜ್ರಿವಾಲ್ ಪ್ರತ್ಯುತ್ತರ


