Homeಫ್ಯಾಕ್ಟ್‌ಚೆಕ್FACT CHECK : ಮುಂಬೈನಲ್ಲಿ ಬಾರ್ಬರ್ ಜಿಹಾದ್ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೊಳ್ಳಲಾಗುತ್ತಿದೆ

FACT CHECK : ಮುಂಬೈನಲ್ಲಿ ಬಾರ್ಬರ್ ಜಿಹಾದ್ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಮುಂಬೈನಲ್ಲಿ ಬಾರ್ಬರ್ (ಕ್ಷೌರಿಕ) ಜಿಹಾದ್ ಎಂದು ಬರೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿರುವ ಫೋಟೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ನಿಲುಮೆ ಎಂಬ ಫೇಸ್‌ಬುಕ್ ಗ್ರೂಪ್ ಒಂದರಲ್ಲಿ ಉಮಾ ಶಂಕರ್ ಎಂಬಾತ ಫೋಟೋ ಹಂಚಿಕೊಂಡು ಹೀಗೆ ಬರೆದಿದ್ದಾರೆ..”ಮುಂಬೈನಲ್ಲಿ ಬಾರ್ಬರ್ ಜಿಹಾದ್… ಮಸೀದಿಗಳಲ್ಲಿ ಹಿಂದೂಗಳ ಗಡ್ಡ/ಕೂದಲು ಕತ್ತರಿಸುವಾಗ ಏಡ್ಸ್ ಬ್ಲೇಡ್‌ಗಳಿಂದ ಲಘುವಾಗಿ ಕತ್ತರಿಸುವ ಕೌಶಲ್ಯವನ್ನು ಕಲಿಸಲಾಗುತ್ತದೆ ಮತ್ತು ಈ ಕೆಲಸಕ್ಕೆ ಅವರು ಅಲ್ಲಿಂದ ಹಣವನ್ನು ಪಡೆಯುತ್ತಾರೆ ಎಂದು ಈ ಹುಡುಗರು ಪೊಲೀಸರಿಗೆ ತಿಳಿಸಿದರು.”

“ಇದು ಹೊಸಾ ಜಿಹಾದ್, ಈ ಮೂಲಕ ಹಿಂದೂಗಳನ್ನು ಏಡ್ಸ್ ರೋಗಿಗಳನ್ನಾಗಿ ಮಾಡಿ ಕೊಲ್ಲಲಾಗುತ್ತಿದೆ.
ಶಸ್ತ್ರಾಸ್ತ್ರಗಳಿಲ್ಲದ ಹೋರಾಟಗಾರರನ್ನು ಈ ಆಂತರಿಕ ಯುದ್ಧಕ್ಕೆ ಸಿದ್ಧಪಡಿಸಲಾಗುತ್ತಿದೆ. ಆದ್ದರಿಂದ ಎಲ್ಲಾ ಹಿಂದೂಜರು ಶೇವಿಂಗ್ ಮತ್ತು ಕಟಿಂಗ್ ಅನ್ನು ಹಿಂದೂ ಕ್ಷೌರಿಕರಿಂದ ಮಾತ್ರ ಮಾಡಿಸಿಕೊಳ್ಳಿ, ಮಹಿಳೆಯರು ಕೂಡ ಹಿಂದೂಜರಿರುವ ಪಾರ್ಲರ್ಗೆ ಹೋಗಿ(.ನಾಗರಾಜ್ ಖೋಡೆ ನವರ ಪೇಜ್ ಇಂದ )”

ಇದೇ ರೀತಿಯ ಪೋಸ್ಟ್‌ಗಳನ್ನು ಅನೇಕ ಫೇಸ್‌ಬುಕ್ ಬಳಕೆದಾರರು ತಮ್ಮ ಖಾತೆಗಳಲ್ಲಿ ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್ : ಫೇಸ್‌ಬುಕ್‌ ಖಾತೆಗಳಲ್ಲಿ ಹಂಚಿಕೊಂಡಿರುವ ವೈರಲ್ ಫೋಟೋದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಜುಲೈ 18,2013 ರಂದು ‘ಇಂಡಿಯಾ ಟಿವಿ‘ ಸುದ್ದಿ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯೊಂದರಲ್ಲಿ ಇದೇ ವೈರಲ್ ಫೋಟೋ ಕಂಡು ಬಂದಿದೆ.

ವರದಿಯಲ್ಲಿ ಕ್ರೆಡಿಟ್ ಕಾರ್ಡ್ ಕಳ್ಳತನ ಮತ್ತು ವಂಚನೆ ಆರೋಪದ ಮೇಲೆ ಮುಂಬೈ ಪೋಲೀಸರು ಭೋಜ್ಪುರಿ ನಟ ಇರ್ಫಾನ್ ಖಾನ್ ಮತ್ತು ಆತನ ಸ್ನೇಹಿತ ಸಂಜಯ್ ಯಾದವ್ ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ. “ಕ್ರೆಡಿಟ್ ಕಾರ್ಡ್‌ಗಳು, ಚೆಕ್ ಪುಸ್ತಕಗಳು ಮತ್ತು ಬಿಲ್ ಪುಸ್ತಕಗಳನ್ನು ಕದ್ದು, ನಂತರ ಬೆಲೆ ಬಾಳುವ ವಸ್ತುಗಳನ್ನು ಖರೀದಿಸಿದ ಆರೋಪದ ಮೇಲೆ ಇರ್ಫಾನ್ ಖಾನ್ ಮತ್ತು ಸಂಜಯ್ ಯಾದವ್ ಅವರನ್ನು ಮುಂಬೈ ಪೊಲೀಸರು ಬಿಹಾರದ ಛಾಪ್ರಾ ಜಿಲ್ಲೆಯಿಂದ ಬಂಧಿಸಿದ್ದಾರೆ” ಎಂದು ವರದಿ ವಿವರಿಸಿದೆ.

ಜುಲೈ 18, 2013ರಂದು ಎಬಿಪಿ ನ್ಯೂಸ್ ಮತ್ತು ಟಿವಿ9 ಗುಜರಾತ್ ಕೂಡ ಇದೇ ಪ್ರಕರಣದ ಕುರಿತು ವರದಿ ಮಾಡಿತ್ತು. ಎರಡೂ ವರದಿಗಳಲ್ಲೂ ಕಳ್ಳತನ ಮತ್ತು ವಂಚನೆ ಆರೋಪದ ಮೇಲೆ ಇರ್ಫಾನ್ ಖಾನ್ ಮತ್ತು ಸಂಜಯ್ ಯಾದವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಹೇಳಲಾಗಿತ್ತು.

ಮಾಧ್ಯಮ ವರದಿಗಳ ಪ್ರಕಾರ, ವೈರಲ್ ಫೋಟೋ 2013ರಲ್ಲಿ ನಡೆದ ಕಳ್ಳತನ ಪ್ರಕರಣವೊಂದರಲ್ಲಿ ಆರೋಪಿಗಳನ್ನು ಬಂಧಿಸಿದ್ದಾಗಿದೆ. ಅಲ್ಲದೆ, ಬಾರ್ಬರ್ ಜಿಹಾದ್, ಹಿಂದೂಗಳಿಗೆ ಏಡ್ಸ್ ಹರಡುವುದಕ್ಕೆ ಸಂಬಂಧಿಸಿದಲ್ಲ. ಸಾಮಾಜಿಕ ಜಾಲತಾಣದ ಸುಳ್ಳು ಪೋಸ್ಟ್‌ಗಳು ಮುಸ್ಲಿಮರ ವಿರುದ್ದ ಕೋಮು ವೈಷಮ್ಯ ಹರಡುವ ಉದ್ದೇಶಕ್ಕೆ ಹಂಚಿಕೊಂಡಿರುವುದು ಸ್ಪಷ್ಟವಾಗಿದೆ.

ಇದನ್ನೂ ಓದಿ : FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಟಿವಿ ವಿಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...