Homeಮುಖಪುಟಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಆಯ್ಕೆ ಅನೂರ್ಜಿತಗೊಳಿಸಿದ ಯುಪಿಎಸ್‌ಸಿ

ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಆಯ್ಕೆ ಅನೂರ್ಜಿತಗೊಳಿಸಿದ ಯುಪಿಎಸ್‌ಸಿ

- Advertisement -
- Advertisement -

ಇತ್ತೀಚೆಗೆ ಭಾರೀ ಸುದ್ದಿಯಾಗಿದ್ದ ಮಹಾರಾಷ್ಟ್ರ ಕೇಡರ್‌ನ 2022ನೇ ಬ್ಯಾಚ್‌ನ ಐಎಎಸ್ ಪ್ರೊಬೇಷನರಿ ಅಧಿಕಾರಿ ಡಾ.ಪೂಜಾ ಖೇಡ್ಕರ್ ಅವರ ಆಯ್ಕೆಯನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಇಂದು (ಜು.31) ಅನೂರ್ಜಿತಗೊಳಿಸಿದೆ.

ಅಲ್ಲದೆ, ಪೂಜಾ ಅವರು ಜೀವನಪರ್ಯಂತ ಆಯೋಗ ನಡೆಸುವ ಯಾವುದೇ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ಇಲ್ಲ ಎಂದು ನಿರ್ಬಂಧ ವಿಧಿಸಿದೆ.

ಅಂಗವೈಕಲ್ಯ ಹಾಗೂ ಒಬಿಸಿ ಕೋಟಾ ದುರುಪಯೋಗಪಡಿಸಿದ್ದಾರೆ ಎಂಬ ಪೂಜಾ ಖೇಡ್ಕರ್ ವಿರುದ್ದದ ಆರೋಪಗಳು ಸಾಬೀತಾಗಿರುವುದರಿಂದ ಅವರನ್ನು ಅನೂರ್ಜಿತಗೊಳಿಸಲಾಗಿದೆ ಎಂದು ಯುಪಿಎಸ್‌ಸಿ ಹೇಳಿರುವುದಾಗಿ ವರದಿಯಾಗಿದೆ.

ಮಹಾರಾಷ್ಟ್ರದ ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪೂಜಾ ಅವರ ವಿರುದ್ದ ಆರೋಪಗಳು ಕೇಳಿ ಬಂದ ಹಿನ್ನೆಲೆ, ಅವರನ್ನು ವರ್ಗಾವಣೆ ಮಾಡಲಾಗಿತ್ತು. ಯುಪಿಎಸ್‌ಸಿ ಪೂಜಾ ವಿರುದ್ದ ನಾಗರಿಕ ಸೇವಾ ಪರೀಕ್ಷೆ(ಸಿಎಸ್‌ಇ) 2022ರ ನಿಯಮಗಳ ಅಡಿ ತನಿಖೆ ಕೈಗೊಂಡಿತ್ತು.

ತಮ್ಮ ಮೇಲಿನ ಆರೋಪಗಳಿಗೆ ಜುಲೈ 25ರೊಳಗೆ ಉತ್ತರ ನೀಡುವಂತೆ ಪೂಜಾ ಅವರಿಗೆ ಯುಪಿಎಸ್‌ಸಿ ನೋಟಿಸ್ ನೀಡಿತ್ತು. ಆದರೆ, ಅವರು ಆಗಸ್ಟ್ 4ರವರೆಗೆ ಸಮಯ ವಿಸ್ತರಿಸುವಂತೆ ಕೋರಿದ್ದರು. ಅದಕ್ಕೆ ನಿರಾಕರಿಸಿದ್ದ ಯುಪಿಎಸ್‌ಸಿ ಜುಲೈ 30ರೊಳಗೆ ಉತ್ತರ ನೀಡುವಂತೆ ಆದೇಶಿಸಿತ್ತು. ನಿಗದಿತ ಅವಧಿಯಲ್ಲಿ ಪ್ರತಿಕ್ರಿಯೆ ನೀಡದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿತ್ತು. ಆದರೆ, ಪೂಜಾ ನಿಗದಿತ ಅವಧಿಯಲ್ಲಿ ಉತ್ತರ ನೀಡಿಲ್ಲ ಎಂದು ತಿಳಿದು ಬಂದಿದೆ.

ಪೂಜಾ ಖೇಡ್ಕರ್ ವಿರುದ್ದ ಆರೋಪದ ತನಿಖೆ ವೇಳೆ ಲಭ್ಯವಿರುವ ಎಲ್ಲಾ ದಾಖಲೆಗಳನ್ನು ಯುಪಿಎಸ್‌ಸಿ ಪರಿಶೀಲಿಸಿದೆ. 2009 ಮತ್ತು 2023ರ ನಡುವೆ ಐಎಎಸ್ ಸ್ಕ್ರೀನಿಂಗ್ ಪ್ರಕ್ರಿಯೆಯಲ್ಲಿ ತೇರ್ಗಡೆಯಾದ 15,000 ಕ್ಕೂ ಹೆಚ್ಚು ಅಭ್ಯರ್ಥಿಗಳ ಡೇಟಾವನ್ನು ಪರಿಶೀಲಿಸಲಾಗಿದೆ. ಈ ವೇಳೆ ಪೂಜಾ ಸುಳ್ಳು ಹೇಳಿರುವುದು ರುಜುವಾತಾಗಿದೆ ಎಂದು ವರದಿಗಳು ತಿಳಿಸಿವೆ.

ಕಳೆದ ಜೂನ್‌ನಲ್ಲಿ ಪುಣೆಯ ಜಿಲ್ಲಾಧಿಕಾರಿ ಸುಹಾಸ್ ದಿವಾಸೆ ಅವರು ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ ಸುಜಾತಾ ಸೌನಿಕ್ ಅವರಿಗೆ ಪತ್ರ ಬರೆದು ಪೂಜಾ ಖೇಡ್ಕರ್ ವಿರುದ್ದ ಆರೋಪಗಳನ್ನು ಮಾಡಿದಾಗ ಅವರ ಕುರಿತು ಚರ್ಚೆಗಳು ಪ್ರಾರಂಭವಾಗಿತ್ತು. ಪ್ರೊಬೇಷನರಿ ಅಧಿಕಾರಿ ಪೂಜಾ ಅವರು ಕಾರು, ಸಿಬ್ಬಂದಿ ಮತ್ತು ಕಚೇರಿಯಂತಹ ಸವಲತ್ತುಗಳಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ತನ್ನ ಪತ್ರದಲ್ಲಿ ಆರೋಪಿಸಿದ್ದರು. ನಂತರ ಪೂಜಾ ಅವರನ್ನು ವಾಶಿಮ್‌ಗೆ ವರ್ಗಾಯಿಸಲಾಗಿತ್ತು.

ಇದನ್ನೂ ಓದಿ : ಅನುರಾಗ್ ಠಾಕೂರ್ ಭಾಷಣಕ್ಕೆ ಬೆಂಬಲ ವ್ಯಕ್ತಪಡಿಸಿದ ಪ್ರಧಾನಿ ಮೋದಿ : ಹಕ್ಕುಚ್ಯುತಿ ದೂರು ನೀಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Just dismissal from service and dibar from upsc examinations is not at all punishment. Recover all the salary and allowances from the date of appointment
    Apart criminal case to be filed and to be jailed wrong declaration.

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...