ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹತ್ಯೆಗೆ ಪ್ರತೀಕಾರವಾಗಿ ಇಸ್ರೇಲ್ ಮೇಲೆ ನೇರ ದಾಳಿ ನಡೆಸುವಂತೆ ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲೀ ಖಮೇನಿ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.
ಬುಧವಾರ ಬೆಳಗ್ಗೆ ನಡೆದ ಇರಾನ್‌ನ ಸುಪ್ರೀಂ ನ್ಯಾಷನಲ್ ಸೆಕ್ಯುರಿಟಿ ಕೌನ್ಸಿಲ್‌ನ ತುರ್ತು ಸಭೆಯಲ್ಲಿ ಇಸ್ರೇಲ್ ಮೇಲೆ ದಾಳಿ ನಡೆಸುವಂತೆ ಸೇನಾಧಿಕಾರಿಗಳಿಗೆ ಖಮೇನಿ ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.
ಇರಾನ್‌ನ ರಾಜಧಾನಿ ಟೆಹರಾನ್‌ನ ನಿವಾಸದಲ್ಲಿ ಬುಧವಾರ ಇಸ್ಮಾಯಿಲ್ ಹನಿಯೆಹ್ ಅವರನ್ನು ಹತ್ಯೆ ಮಾಡಲಾಗಿದೆ. ಸಾವಿಗೂ ಮುನ್ನ ಅವರು ಇರಾನ್‌ನ ನೂತನ ಅಧ್ಯಕ್ಷರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇರಾನ್ ಹಾಗೂ ಹಮಾಸ್ ಹನಿಯೆಹ್ ಹತ್ಯೆಯನ್ನು ಇಸ್ರೇಲ್ ನಡೆಸಿದೆ ಎಂದು ಆರೋಪಿಸಿದ್ದು, ದಾಳಿಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಇರಾನ್‌ನ ಪ್ಯಾರಾ ಮಿಲಿಟರಿ ರೆವಲ್ಯೂಷನರಿ ಗಾರ್ಡ್ ತಿಳಿಸಿದೆ.
ಪರಮಾಣು ವಿಜ್ಞಾನಿಗಳು, ಸೇನಾ ಮುಖ್ಯಸ್ಥರು ಸೇರಿದಂತೆ ತನ್ನ ಶತ್ರು ರಾಷ್ಟ್ರಗಳ ನಾಯಕರನ್ನು ವಿದೇಶಗಳಲ್ಲಿ ಹತ್ಯೆ ಮಾಡಿದ ಇತಿಹಾಸ ಹೊಂದಿದೆ.
ಇದನ್ನೂ ಓದಿ : ಹಿಮಾಚಲ ಪ್ರದೇಶ: ಶಿಮ್ಲಾ ಜಿಲ್ಲೆಯಲ್ಲಿ ಮೇಘಸ್ಫೋಟ, 30ಕ್ಕೂ ಹೆಚ್ಚು ಮಂದಿ ನಾಪತ್ತೆ


