ದೇಶದಲ್ಲಿ 2019 ರಿಂದ 2023ರ ನಡುವೆ ಒಟ್ಟು 377 ಜನರು ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಅಪಾಯಕಾರಿಯಾಗಿ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್‌ನ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.
ಸದನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ರಾಜ್ಯ ಸಚಿವ ರಾಮದಾಸ್ ಅಠಾವಳೆ, ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ನಿಷೇಧ ಮತ್ತು ಸ್ಕ್ಯಾವೆಂಜರ್‌ಗಳ ಪುನರ್ವಸತಿ ಕಾಯ್ದೆ-2013ರನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೈಗೊಂಡ ಕ್ರಮಗಳ ಕುರಿತು ವಿವರಿಸಿದರು.
ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್‌ನಲ್ಲಿ ತೊಡಗಿರುವ ಜನರ ಸಂಖ್ಯೆಯ ಕುರಿತ ಮತ್ತೊಂದು ಪ್ರಶ್ನೆಗೆ ಉತ್ತಸಿದ ಅವರು, “ಪ್ರಸ್ತುತ ದೇಶದಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ನಡೆಯುತ್ತಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ” ಎಂದಿದ್ದಾರೆ.
ಆದರೆ, ಸಚಿವರು ಕೊಟ್ಟಿರುವ ಲಿಖಿತ ಉತ್ತರದಲ್ಲಿ “ಕಳೆದ ಐದು ವರ್ಷಗಳಲ್ಲಿ, ಅಂದರೆ 2019 ರಿಂದ 2023 ರ ಅವಧಿಯಲ್ಲಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಅಪಾಯಕಾರಿ ಶುಚಿಗೊಳಿಸುವಾಗ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 377 ಜನರು ಸಾವನ್ನಪ್ಪಿದ್ದಾರೆ” ಎಂದು ತಿಳಿಸಿದ್ದಾರೆ.
ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್ ಚಾಲ್ತಿಯಲ್ಲಿ ಇಲ್ಲದೆ ಇಷ್ಟು ಜನರು ಸಾಯಲು ಹೇಗೆ ಸಾಧ್ಯ? ಎಂದು ಸಚಿವ ಉತ್ತರ ಪ್ರಶ್ನೆಯನ್ನು ಹುಟ್ಟು ಹಾಕಿದೆ.
ಇದನ್ನೂ ಓದಿ : ಕೃಷ್ಣ ಜನ್ಮಭೂಮಿ ಪ್ರಕರಣ: ಮಸೀದಿ ಸಮಿತಿ ಅರ್ಜಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್


