Homeಮುಖಪುಟಬಾಂಗ್ಲಾದೇಶ | ಮಾಜಿ ಪ್ರಧಾನಿ ಖಾಲಿದಾ ಝಿಯಾ ಬಿಡುಗಡೆಗೆ ಅಧ್ಯಕ್ಷರ ಆದೇಶ : ಇಂದು ಸೇನೆಯಿಂದ...

ಬಾಂಗ್ಲಾದೇಶ | ಮಾಜಿ ಪ್ರಧಾನಿ ಖಾಲಿದಾ ಝಿಯಾ ಬಿಡುಗಡೆಗೆ ಅಧ್ಯಕ್ಷರ ಆದೇಶ : ಇಂದು ಸೇನೆಯಿಂದ ಸರ್ಕಾರ ರಚನೆ ಸಾಧ್ಯತೆ

- Advertisement -
- Advertisement -

ಸೋಮವಾರ (ಆ.5) ಪ್ರಧಾನಿ ಶೇಖ್ ಹಸೀನಾ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಪಲಾಯನ ಮಾಡಿದ ಬೆನ್ನಲ್ಲೇ, ಬಾಂಗ್ಲಾದೇಶದ ಸೇನೆ ದೇಶದ ಅಧಿಕಾರ ತನ್ನ ಹಿಡಿತದಲ್ಲಿಟ್ಟುಕೊಂಡಿದೆ. ಈ ನಡುವೆ ಮಾಜಿ ಪ್ರಧಾನಿ ಹಾಗೂ ಪ್ರತಿಪಕ್ಷ ನಾಯಕಿ ಖಾಲಿದಾ ಝಿಯಾ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಆದೇಶಿಸಿದ್ದಾರೆ.

ಅಧ್ಯಕ್ಷ ಶಹಾಬುದ್ದೀನ್ ನೇತೃತ್ವದ ಸಭೆಯಲ್ಲಿ “ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಅಧ್ಯಕ್ಷೆ ಬೇಗಂ ಖಲೀದಾ ಝಿಯಾ ಅವರನ್ನು ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡಲು ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧ್ಯಕ್ಷರ ಪತ್ರಿಕಾ ತಂಡ ಹೇಳಿಕೆಯಲ್ಲಿ ತಿಳಿಸಿದೆ.

ಮಾಜಿ ಪ್ರಧಾನಿ ಖಾಲಿದಾ ಝಿಯಾ ಅವರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ 2018ರಲ್ಲಿ 17 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 78 ವರ್ಷ ವಯಸ್ಸಿನ ಝಿಯಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ಸೀಮಿತರಾಗಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿ ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿತರಾಗಿರುವ ಎಲ್ಲಾ ಜನರನ್ನೂ ಬಿಡುಗಡೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ” ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಸೇನಾ ಮುಖ್ಯಸ್ಥ ಜನರಲ್ ವಕಾರುಝ್ಝಮಾನ್, ನೌಕಾಪಡೆ ಮತ್ತು ವಾಯುಪಡೆಗಳ ಮುಖ್ಯಸ್ಥರು, ಬಿಎನ್‌ಪಿ, ಜಮಾತ್-ಎ-ಇಸ್ಲಾಮಿ ಸೇರಿದಂತೆ ಹಲವು ವಿರೋಧ ಪಕ್ಷಗಳ ಉನ್ನತ ನಾಯಕರು ಅಧ್ಯಕ್ಷರು ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದರು.

ಸೋಮವಾರದ ಬಾಂಗ್ಲಾದೇಶದ ಸರ್ಕಾರಿ ಮಾಲಿಕತ್ವದ ದೂರದರ್ಶನದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದ ಸೇನಾ ಮುಖ್ಯಸ್ಥ, ಪ್ರಧಾನಿ ಶೇಖ್ ಹಸೀನಾ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಪಲಾಯನ ಮಾಡಿದ್ದಾರೆ. ಹೀಗಾಗಿ, ಸೇನೆಯು ಮಧ್ಯಂತರ ಸರ್ಕಾರ ರಚಿಸಲಿದೆ ಎಂದಿದ್ದರು.

ವರದಿಗಳ ಪ್ರಕಾರ, ಇಂದು ಬಾಂಗ್ಲಾ ಸಂಸತ್ತನ್ನು ವಿಸರ್ಜಿಸಿ ಸೇನೆಯ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆ ನಡೆಯಲಿದೆ.

ಇದನ್ನೂ ಓದಿ : ಬಾಂಗ್ಲಾದೇಶ | ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಶೇಖ್ ಹಸೀನಾ ಪಲಾಯನ : ಮಧ್ಯಂತರ ಸರ್ಕಾರ ರಚನೆಗೆ ಮುಂದಾದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...