Homeಮುಖಪುಟವಿನೇಶ್ ಫೋಗಟ್‌ ಬಗ್ಗೆ ಮಾತನಾಡುವವರಿಗೆ ಇಂದು ಉತ್ತರ ಸಿಕ್ಕಿದೆ, ಯಶಸ್ಸಿನ ಪ್ರತಿಧ್ವನಿ ದೆಹಲಿಗೆ ಮುಟ್ಟಿದೆ :...

ವಿನೇಶ್ ಫೋಗಟ್‌ ಬಗ್ಗೆ ಮಾತನಾಡುವವರಿಗೆ ಇಂದು ಉತ್ತರ ಸಿಕ್ಕಿದೆ, ಯಶಸ್ಸಿನ ಪ್ರತಿಧ್ವನಿ ದೆಹಲಿಗೆ ಮುಟ್ಟಿದೆ : ರಾಹುಲ್ ಗಾಂಧಿ

- Advertisement -
- Advertisement -

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಫೈನಲ್ ಪ್ರವೇಶಿಸಿರುವ ಕುಸ್ತಿಪಟು ವಿನೇಶ್ ಫೋಗಟ್‌ಗೆ ಅಭಿನಂದನೆ ಸಲ್ಲಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ “ವಿನೇಶ್ ಪೋಗಟ್ ಬಗ್ಗೆ ಮಾತನಾಡುವವರಿಗೆ ಇಂದು ಉತ್ತರ ಸಿಕ್ಕಿದೆ, ಆಕೆಯ ಯಶಸ್ಸಿನ ಪ್ರತಿಧ್ವನಿ ದೆಹಲಿಗೆ ಮುಟ್ಟಿದೆ” ಎಂದಿದ್ದಾರೆ.

ಈ ಮೂಲಕ ಬಿಜೆಪಿಯ ಮಾಜಿ ಸಂಸದ ಬ್ರಿಜ್ ಭೂಷಣ್ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಾಗ ಹೋರಾಟ ನಡೆಸಿದ ಕುಸ್ತಿಪಟುಗಳನ್ನು ಅಪರಾಧಿಗಳಂತೆ ಕಂಡ ಕೇಂದ್ರ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ ಕುಸ್ತಿ 50 ಕೆ.ಜಿ ವಿಭಾಗದ ಸೆಮಿಫೈನಲ್‌ನಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಝ್ಮನ್ ಲೋಪೆಝ್ ಅವರನ್ನು ಸೋಲಿಸಿ ವಿನೇಶ್ ಫೋಗಟ್ ಅವರು ಮಂಗಳವಾರ ಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಖಚಿತಪಡಿಸಿದ್ದಾರೆ.

ವಿನೇಶ್ ಸಾಧನೆಯ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ “ವಿಶ್ವದ ಮೂವರು ಅಗ್ರಗಣ್ಯ ಕುಸ್ತಿಪಟುಗಳನ್ನು ಒಂದೇ ದಿನದಲ್ಲಿ ಸೋಲಿಸಿದ ವಿನೇಶ್ ಜೊತೆಗೆ ಇಡೀ ದೇಶ ಭಾವುಕವಾಗಿದೆ. ವಿನೇಶ್ ಮತ್ತು ಅವರ ಸಹೋದ್ಯೋಗಿಗಳ ಹೋರಾಟಗಳನ್ನು ಹತ್ತಿಕ್ಕುವವರು, ಅವರ ಉದ್ದೇಶ ಮತ್ತು ಸಾಮರ್ಥ್ಯದ ಬಗ್ಗೆ ಪ್ರಶ್ನೆ ಮಾಡುವವರಿಗೆ ಇಂದು ಉತ್ತರಗಳು ಸಿಕ್ಕಿದೆ” ಎಂದು ಹೇಳಿದ್ದಾರೆ.

“ಇಂದು ಇಡೀ ಅಧಿಕಾರ ವ್ಯವಸ್ಥೆಯೇ ಭಾರತದ ವೀರ ಪುತ್ರಿಯ ಮುಂದೆ ರಕ್ತ ಕಣ್ಣೀರು ಸುರಿಸುವಂತೆ ಆಗಿದೆ. ಇದು ಚಾಂಪಿಯನ್‌ಗಳ ಗುರುತು, ಅವರು ತಮ್ಮ ಕಾರ್ಯ ಕ್ಷೇತ್ರದಿಂದ ಉತ್ತರಗಳನ್ನು ನೀಡುತ್ತಾರೆ. ವಿನೇಶ್ ಅವರಿಗೆ ಶುಭಾಶಯಗಳು. ಪ್ಯಾರಿಸ್‌ನಲ್ಲಿ ನಿಮ್ಮ ಯಶಸ್ಸಿನ ಪ್ರತಿಧ್ವನಿ ದೆಹಲಿಗೆ ಸ್ಪಷ್ಟವಾಗಿ ಕೇಳಿಸಿತು” ಎಂದಿದ್ದಾರೆ.

ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ, ಬಿಜೆಪಿಯ ಮಾಜಿ ಸಂಸದ ಬ್ರಿಜ್ ಭೂಷಣ್ ವಿರುದ್ದ ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಕೇಳಿ ಬಂದಿತ್ತು. ಆಗ ಬ್ರಿಜ್ ಭೂಷಣ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಭಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ನೇತೃತ್ವದಲ್ಲಿ ಹೋರಾಟ ನಡೆದಿತ್ತು.

ಕೇಂದ್ರ ಸರ್ಕಾರ ಕುಸ್ತಿಪಟುಗಳ ಅಳಲು ಕೇಳುವ ಬದಲಾಗಿ, ಅವರನ್ನು ಟೀಕಿಸುವ ಕೆಲಸ ಮಾಡಿತ್ತು. ಬಿಜೆಪಿ ಮತ್ತು ಸಂಘಪರಿವಾರದ ಐಟಿ ಸೆಲ್‌ಗಳು ವಿನೇಶ್ ಫೋಗಟ್‌ ಸೇರಿದಂತೆ ಹೋರಾಟ ನಿರತ ಕುಸ್ತಿಪಟುಗಳನ್ನು ದೇಶದ್ರೋಹಿಗಳಂತೆ ಬಿಂಬಿಸಿತ್ತು. ಅವರ ಹೋರಾಟ ರಾಜಕೀಯ ಪ್ರೇರಿತ ಎಂದಿತ್ತು. ಬ್ರಿಜ್ ಭೂಷಣ್ ವಿರುದ್ದ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇವೆಲ್ಲದಕ್ಕೂ ತನ್ನ ಒಲಿಂಪಿಕ್ಸ್‌ ಸಾಧನೆಯ ಮೂಲಕ ವಿನೇಶ್ ಉತ್ತರ ನೀಡಿದ್ದಾರೆ ಎಂದು ಇಡೀ ದೇಶ ಕೊಂಡಾಡುತ್ತಿದೆ.

ಇದನ್ನೂ ಓದಿ : ಲೋಕಸಭೆ ಅಧಿವೇಶನ: ದಲಿತರ ಮೀಸಲಾತಿಯ ‘ಸುರಕ್ಷತಾ ಕ್ರಮ’ ಖಚಿತಪಡಿಸಿಕೊಳ್ಳುವಂತೆ ರಾಜಾ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...