Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

FACT CHECK : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಯುವತಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡುವ ವಿಡಿಯೋದ ಸ್ಕ್ರೀನ್ ಶಾಟ್ ಒಂದು ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, “ಬಾಂಗ್ಲಾದೇಶದಲ್ಲಿ ಉಂಟಾಗಿರುವ ರಾಜಕೀಯ ಅರಾಜಕತೆಯ ನಡುವೆ, ಮುಸ್ಲಿಮರು ಹಿಂದೂಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ” ಎಂದು ಪ್ರತಿಪಾದಿಸಲಾಗಿದೆ.

ವೈರಲ್ ಸ್ಕ್ರೀನ್ ಶಾಟ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಬಲಪಂಥೀಯ ಎಕ್ಸ್‌ ಖಾತೆ “हम लोग We The People (@ajaychauhan41)” ಮತ್ತೊಂದು ಭಯನಾಕ ಘಟನೆಯೊಂದು ಬಾಂಗ್ಲಾದೇಶದಿಂದ ಬೆಳಕಿಗೆ ಬಂದಿದೆ. ಬಾಂಗ್ಲಾದೇಶದಾದ್ಯಂತ ಜಿಹಾದಿಗಳು ಹಿಂದೂ ಮಹಿಳೆಯರನ್ನು ಅತ್ಯಾಚಾರ ಮಾಡುತ್ತಿದ್ದಾರೆ. ಈ ಪ್ರತಿಭಟನೆ ವಿದ್ಯಾರ್ಥಿ ಪ್ರತಿಭಟನೆಯಾಗಿ ಪ್ರಾರಂಭಗೊಂಡಿತ್ತು. ಈಗ ಹಿಂದೂಗಳ ಹತ್ಯಾಕಾಂಡವಾಗಿ ಬದಲಾಗಿದೆ” ಎಂದು ಬರೆದುಕೊಂಡಿದೆ.

ಇದೇ ರೀತಿಯ ಪ್ರತಿಪಾದನೆಗಳೊಂದಿಗೆ ಇನ್ನೂ ಅನೇಕ ಎಕ್ಸ್‌ ಬಳಕೆದಾರು ವೈರಲ್ ಸ್ಕ್ರೀಟ್ ಶಾಟ್ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು.

2023ರಲ್ಲಿ ಮಣಿಪುರದ ಘಟನೆ ಎಂದು ವಿಡಿಯೋ ವೈರಲ್ ಆಗಿತ್ತು

ಕಳೆದ ವರ್ಷ (2023) ಮಣಿಪುರದಲ್ಲಿ ಹಿಂಸಾಚಾರ ಉಲ್ಬಣಗೊಂಡಿದ್ದ ವೇಳೆ ಈಗ ಸ್ಕ್ರೀನ್ ಶಾಟ್ ವೈರಲ್ ಆಗಿರುವ ವಿಡಿಯೋ ವ್ಯಾಪಕವಾಗಿ ಹರಿದಾಡಿತ್ತು. ಅನೇಕರು “ಮಣಿಪುರದಲ್ಲಿ ಕ್ರಿಶ್ಚಿಯನ್ ಯುವತಿಯನ್ನು ಅಪಹರಿಸಿರುವ ಹಿಂದೂಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅದನ್ನು ವಿಡಿಯೋ ಮಾಡಿ ಹಂಚಿದ್ದಾರೆ” ಎಂದು ಪ್ರತಿಪಾದಿಸಿದ್ದರು.

ಫ್ಯಾಕ್ಟ್‌ಚೆಕ್ : ಅಸಲಿಗೆ ವೈರಲ್ ಆಗಿರುವ ವಿಡಿಯೋದಲ್ಲಿರುವ ಘಟನೆ ನಡೆದಿರುವುದು ಬಾಂಗ್ಲಾದೇಶದಲ್ಲೋ ಅಲ್ಲ, ಮಣಿಪುರದಲ್ಲೋ ಅಲ್ಲ. ನಮ್ಮದೇ ಬೆಂಗಳೂರಿನಲ್ಲಿ.

ಮೇ 28, 2021ರಂದು ಈ ಕುರಿತು ಡೆಕ್ಕನ್ ಹೆರಾಲ್ಡ್ ಸುದ್ದಿ ವೆಬ್‌ಸೈಟ್‌ ಪ್ರಕಟಿಸಿದ ವರದಿಯೊಂದು ನಮಗೆ ಲಭ್ಯವಾಗಿದೆ. ವರದಿಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಹೇಳಲಾಗಿದೆ.

“ಸಂತ್ರಸ್ತೆ ಜೊತೆಯಲ್ಲೇ ಇದ್ದಳು. ಉದ್ಯೋಗದ ಭರವಸೆ ನೀಡಿ ಆಕೆಯನ್ನು ಬಾಂಗ್ಲಾದೇಶದಿಂದ ಭಾರತಕ್ಕೆ ಕರೆತಂದವರು, ನಂತರ ಇಲ್ಲಿ ವೇಶ್ಯಾವಾಟಿಕೆಗೆ ಒತ್ತಾಯಿಸಿದ್ದರು” ಎಂದು ವರದಿ ತಿಳಿಸಿದೆ.

ಜುಲೈ 8, 2021ರಂದು ಇಂಡಿಯನ್ ಎಕ್ಸ್‌ಪ್ರೆಸ್ ಸುದ್ದಿ ವೆಬ್‌ಸೈಟ್ ಇದೇ ಘಟನೆಗೆ ಸಂಬಂಧಿಸಿದಂತೆ ವರದಿ ಪ್ರಕಟಿಸಿತ್ತು. ಅದರಲ್ಲಿ “ಬೆಂಗಳೂರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5 ವಾರಗಳಲ್ಲಿ ಪೊಲೀಸರು 1,019 ಪುಟಗಳ ಆರೋಪಪಟ್ಟಿ (ಚಾರ್ಜ್ ಶೀಟ್) 12 ಆರೋಪಿಗಳನ್ನು ಅದರಲ್ಲಿ ಹೆಸರಿಸಿದ್ದಾರೆ” ಎಂದು ಹೇಳಿತ್ತು.

“ಮೇ ಕೊನೆಯ ವಾರದಲ್ಲಿ, ಪೂರ್ವ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಚಿತ್ರಹಿಂಸೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ 12 ಜನರನ್ನು ಬಂಧಿಸಲಾಗಿತ್ತು. ಅಸ್ಸಾಂನಲ್ಲಿ ಘಟನೆಯ ವಿಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು ಕ್ರಮ ಕೈಗೊಂಡಿದ್ದರು” ಎಂದು ವರದಿ ತಿಳಿಸಿತ್ತು.

ಜುಲೈ 8, 2021ರಂದು ಈ ಪ್ರಕರಣ ಸಂಬಂಧ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತರು “ಬಾಂಗ್ಲಾದೇಶದ ಮಹಿಳೆಯ ದೌರ್ಜನ್ಯ ಪ್ರಕರಣದಲ್ಲಿ 12 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ 11 ಆರೋಪಿಗಳು ಮತ್ತು ಸಂತ್ರಸ್ತ ಮಹಿಳೆ ಬಾಂಗ್ಲಾದೇಶದವರು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ವಿಸ್ಕೃತ ಮತ್ತ ವ್ಯವಸ್ಥಿತ ದೋಷಾರೋಪ ಪಟ್ಟಿಯನ್ನು ಗೌರವಾನ್ವಿತ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ” ಎಂದಿದ್ದರು.

ಬಾಂಗ್ಲಾದೇಶದ ಮಹಿಳೆಯನ್ನು, ಬಾಂಗ್ಲಾದೇಶದವರೇ ಆದ ಆರೋಪಿಗಳು ಕೆಲಸ ಕೊಡಿಸುವ ನೆಪದಲ್ಲಿ ಬೆಂಗಳೂರಿಗೆ ಕರೆ ತಂದಿದ್ದರು. ಇಲ್ಲಿ ಆರೋಪಿಗಳ ಜೊತೆಯೇ ಮಹಿಳೆ ವಾಸವಿದ್ದಳು. ನಂತರ ಆಕೆಯನ್ನು ವೇಶ್ಯಾವಾಟಿಕೆಗೆ ತಳ್ಳುವ ಪ್ರಯತ್ನ ನಡೆದಿತ್ತು. ಬಳಿಕ ಆರೋಪಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ವಿಡಿಯೋ ಚಿತ್ರೀಕರಣ ಮಾಡಿದ್ದರು. ಆ ವಿಡಿಯೋ ಅಸ್ಸಾಂ ಮತ್ತು ಬಾಂಗ್ಲಾದೇಶದಲ್ಲಿ ವೈರಲ್ ಆದ ಬಳಿಕ, ಬಾಂಗ್ಲಾ ಪೊಲೀಸರು ಬೆಂಗಳೂರು ಪೊಲೀಸರನ್ನು ಸಂಪರ್ಕಿಸಿದ್ದರು. ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.

ಈ ಪ್ರಕರಣದಲ್ಲಿ ಏಳು ಅಪರಾಧಿಗಳಿಗೆ ಮೇ 20, 2022ರಂದು ಬೆಂಗಳೂರಿನ 54ನೇ ಸಿಟಿ ಸಿವಿಲ್ ಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : FACT CHECK : ಪ್ರತಿಭಟನಾಕಾರರು ಬಾಂಗ್ಲಾ ಪ್ರಧಾನಿಯ ನಿವಾಸಕ್ಕೆ ನುಗ್ಗಿದ್ದು ಎಂದು ಸಂಬಂಧವಿಲ್ಲದ ಫೋಟೋ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...