Homeಮುಖಪುಟವಿನೇಶ್ ಫೋಗಟ್ ಅನರ್ಹ | ಭಾರೀ ದೊಡ್ಡ ಪಿತೂರಿ ನಡೆದಿದೆ : ವಿಜೇಂದರ್ ಸಿಂಗ್

ವಿನೇಶ್ ಫೋಗಟ್ ಅನರ್ಹ | ಭಾರೀ ದೊಡ್ಡ ಪಿತೂರಿ ನಡೆದಿದೆ : ವಿಜೇಂದರ್ ಸಿಂಗ್

- Advertisement -
- Advertisement -

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ವಿನೇಶ್ ಫೋಗಟ್ 50 ಕೆ.ಜಿ ವಿಭಾಗದ ಮಹಿಳೆಯರ ಕುಸ್ತಿಯ ಫೈನಲ್‌ನಲ್ಲಿ ಆಡುವ ಅವಕಾಶದಿಂದ ವಂಚಿತರಾಗಿದ್ದಾರೆ. 100 ಗ್ರಾಂನಷ್ಟು ತೂಕ ಹೆಚ್ಚಾಗಿದೆ ಎಂಬ ಕಾರಣ ನೀಡಿ ಅವರನ್ನು ಅನರ್ಹಗೊಳಿಸಲಾಗಿದೆ.

ಈ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ 2008ರ ಬೀಜಿಂಗ್ ಒಲಿಂಪಿಕ್ಸ್‌ನ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್, “ಭಾರತದ ವಿರುದ್ದ ದೊಡ್ಡ ಪಿತೂರಿ ನಡೆದಿದೆ” ಎಂದು ಆರೋಪಿಸಿದ್ದಾರೆ.

“ಈ ಅನರ್ಹತೆಯು ಭಾರತೀಯ ಕುಸ್ತಿಪಟುಗಳನ್ನು ದುರ್ಬಲಗೊಳಿಸುವ ದೊಡ್ಡ ಪಿತೂರಿಯ ಭಾಗವಾಗಿದೆ. ವಿನೇಶ್ ಅವರ ಪ್ರಯತ್ನ ಶ್ಲಾಘನೀಯ. ಬಹುಶಃ ಕೆಲವರಿಗೆ ಈ ಸಂತೋಷವನ್ನು ಅರಗಿಸಿಕೊಳ್ಳಲಾಗಲಿಲ್ಲ ಎಂದನಿಸುತ್ತದೆ. ಒಂದು ರಾತ್ರಿಯಲ್ಲಿ ಐದರಿಂದ ಆರು ಕೆ.ಜಿತೂಕ ಇಳಿಸಿಕೊಳ್ಳಬಹುದು. ಹೀಗಿರುವಾಗ 100 ಗ್ರಾಂನ ಸಮಸ್ಯೆ ಏನು? ವಿನೇಶ್ ಗೆದ್ದರೆ ಯಾರಿಗಾದ್ರೂ ಸಮಸ್ಯೆ ಆಗುತ್ತದೆ ಅನಿಸುತ್ತದೆ. ಹಾಗಾಗಿ, ಆಕೆಯನ್ನು ಅನರ್ಹಗೊಳಿಸಿರಬಹುದು. 100 ಗ್ರಾಂ ತೂಕ ಇಳಿಸಿಕೊಳ್ಳಲು ಆಕೆಗೆ ಅವಕಾಶ ನೀಡಬೇಕಿತ್ತು” ಎಂದು ವಿಜೇಂದರ್ ಸಿಂಗ್ ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

“ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಕ್ರೀಡಾಪಟುವಾಗಿ ನಾನೆಂದೂ ಇಂತಹ ಘಟನೆಯನ್ನು ಕಂಡಿರಲಿಲ್ಲ ಎಂದು ವಿಜೇಂದರ್ ಸಿಂಗ್ ಹೇಳಿದ್ದು, ವಿನೇಶ್ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸಲು ಸಾಧ್ಯ. ಭಾರತೀಯ ಒಲಿಂಪಿಕ್ಸ್ ಸಂಸ್ಥೆಯು ಮೇಲ್ಮನವಿ ಸಲ್ಲಿಸಬೇಕು” ಎಂದು ಆಗ್ರಹಿಸಿದ್ದಾರೆ.

ವಿನೇಶ್ ಫೋಗಟ್ ಫೈನಲ್ ಪ್ರವೇಶಿಸಿದ್ದರಿಂದ ಭಾರತಕ್ಕೆ ಮತ್ತೊಂದು ಪದಕ ಖಚಿತಗೊಂಡಿತ್ತು. ಗೆದ್ದರೆ ಚಿನ್ನ, ಸೋತರೆ ಬೆಳ್ಳಿ ಒಟ್ಟಿನಲ್ಲಿ ಪದಕವಂತೂ ಗ್ಯಾರಂಟಿ ಎಂದು ಇಡೀ ದೇಶ ಖುಷಿ ಪಟ್ಟಿತ್ತು. ಈ ನಡುವೆ ವಿನೇಶ್ ಅವರ ಅನರ್ಹತೆಯ ಆಘಾತಕಾರಿ ಸುದ್ದಿ ಬಂದಿದೆ. ಇದರಿಂದ ವಿನೇಶ್ ಬರಿಗೈಯಲ್ಲಿ ಮರಳಬೇಕಾದ ಪರಿಸ್ಥಿತಿ ಎದುರಾಗಿದೆ.

ವಿನೇಶ್ ಅವರ ಅನರ್ಹತೆಯೊಂದಿಗೆ, ಸಾಕ್ಷಿ ಮಲಿಕ್ ಒಬ್ಬರೇ ಕುಸ್ತಿಯಲ್ಲಿ ಭಾರತದ ಏಕೈಕ ಒಲಿಂಪಿಕ್ ಪದಕ ವಿಜೇತರಾಗಿ ಉಳಿಯಲಿದ್ದಾರೆ. ವಿಜೇಂದರ್ ಹೇಳಿಕೆ ಜಾಗತಿಕ ಮಟ್ಟದಲ್ಲಿ ಭಾರತೀಯ ಸ್ಪರ್ಧಿಗಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಕ್ರೀಡಾಪಟುಗಳು ಮತ್ತು ಅಭಿಮಾನಿಗಳಲ್ಲಿ ಇರುವ ಕಳವಳ ಮತ್ತು ಹತಾಶೆಯನ್ನು ಎತ್ತಿ ತೋರಿಸುತ್ತದೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ : ಪ್ಯಾರಿಸ್ ಒಲಂಪಿಕ್ಸ್‌ನಿಂದ ವಿನೇಶಾ ಅನರ್ಹ; ಪದಕದ ನಿರೀಕ್ಷೆಯಲ್ಲಿದ್ದವರಿಗೆ ಆಘಾತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...