Homeಮುಖಪುಟಒಲಿಂಪಿಕ್ಸ್‌ನಿಂದ ಅನರ್ಹ : ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್!

ಒಲಿಂಪಿಕ್ಸ್‌ನಿಂದ ಅನರ್ಹ : ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಫೋಗಟ್!

- Advertisement -
- Advertisement -

ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ ವಿಭಾಗದ ಫೈನಲ್‌ನಿಂದ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಫೋಗಟ್ ಕುಸ್ತಿಗೆ ವಿದಾಯ ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು “ಅಮ್ಮ ಕುಸ್ತಿ ನನ್ನ ವಿರುದ್ದ ಗೆದ್ದಿದೆ, ನಾನು ಸೋತಿದ್ಧೇನೆ. ನನ್ನನ್ನು ಕ್ಷಮಿಸಿ. ನಿಮ್ಮ ಕನಸು ಮತ್ತು ನನ್ನ ಧೈರ್ಯ ನುಚ್ಚು ನೂರಾಗಿದೆ. ಈಗ ನನಗೆ ಹೆಚ್ಚಿನ ಶಕ್ತಿ ಇಲ್ಲ. ನನ್ನನ್ನು ಕ್ಷಮಿಸಿದ್ದಕ್ಕೆ ನಿಮ್ಮೆಲ್ಲರಿಗೂ ನಾನು ಋಣಿಯಾಗಿರುತ್ತೇನೆ” ಎಂದು ಹೇಳಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮಂಗಳವಾರ ನಡೆದ 50 ಕೆ.ಜಿ ವಿಭಾಗದ ಮಹಿಳೆಯರ ಫ್ರೀಸ್ಟೈಲ್ ಕುಸ್ತಿ ಸೆಮಿಫೈನಲ್‌ನಲ್ಲಿ ವಿನೇಶ್ ಫೋಗಟ್ ಅವರು ಕ್ಯೂಬಾದ ಯುಸೇನೆಯಲಿಸ್ ಲೋಫೆಝ್ ಅವರನ್ನು ಸೋಲಿಸಿ ಫೈನಲ್ ತಲುಪಿದ್ದರು. ಈ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದರು. ಫೈನಲ್‌ನಲ್ಲಿ ಒಂದು ವೇಳೆ ವಿನೇಶ್ ಸೋತರೂ ಬೆಳ್ಳಿ ಪದಕ ಸಿಗುವುದು ಖಚಿತ ಎಂದು ಖುಷಿಯಲ್ಲಿದ್ದ ಕೋಟ್ಯಾಂತರ ಭಾರತೀಯರಿಗೆ, ಆಕೆಯ ಹಠಾತ್ ಅನರ್ಹ ಆಘಾತ ನೀಡಿದೆ.

ವಿನೇಶ್ ಅವರು ಅಮೆರಿಕದ ಸಾರಾ ಆನ್ ಹಿಲ್ಡೆಬ್ರಾಂಡ್ ವಿರುದ್ಧದ ಅಂತಿಮ ಪಂದ್ಯದಿಂದ 100 ಗ್ರಾಂ ತೂಕ ಹೆಚ್ಚಾದ ಕಾರಣಕ್ಕೆ ಅನರ್ಹಗೊಂಡಿದ್ದಾರೆ. ಬುಧವಾರ ಬೆಳಿಗ್ಗೆ ತೂಕ ನೋಡುವಾಗ ಆಕೆ 50 ಕೆ.ಜಿಗಿಂತ 100 ಗ್ರಾಂ ಹೆಚ್ಚಿದ್ದರು ಎನ್ನಲಾಗಿದೆ. ಇದರಿಂದ ಚಿನ್ನದ ಪದಕ ಪಡೆಯುವ ವಿನೇಶ್ ಕನಸು ಭಗ್ನಗೊಂಡಿದೆ.

ಇದನ್ನೂ ಓದಿ : ‘ವಿನೇಶಾ ಫೋಗಟ್ ಅನರ್ಹತೆ ಆಘಾತಕಾರಿ, ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ..’; ಐಒಎ ಮುಖ್ಯಸ್ಥೆ ಪಿಟಿ ಉಷಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...