Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ರವೀಂದ್ರನಾಥ ಟ್ಯಾಗೋರ್ ಪ್ರತಿಮೆ ಧ್ವಂಸಗೊಳಿಸಲಾಗಿದೆ ಎಂಬುವುದು ಸುಳ್ಳು

FACT CHECK : ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ರವೀಂದ್ರನಾಥ ಟ್ಯಾಗೋರ್ ಪ್ರತಿಮೆ ಧ್ವಂಸಗೊಳಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆಯ ನಡುವೆ, ರವೀಂದ್ರನಾಥ ಟ್ಯಾಗೋರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ ಎಂದು ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನರೇಶ್ ಪಾಂಡೆ (@ITechVision360)ಎಂಬ ಎಕ್ಸ್ ಬಳಕೆದಾರ ರವೀಂದ್ರನಾಥ ಟ್ಯಾಗೋರ್ ಅವರ ಭಗ್ನಗೊಂಡ ಪ್ರತಿಮೆಯ ತಲೆಯ ಭಾಗದ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು ” ಬಾಂಗ್ಲಾದೇಶದಲ್ಲಿ ರವೀಂದ್ರನಾಥ ಟ್ಯಾಗೋರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳಿಗೆ ಕಿರುಕುಳ ನೀಡಲಾಗುತ್ತಿದೆ. ಅವರ ದೇವಸ್ಥಾನ ಮತ್ತು ಮನೆಗಳನ್ನು ಧ್ವಂಸಗೊಳಿಸಲಾಗಿದೆ. ಬೆಂಕಿ ಹಚ್ಚಿ ಸುಡಲಾಗುತ್ತಿದೆ. ಹಿಂದೂಗಳ ಮನೆಗಳನ್ನು ದೋಚಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಪ್ರತಿಪಾದನೆಯೊಂದಿಗೆ ಇನ್ನೂ ಕೆಲವರು ಎಕ್ಸ್‌ನಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ. ಹಾಗಾದರೆ, ಈ ವಿಚಾರ ನಿಜಾನಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ರವೀಂದ್ರನಾಥ ಟ್ಯಾಗೋರ್ ಅವರ ಪ್ರತಿಮೆಯ ತಲೆಯನ್ನು ಕಸದ ರಾಶಿಯಲ್ಲಿ ಎಸೆಯಲಾಗಿದೆ. ಇದು ಪ್ರಸ್ತುತ ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯ ಭಾಗವಾಗಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, ಈ ಫೋಟೋ 2023ರಲ್ಲಿ ಢಾಕಾ ವಿಶ್ವವಿದ್ಯಾಲಯದಲ್ಲಿ ನಡೆದ ಘಟನೆಗೆ ಸಂಬಂಧಿಸಿದ್ದು ಎಂದು ತಿಳಿದು ಬಂದಿದೆ,

ಢಾಕಾ ಮೂಲದ ಬಂಗಾಳಿ ಸುದ್ದಿ ಸಂಸ್ಥೆ ಪ್ರೋಥೋಮ್ ಅಲೋ ಫೆಬ್ರವರಿ 17, 2023ರಂದು ಪ್ರಕಟಿಸಿದ ವರದಿಯ ಪ್ರಕಾರ, “ಢಾಕಾ ವಿಶ್ವವಿದ್ಯಾನಿಲಯದ ಫೈನ್ ಆರ್ಟ್ಸ್ ವಿಭಾಗದ ವಿದ್ಯಾರ್ಥಿಗಳು ಶಿಲ್ಪ ಕಲಾ ಪ್ರದರ್ಶನದ ಅಂಗವಾಗಿ 19 ಅಡಿ ಎತ್ತರದ ರವೀಂದ್ರನಾಥ ಟ್ಯಾಗೋರ್ ಅವರ ಪ್ರತಿಮೆಯನ್ನು ಸ್ಥಾಪಿಸಿದ್ದರು. ಎರಡು ದಿನಗಳ ನಂತರ, ಪ್ರತಿಮೆಯು ಕಾಣೆಯಾಗಿತ್ತು. ಬಳಿಕ ಅದರ ಮುರಿದ ತಲೆ ಮತ್ತು ಇತರ ಭಾಗಗಳು ಢಾಕಾದ ಸುಹ್ರವರ್ದಿ ಗಾರ್ಡನ್ಸ್‌ನಲ್ಲಿ ಕಂಡು ಬಂದಿತ್ತು”.

‘ಹಿಂದೂಸ್ತಾನ್ ಟೈಮ್ಸ್’ ವರದಿಯ ಪ್ರಕಾರ, ಟ್ಯಾಗೋರ್ ಅವರ ಪ್ರತಿಮೆ ಧ್ವಂಸಗೊಂಡ ರೀತಿಯಲ್ಲಿ ಪತ್ತೆಯಾದ ನಂತರ, ಅದನ್ನು ಸ್ಥಾಪಿಸಿದ್ದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಢಾಕಾ ವಿಶ್ವವಿದ್ಯಾನಿಲಯದ ಅಧಿಕಾರಿಗಳು ತಮಗೆ ತಿಳಿಸದೆ ಪ್ರತಿಮೆ ತೆರವುಗೊಳಿಸಿದ್ದಾರೆ ಎಂದು ಆರೋಪಿಸಿದ್ದರು. ಆರಂಭದಲ್ಲಿ, ವಿವಿ ಆರೋಪವನ್ನು ನಿರಾಕರಿಸಿತ್ತು. ನಂತರ ಪ್ರತಿಮೆ ತೆರವುಗೊಳಿಸಿರುವುದನ್ನು ಒಪ್ಪಿಕೊಂಡಿತ್ತು. ಅನುಮತಿಯಿಲ್ಲದೆ ಸ್ಥಾಪಿಸಿದ್ದ ಕಾರಣ ಪ್ರತಿಮೆ ತೆರವುಗೊಳಿಸಲಾಗಿದೆ” ಎಂದು ಹೇಳಿತ್ತು.

ನಾವು ಮೇಲೆ ಉಲ್ಲೇಖಿಸಿದ ವರದಿಗಳ ಪ್ರಕಾರ, ರವೀಂದ್ರನಾಥ ಟ್ಯಾಗೋರ್ ಅವರ ಪ್ರತಿಮೆ ಧ್ವಂಸಗೊಳಿಸಿರುವುದಕ್ಕೂ ಪ್ರಸ್ತುತ ನಡೆಯುತ್ತಿರುವ ಪ್ರತಿಭಟನೆಗೂ ಯಾವುದೇ ಸಂಬಂಧವಿಲ್ಲ. ಅದು ಢಾಕಾ ವಿವಿಯಲ್ಲಿ ಈ ಹಿಂದೆ ನಡೆದ ಘಟನೆಗೆ ಸಂಬಂಧಿಸಿದ್ದಾಗಿದೆ. ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಮಾಡಿರುವ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಹಿಂದೂ ಮಹಿಳೆಯರ ಮೇಲೆ ದಾಳಿ ಎಂದು ವಿದ್ಯಾರ್ಥಿ ಪ್ರತಿಭಟನೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...