Homeಕರ್ನಾಟಕಹೆಚ್‌.ಡಿ ಕುಮಾರಸ್ವಾಮಿ ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಮನವಿ : 10 ತಿಂಗಳಿನಿಂದ ಪ್ರತಿಕ್ರಿಯಿಸದ ರಾಜ್ಯಪಾಲರು; ವರದಿ

ಹೆಚ್‌.ಡಿ ಕುಮಾರಸ್ವಾಮಿ ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಮನವಿ : 10 ತಿಂಗಳಿನಿಂದ ಪ್ರತಿಕ್ರಿಯಿಸದ ರಾಜ್ಯಪಾಲರು; ವರದಿ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ನೀಡಿರುವ ಅರ್ಜಿಗೆ ಸಂಬಂಧಿಸಿದಂತೆ ಒಂದೇ ದಿನದಲ್ಲಿ ನೋಟಿಸ್ ಜಾರಿ ಮಾಡಿರುವ ರಾಜ್ಯಪಾಲರು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಸಿರುವ ಮನವಿಯನ್ನು 10 ತಿಂಗಳಿನಿಂದ ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ ಎಂದು ವರದಿಯಾಗಿದೆ.

ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಲು ಅನುಮತಿ ಕೋರಿ ವಕೀಲ ಟಿ.ಜೆ ಅಬ್ರಹಾಂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಜುಲೈ 26ರಂದು ಅರ್ಜಿ ಸಲ್ಲಿಸಿದ್ದರು. ಮರುದಿನ, ಅಂದರೆ ಜುಲೈ 27ರಂದೇ ಈ ಸಂಬಂಧ ವಿವರಣೆ ಕೋರಿ ರಾಜ್ಯಪಾಲರು ಸಿಎಂಗೆ ನೋಟಿಸ್ ಜಾರಿ ಮಾಡಿದ್ದಾರೆ.

ಆದರೆ, ಗಣಿ ಅಕ್ರಮ ಪ್ರಕರಣದ ವಿಚಾರಣೆ ನಡೆಸಿದ ಲೋಕಾಯುಕ್ತ ಎಸ್‌ಐಟಿ, ಹೆಚ್‌.ಡಿ ಕುಮಾರಸ್ವಾಮಿ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ 10 ತಿಂಗಳ ಹಿಂದೆಯೇ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಆದರೂ, ಇದುವರೆಗೂ ಆ ವಿಚಾರದಲ್ಲಿ ರಾಜ್ಯಪಾಲರು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಈದಿನ.ಕಾಮ್ ವರದಿ ಮಾಡಿದೆ.

ಹೆಚ್‌.ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ಅಂದರೆ ಅಕ್ಟೋಬರ್ 6, 2007ರಂದು ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಭಾವಿಹಳ್ಳಿ, ತಿಮ್ಮಪ್ಪಗುಡಿಯಲ್ಲಿ 550 ಎಕರೆ ಜಾಗವನ್ನು ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ ಎಂಬ ಬೋಗಸ್‌ ಸಂಸ್ಥೆಗೆ ಗಣಿಗಾರಿಕೆಗೆ ಅಕ್ರಮವಾಗಿ ಗುತ್ತಿಗೆಗೆ ನೀಡಿದ ಆರೋಪ ಅವರ ಮೇಲಿತ್ತು. ಗುತ್ತಿಗೆ ನೀಡುವಾಗ ಮಿನರಲ್ಸ್‌ ಕನ್ಸಿಷನ್‌ ನಿಯಮಗಳ, ನಿಯಮ 59 (2)ನ್ನು ಉಲ್ಲಂಘಿಸಿ ಕುಮಾರಸ್ವಾಮಿಯವರು ಮಂಜೂರು ಮಾಡಿದ್ದರು ಎಂದು ಹೇಳಲಾಗಿತ್ತು. ಈ ಅಕ್ರಮದ ಕುರಿತಾಗಿ ಎಫ್‌ಐಆರ್‌ ದಾಖಲಾಗಿ ಲೋಕಾಯುಕ್ತದ ಎಸ್‌ಐಟಿಯು ತನಿಖೆಯನ್ನು ಕೈಗೆತ್ತಿಕೊಂಡಿತ್ತು. ತನಿಖೆ ಪೂರ್ಣಗೊಂಡ ನಂತರ ಹೆಚ್‌.ಡಿ. ಕುಮಾರಸ್ವಾಮಿ ತಪ್ಪೆಸಗಿದ್ದಾರೆ ಎಂದು ಲೋಕಾಯುಕ್ತಕ್ಕೆ ಮನವರಿಕೆಯಾಗಿ ಚಾರ್ಚ್‌ಶೀಟ್‌ ಹಾಕಲಾಗಿತ್ತು. ನಂತರ ಕುಮಾರಸ್ವಾಮಿ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು  ರಾಜ್ಯಪಾಲರಿಗೆ ಪತ್ರ ಕಳಿಸಿದ್ದರು. ಈ ಸಂಬಂಧ ರಾಜ್ಯಪಾಲರು ಇದುವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ವರದಿ ಹೇಳಿದೆ.

ಸಿಎಂ ಸಿದ್ದರಾಮಯ್ಯ ವಿರುದ್ದದ ಅರ್ಜಿಗೆ ಸಂಬಂಧಿಸಿದಂತೆ ತಕ್ಷಣ ನೋಟಿಸ್ ಜಾರಿಗೊಳಿಸಿದ ರಾಜ್ಯಪಾಲರು, ಕುಮಾರಸ್ವಾಮಿ ವಿಚಾರದಲ್ಲಿ ಏಕೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ? ಎಂಬ ಪ್ರಶ್ನೆ ಮೂಡಿದೆ. ಅಲ್ಲದೆ, ಕುಮಾರಸ್ವಾಮಿಯವರು ಪ್ರಸ್ತುತ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಭಾರೀ ಕೈಗಾರಿಕೆಗಳು ಮತ್ತು ಉಕ್ಕು ಖಾತೆ ಸಚಿವರಾಗಿದ್ದಾರೆ.

ಕೃಪೆ : ಈದಿನ.ಕಾಮ್

ಇದನ್ನೂ ಓದಿ : ವಿನೇಶಾ ಪ್ರತಿಭಟನೆ ಸ್ವೀಕರಿಸಿದ ‘ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ’; ಒಲಿಂಪಿಕ್ ಬೆಳ್ಳಿ ಪದಕದ ಆಸೆ ಜೀವಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...