Homeಮುಖಪುಟಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಿದ ಬಿಜೆಪಿ ನಾಯಕಿ ಶಾಝಿಯಾ ಇಲ್ಮಿ

ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಿದ ಬಿಜೆಪಿ ನಾಯಕಿ ಶಾಝಿಯಾ ಇಲ್ಮಿ

- Advertisement -
- Advertisement -

‘ಇಂಡಿಯಾ ಟುಡೇ ವಿಡಿಯೋ’ ಪತ್ರಕರ್ತರೊಬ್ಬರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ವಿಡಿಯೋ ಅಪ್ಲೋಡ್ ಮಾಡಿದ್ದಕ್ಕೆ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ದ ಬಿಜೆಪಿ ನಾಯಕಿ ಶಾಝಿಯಾ ಇಲ್ಮಿ ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಅರ್ಜಿ ಕೈಗೆತ್ತಿಕೊಂಡ ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರು ಸೋಮವಾರದೊಳಗೆ ಸಂಪೂರ್ಣ, ಎಡಿಟ್ ಮಾಡದ ವಿಡಿಯೊವನ್ನು ಒದಗಿಸುವಂತೆ ರಾಜ್‌ದೀಪ್ ಸರ್ದೇಸಾಯಿ ಮತ್ತು ಇಂಡಿಯಾ ಟುಡೇಗೆ ನಿರ್ದೇಶಿಸಿದ್ದು, ಮುಂದಿನ ಮಂಗಳವಾರಕ್ಕೆ ಪ್ರಕರಣದ ವಿಚಾರಣೆಯನ್ನು ಪಟ್ಟಿ ಮಾಡಿದ್ದಾರೆ.

“ನಮಗೆ ಪ್ರಕರಣ ಪ್ರತಿಯನ್ನು ನೀಡಿಲ್ಲ” ಎಂದು ಸರ್ದೇಸಾಯಿ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದು, ನ್ಯಾಯಮೂರ್ತಿ ಅರೋರಾ ಅವರು ಸರ್ದೇಸಾಯಿ ಮತ್ತು ಇಂಡಿಯಾ ಟುಡೇ ಇಬ್ಬರಿಗೂ ಪ್ರತಿಯನ್ನು ನೀಡಲು ಇಲ್ಮಿ ಪರ ವಕೀಲರಿಗೆ ಸೂಚಿಸಿದ್ದಾರೆ.

“ಆನ್‌ಲೈನ್‌ನಲ್ಲಿ ಈಗಲೂ ಸರ್ದೇಸಾಯಿ ಪೋಸ್ಟ್ ಮಾಡಿರುವ ವಿಡಿಯೋ ಹರಿದಾಡುತಿದ್ದು, ಜನರು ಕೆಟ್ಟದಾಗಿ ಕಾಮೆಂಟ್ ಮಾಡುತ್ತಿದ್ದಾರೆ” ಎಂದು ಇಲ್ಮಿ ಪರ ವಕೀಲೆ ನತಾಶಾ ಗಾರ್ಗ್ ನ್ಯಾಯಾಲಯಕ್ಕೆ ತಿಳಿಸಿದ್ದು, ನ್ಯಾಯಾಲಯವು ಈ ವಿಷಯವನ್ನು ಆಲಿಸುವವರೆಗೆ ಸರ್ದೇಸಾಯಿ ಅವರ ಟ್ವೀಟ್‌ಗಳನ್ನು ಖಾಸಗಿಯಾಗಿಸಬೇಕು ಎಂದು ವಿನಂತಿಸಿದ್ದಾರೆ. ಆದರೆ, ಈ ಸಂಬಂಧ ಆದೇಶ ನೀಡಲು ನಿರಾಕರಿಸಿದ ನ್ಯಾಯಾಲಯ ಮಂಗಳವಾರಕ್ಕೆ ವಿಷಯವನ್ನು ಪಟ್ಟಿ ಮಾಡಿದೆ.

ಈ ಪ್ರಕರಣವು, ಕಾರ್ಗಿಲ್ ವಿಜಯ್ ದಿವಸ್ ರಾಜಕೀಯ, ಅಗ್ನಿವೀರ್ ಮತ್ತು ರಕ್ಷಣಾ ಪಡೆಗಳ ರಾಜಕೀಯೀಕರಣ ಕುರಿತು ಇಂಡಿಯಾ ಟುಡೆಯಲ್ಲಿ ಸರ್ದೇಸಾಯಿ ಅವರು ಜುಲೈ 26ರಂದು ನಡೆಸಿದ್ದ ಚರ್ಚೆಗೆ ಸಂಬಂಧಿಸಿದೆ.

ಚರ್ಚೆಯಲ್ಲಿ ಮೇಜರ್ ಜನರಲ್ (ನಿವೃತ್ತ) ಯಶ್ ಮೋರ್ ಅವರು ಅಗ್ನಿವೀರ್ ಯೋಜನೆಯಲ್ಲಿನ ನ್ಯೂನತೆಗಳನ್ನು ಎತ್ತಿ ತೋರಿಸುತ್ತಿದ್ದರು. ಈ ವೇಳೆ ಬಿಜೆಪಿ ವಕ್ತಾರೆ ಇಲ್ಮಿ ಮಧ್ಯ ಪ್ರವೇಶಿಸಿದ್ದರು. ಆಗ ಇಲ್ಮಿ ಮತ್ತು ಸರ್ದೇಸಾಯಿ ನಡುವೆ ವಾಗ್ವಾದ ನಡೆದಿತ್ತು. ಮಾಜಿ ಜನರಲ್ “ಕಠಿಣ ಸಂಗತಿಗಳನ್ನು ಮುಂದಿಡುತ್ತಿದ್ದಾರೆ” ಎಂದು ಸರ್ದೇಸಾಯಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಇಲ್ಮಿ, “ನಮಗೆ ಉಪದೇಶ ಕೊಡಬೇಡಿ” ಎಂದಿದ್ದರು.

ಸರ್ದೇಸಾಯಿ ಮತ್ತು ಇಲ್ಮಿ ನಡುವೆ ವಾಗ್ವಾದ ತಾರಕಕ್ಕೇರಿ, ಇಲ್ಮಿ ಕಾರ್ಯಕ್ರಮದಿಂದ ಹೊರ ನಡೆದಿದ್ದರು. ಅದೇ ದಿನ ರಾತ್ರಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಇಲ್ಮಿ “ಸರ್ದೇಸಾಯಿ ಶೋನಲ್ಲಿ ನನ್ನ ಧ್ವನಿ ಅಡಗಿಸಿದ್ದಾರೆ” ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿದ್ದ ಸರ್ದೇಸಾಯಿ ಮರುದಿನ ಬೆಳಿಗ್ಗೆ ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಇಲ್ಮಿ ಅವರು ತಮ್ಮ ಮನೆಯಲ್ಲಿ ಇಂಡಿಯಾ ಟುಡೇಯ ವಿಡಿಯೋ ಪತ್ರಕರ್ತನನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ್ದರು.

ಸರ್ದೇಸಾಯಿ ಅವರ ಪೋಸ್ಟ್‌ಗೆ ಸಂಬಂಧಿಸಿದಂತೆ ಎಕ್ಸ್‌ನಲ್ಲೇ ಪ್ರತಿಕ್ರಿಯೆ ನೀಡಿದ್ದ ಇಲ್ಮಿ, ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದರು.

ಇದನ್ನೂ ಓದಿ : ದೆಹಲಿ ಅಬಕಾರಿ ನೀತಿ ಪ್ರಕರಣ : ಮನೀಶ್ ಸಿಸೋಡಿಯಾಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...