Homeಮುಖಪುಟಮುಂಬೈ | ಖಾಸಗಿ ಕಾಲೇಜು ಹೇರಿದ್ದ ಹಿಜಾಬ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

ಮುಂಬೈ | ಖಾಸಗಿ ಕಾಲೇಜು ಹೇರಿದ್ದ ಹಿಜಾಬ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

"ತಿಲಕ ಧರಿಸಬೇಡಿ ಎಂದು ನೀವು ಹೇಳುತ್ತೀರಾ..?" ಎಂದು ಕಾಲೇಜಿನ ವಿರುದ್ಧ ಕಿಡಿಕಾರಿದ ಸುಪ್ರೀಂಕೋರ್ಟ್

- Advertisement -
- Advertisement -

ಕ್ಯಾಂಪಸ್‌ನೊಳಗೆ ಹಿಜಾಬ್, ನಕಾಬ್, ಬುರ್ಖಾ, ಶಾಲು, ಟೋಪಿ ಇತ್ಯಾದಿಗಳನ್ನು ಧರಿಸುವುದನ್ನು ನಿಷೇಧಿಸಿದ್ದ ಮುಂಬೈ ಕಾಲೇಜಿನ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಮುಂಬೈನ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ. ಕಾಲೇಜಿನ ನಿಯಮಗಳನ್ನು ಎತ್ತಿ ಹಿಡಿದಿದ್ದ ಬಾಂಬೆ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಸಂಜಯ್ ಕುಮಾರ್ ಅವರ ಪೀಠವು ಕಾಲೇಜು ವಿಧಿಸಿರುವ ಷರತ್ತುಗಳ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದೆ.

ವಿದ್ಯಾರ್ಥಿಗಳ ಧರ್ಮವನ್ನು ಬಹಿರಂಗಪಡಿಸಬಾರದು ಎಂಬ ಉದ್ದೇಶದಿಂದ ನಿಯಮ ವಿಧಿಸಲಾಗಿದೆ ಎಂಬ ಕಾಲೇಜಿನ ವಾದಕ್ಕೆ ಕಿಡಿಕಾರಿದ ನ್ಯಾಯಮೂರ್ತಿ ಖನ್ನಾ..”ಏನಿದು ನಿಯಮ? ಧರ್ಮ ಬಹಿರಂಗಪಡಿಸಬಾರದಾ? ಇಂತಹ ನಿಯಮಗಳನ್ನು ಹೇರಬೇಡಿ. ಅವರ (ವಿದ್ಯಾರ್ಥಿಗಳ) ಹೆಸರನ್ನೂ ನೀವು ಬಹಿರಂಗಪಡಿಸುವುದಿಲ್ವಾ? ಹಾಗಾದರೆ, ಅವರನ್ನು ಸಂಖ್ಯೆಗಳಿಂದ ಗುರುತಿಸುತ್ತೀರಾ?” ಎಂದು ಕೇಳಿದ್ದಾರೆ. “ಅವರು (ವಿದ್ಯಾರ್ಥಿಗಳು) ಒಟ್ಟಾಗಿ ಅಧ್ಯಯನ ಮಾಡಲಿ” ಎಂದಿದ್ದಾರೆ.

ಕಾಲೇಜು ಪರ ವಾದ ಮಂಡಿಸಿದ ಹಿರಿಯ ವಕೀಲೆ ಮಾಧವಿ ದಿವಾನ್ ” ಅದು ಖಾಸಗಿ ಸಂಸ್ಥೆ ಎಂದಿದ್ದಾರೆ. ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ “ಯಾವಾಗಿನಿಂದ ಆ ಕಾಲೇಜು ಕಾರ್ಯ ನಿರ್ವಹಿಸುತ್ತಿದೆ? ಎಂದು ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ವಕೀಲೆ ” 2008ರಿಂದ ಕಾಲೇಜು ನಡೆಯುತ್ತಿದೆ” ಎಂದು ಉತ್ತರಿಸಿದ್ದಾರೆ. ಈ ವೇಳೆ ಮರುಪ್ರಶ್ನೆ ಕೇಳಿದ ನ್ಯಾಯಮೂರ್ತಿಗಳು “ಇಷ್ಟು ವರ್ಷಗಳಲ್ಲಿ ಯಾವುದೇ ನಿಯಮಗಳು ಇರಲಿಲ್ಲ. ಈಗ ಹಠಾತ್ ಆಗಿ ನಿಮಗೆ ಧರ್ಮ ನೆನಪಾಯಿತಾ? ಎಂದು ಕೇಳಿದ್ದು, ಬಹಳ ವರ್ಷಗಳ ನಂತರ ನೀವು ಅಂತಹ ಸೂಚನೆಗಳನ್ನು ನೀಡುತ್ತಿರುವುದು ದುರದೃಷ್ಟಕರ” ಎಂದಿದ್ದಾರೆ.

“ತಿಲಕ ಧರಿಸಬೇಡಿ” ಎಂದು ನೀವು ಹೇಳುತ್ತೀರಾ? ಎಂದು ನ್ಯಾಯಮೂರ್ತಿ ಖನ್ನಾ ಪ್ರಶ್ನಿಸಿದ್ದಾರೆ.

441 ಮುಸ್ಲಿಂ ವಿದ್ಯಾರ್ಥಿಗಳು ‘ಸಂತೋಷದಿಂದ ಕಾಲೇಜಿಗೆ ಹಾಜರಾಗುತ್ತಿದ್ದಾರೆ’ ಎಂದು ವಕೀಲೆ ದಿವಾನ್ ನ್ಯಾಯಾಲಯಕ್ಕೆ ತಿಳಿಸಿದ್ದು, ಕೆಲವು ಮುಸ್ಲಿಂ ವಿದ್ಯಾರ್ಥಿಗಳಿಂದ ಮಾತ್ರ ಆಕ್ಷೇಪಣೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳು ಯಾವಾಗಲೂ ಹಿಜಾಬ್ ಧರಿಸುವುದಿಲ್ಲ” ಎಂದು ಹೇಳಿದ್ದಾರೆ.

” ಕಾಲೇಜಿನ ನಿಯಮ ಹುಡುಗಿ ಏನು ಧರಿಸಬೇಕೆಂದು ಸೂಚಿಸಿದಂತೆ ಆಗುವುದಿಲ್ಲವೇ? ಎಂದು ನ್ಯಾಯಮೂರ್ತಿ ಖನ್ನಾ ಕೇಳಿದ್ದು, ಮಹಿಳೆಯರಿಗೆ ಏನು ಧರಿಸಬೇಕೆಂದು ಹೇಳುವ ಮೂಲಕ ನೀವು ಹೇಗೆ ಸಬಲೀಕರಣ ಮಾಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

“ವಿದ್ಯಾರ್ಥಿಗಳ ಹಿನ್ನೆಲೆಯನ್ನು ಅಧಿಕಾರಿಗಳು ಅರ್ಥಮಾಡಿಕೊಳ್ಳಬೇಕು. ಕುಟುಂಬದ ಸದಸ್ಯರು ಹುಡುಗಿ ಏನನ್ನು ಧರಿಸಬೇಕು ಎಂದು ಹೇಳಬಹುದು ಮತ್ತು ಅವರು ಧರಿಸಬಹುದು” ಎಂದು ನ್ಯಾಯಮೂರ್ತಿ ಖನ್ನಾ ಹೇಳಿದ್ದಾರೆ.

“ವಿದ್ಯಾರ್ಥಿನಿಯರಿಗೆ ಕಾಲೇಜು ಬಿಟ್ಟು ಹೋಗುವಂತೆ ಹೇಳಬೇಡಿ. ನಿಮ್ಮ ನಿಯಮಗಳ ಆದೇಶವನ್ನು ತಡೆ ಹಿಡಿಯಿರಿ ಎಂದು ಆದೇಶಿಸಿದ್ದಾರೆ.

ಪ್ರಕರಣದ ಹಿನ್ನೆಲೆ ಮತ್ತು ಹೈಕೋರ್ಟ್ ನೀಡಿದ್ದ ಆದೇಶದ ವಿವರಣೆ ಕೆಳಗಿದೆ 

ಲಿಂಕ್ ಒತ್ತಿ- ಮುಂಬೈ ಕಾಲೇಜಿನ ಹಿಜಾಬ್ ನಿಷೇಧ ನಿರ್ಧಾರ ಎತ್ತಿ ಹಿಡಿದ ಬಾಂಬೆ ಹೈಕೋರ್ಟ್: ವಿದ್ಯಾರ್ಥಿನಿಯರ ಅರ್ಜಿ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...