Homeಕರ್ನಾಟಕಶೋಷಿತರು ಅಧಿಕಾರ ನಡೆಸುವುದನ್ನು ಮನುವಾದಿಗಳು ಸಹಿಸಲ್ಲ : ಸಿಎಂ ಸಿದ್ದರಾಮಯ್ಯ

ಶೋಷಿತರು ಅಧಿಕಾರ ನಡೆಸುವುದನ್ನು ಮನುವಾದಿಗಳು ಸಹಿಸಲ್ಲ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಸಮಾವೇಶದಲ್ಲಿ ಅವರು ಮಾತನಾಡಿದರು.

“ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ. ಜೆಡಿಎಸ್‌ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಂಡವರಲ್ಲ. ಧರಂ ಸಿಂಗ್ ಜೊತೆ ಸರ್ಕಾರ ರಚಿಸಿ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ” ಎಂದು ಹರಿಹಾಯ್ದರು.

“ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ, ಹಣ ಮಾಡುವ ಆಸೆ ಬಂದಿಲ್ಲ. ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಎರಡು ಬಾರಿ ಸಿಎಂ ಆದರೂ, ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು, ನಿಮ್ಮ ನಂಬಿಕೆಗೆ ದ್ರೋಹವೆಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ” ಎಂದರು.

“ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250ರೂ ಡೆಪಾಸಿಟ್ ಕಟ್ಟಿದ್ದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದ್ದರು. ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ‌. ದಲಿತರು, ಶೋಷಿತರು, ಅಲ್ಪಸಂಖ್ಯಾತರ ಹಾಗೂ ಸಮಸ್ತ ಜನರ ಏಳಿಗೆಗಾಗಿ ಮಾತ್ರ ನನ್ನ ಅಧಿಕಾರ ಮುಡಿಪಾಗಿಟ್ಟಿದ್ದೇನೆ” ಎಂದು ಹೇಳಿದರು.

ನಾನು ಜಗ್ಗಲ್ಲ, ಬಗ್ಗಲ್ಲ : ಸಿದ್ದರಾಮಯ್ಯ

“ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ಮಾಡಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ, ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಳುಗಾಡಿಸಲು ಸಾಧ್ಯವಿಲ್ಲ” ಎಂದರು.

“ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ. ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು ಎಸ್‌ಐಟಿ ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು ರಿಕವರಿ ಮಾಡಿ ಆಗಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್ ನಲ್ಲಿದ್ದು ಫ್ರೀಝ್ ಮಾಡಿದ್ದಾರೆ. ಹೀಗಾಗಿ ಹಗರಣವೇ ಅಲ್ಲದ ಮುಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಡಿಯೂರಪ್ಪಗೆ ನಾಚಿಕೆ ಆಗಲ್ವಾ?

“ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ? ಬಿಜೆಪಿ, ಜೆಡಿಎಸ್ ಅಧಿಕಾರಿದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು. ಸುಪ್ರೀಕೋರ್ಟ್‌ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ” ಎಂದು ಪ್ರಶ್ನಿಸಿದರು.

“ಯಡಿಯೂರಪ್ಪ ಅವರು ಚೆಕ್‌ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ” ಎಂದು ಕಿಡಿಕಾರಿದರು.

ಇದನ್ನೂ ಓದಿ : “ಈ ಬಂಡೆ ಸಿದ್ದರಾಮಯ್ಯ ಜೊತೆ ಇದೆ”: ಬಿಜೆಪಿ-ಜೆಡಿಎಸ್ ವಿರುದ್ಧ ಗುಡುಗಿದ ಡಿಕೆಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪರಿಶಿಷ್ಟ ಜಾತಿ ಪಟ್ಟಿಗೆ ಜಮ್ಮು-ಕಾಶ್ಮೀರದ ವಾಲ್ಮೀಕಿ ಸಮುದಾಯ: ಒಕ್ಕೂಟ ಸರ್ಕಾರ

ಜಮ್ಮು ಮತ್ತು ಕಾಶ್ಮೀರದ ವಾಲ್ಮೀಕಿ ಸಮುದಾಯವನ್ನು ಈಗ ಅಧಿಕೃತವಾಗಿ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಬುಧವಾರ ಸಂಸತ್ತಿಗೆ ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಕ್ರಿಯೆಗೊಳಿಸಲಾದ...

ತಿರುಪತಿ ದೇಣಿಗೆ ಕಳ್ಳತನ ಪ್ರಕರಣ: ಕಾನೂನು ಕ್ರಮ ತೆಗೆದುಕೊಳ್ಳವಂತೆ ‘ಸಿಐಡಿ-ಎಸಿಬಿ’ಗೆ ಹೈಕೋರ್ಟ್ ನಿರ್ದೇಶನ

ತಿರುಮಲ ತಿರುಪತಿ ದೇವಸ್ಥಾನದ ಪರಕಮಣಿ (ದೇಣಿಗೆ ಪೆಟ್ಟಿಗೆ) ಕಳ್ಳತನ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಂಧ್ರಪ್ರದೇಶ ಹೈಕೋರ್ಟ್ ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಭ್ರಷ್ಟಾಚಾರ ನಿಗ್ರಹ ದಳ...

ದಲಿತರ ಮನೆಯಲ್ಲಿ ಊಟ ಮಾಡಿದ ಆರ್‌ಎಸ್‌ಎಸ್‌ ಕಾರ್ಯಕರ್ತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಗ್ರಾಮೀಣ ಭಾರತದ ಕೆಲವು ಭಾಗಗಳಲ್ಲಿ ಜಾತಿ ಪೂರ್ವಾಗ್ರಹಗಳು ಎಷ್ಟು ಆಳವಾಗಿ ಉಳಿದಿವೆ ಎಂಬುದನ್ನು ನೆನಪಿಸುವ ರೀತಿಯಲ್ಲಿ, ಮಧ್ಯಪ್ರದೇಶದ ರೈಸೇನ್ ಜಿಲ್ಲೆಯ ಹಳ್ಳಿಯೊಂದರಿಂದ ಸಾಮಾಜಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆಯ ಪ್ರಕರಣ ಬೆಳಕಿಗೆ ಬಂದಿದೆ. ಆರ್‌ಎಸ್‌ಎಸ್...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ. ಡಿಸೆಂಬರ್...

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...