Homeಮುಖಪುಟ"ನೀವು ಮಾತನಾಡುವ ಟೋನ್ ಸರಿಯಿಲ್ಲ" : ರಾಜ್ಯಸಭೆ ಸಭಾಪತಿ ವಿರುದ್ದ ಸಿಡಿಮಿಡಿಗೊಂಡ ಜಯಾ ಬಚ್ಚನ್ ;...

“ನೀವು ಮಾತನಾಡುವ ಟೋನ್ ಸರಿಯಿಲ್ಲ” : ರಾಜ್ಯಸಭೆ ಸಭಾಪತಿ ವಿರುದ್ದ ಸಿಡಿಮಿಡಿಗೊಂಡ ಜಯಾ ಬಚ್ಚನ್ ; ಕ್ಷಮೆ ಕೇಳುವಂತೆ ಆಗ್ರಹ

- Advertisement -
- Advertisement -

ಇಂದು ರಾಜ್ಯಸಭೆಯಲ್ಲಿ ಮಾತನಾಡಲು ‘ಜಯಾ ಬಚ್ಚನ್’ ಅವರನ್ನು ಆಹ್ವಾನಿಸುವ ವೇಳೆ ಸಭಾಪತಿ ಜಗದೀಪ್ ಧನಕರ್ ‘ಜಯಾ ಅಮಿತಾಬ್ ಬಚ್ಚನ್’ ಎಂದು ಕರೆದಿದ್ದಕ್ಕೆ ಜಯಾ ಬಚ್ಚನ್ ಆಕ್ಷೇಪ ವ್ಯಕ್ತಪಡಿಸಿದರು.

ಸಭಾಪತಿಗಳ ಹೆಸರು ಸಂಭೋದನೆಗೆ ತೀವ್ರ ಸಿಡಿಮಿಡಿಗೊಂಡ ಜಯಾ ಬಚ್ಚನ್, “ನನ್ನ ಜೊತೆ ನೀವು ಮಾತನಾಡುವ ಟೋನ್ ಸರಿಯಿಲ್ಲ ಎಂದರು. ಇದಕ್ಕೆ ದನಿಗೂಡಿಸಿದ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭಾತ್ಯಾಗ ಮಾಡಿದರು.

“ನಾನೊಬ್ಬಳು ಕಲಾವಿದೆ. ದೇಹ ಭಾಷೆ ಮತ್ತು ಅಭಿವ್ಯಕ್ತಿ ನನಗೆ ಅರ್ಥವಾಗುತ್ತದೆ. ನೀವು ಮಾತನಾಡುವ ಟೋನ್ ಸರಿಯಿಲ್ಲ. ನಾವು ಸಹೊದ್ಯೋಗಿಗಳು. ಆದರೆ, ನಿಮ್ಮ ಟೋನ್ ಒಪ್ಪುವಂತದಲ್ಲ” ಎಂದು ಜಯಾ ಬಚ್ಚನ್ ಕಿಡಿಕಾರಿದರು. ಸಭಾಪತಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಭಾಪತಿ ಜಗದೀಪ್ ಧನಕರ್, “ನೀವು ಸೆಲೆಬ್ರಿಟಿಯಾಗಿರಬಹುದು. ಆದರೆ, ಸದನದ ಗೌರವವನ್ನು ಅರ್ಥೈಸಿಕೊಳ್ಳಬೇಕು” ಎಂದರು. ಜಯಾ ಬಚ್ಚನ್ ಪರ ನಿಂತು ಕ್ಷಮೆಯಾಚನೆಗೆ ಒತ್ತಾಯಿಸುತ್ತಿದ್ದ ಪ್ರತಿಪಕ್ಷ ಸದಸ್ಯರ ವಿರುದ್ದ ಸಿಡಿಮಿಡಿಗೊಂಡರು.

“ಜಯಾ ಜೀ ನೀವು ಬಹಳ ಗೌರವವನ್ನು ಸಂಪಾದಿಸಿದ್ದೀರಿ. ನೀವು ನಟಿಯಾದರೆ ಅದು ನಿರ್ದೇಶಕರಿಗೆ ಸಂಬಂಧಿಸಿದ ವಿಷಯ. ಪ್ರತಿದಿನ ನಾನು ಅದನ್ನು ಪುನರಾವರ್ತಿಸಲು ಸಾಧ್ಯವಿಲ್ಲ. ನಿಮ್ಮಿಂದ ಕಲಿಯಬೇಕಾದ ಅಗತ್ಯವೂ ಇಲ್ಲ. ನೀವು ನನ್ನ ಟೋನ್ ಬಗ್ಗೆ ಮಾತನಾಡುತ್ತಿದ್ದೀರಾ? ಸಾಕು ನಿಲ್ಲಿಸಿ, ನೀವು ಏನೇ ಆಗಿರಬಹುದು. ಸದನದ ಗಾಂಭೀರ್ಯವನ್ನು ಕಾಪಾಡಿಕೊಂಡು ನಡೆದುಕೊಳ್ಳುವುದನ್ನು ಕಲಿಯಿರಿ” ಎಂದು ಸಭಾಪತಿ ಧನಕರ್ ಹೇಳಿದರು.

ಬಳಿಕ ಸಭಾಪತಿ ಧನಕರ್ ಗುರಿಯಾಗಿಸಿ ಹೇಳಿಕೆ ನೀಡಿದ್ದಕ್ಕೆ ಜಯಾ ಬಚ್ಚನ್ ವಿರುದ್ದ ರಾಜ್ಯಸಭೆಯ ಸಭಾನಾಯಕ ಜೆಪಿ ನಡ್ಡಾ ಖಂಡನಾ ನಿರ್ಣಯ ಮಂಡಿಸಿದರು.

ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಯಾ ಬಚ್ಚನ್ “ಸಭಾಪತಿಗಳ ಮಾತಿನ ಟೋನ್ ಸರಿ ಇರಲಿಲ್ಲ, ನಾನು ವಿರೋಧಿಸಿದೆ. ನಾವು ಶಾಲಾ ಮಕ್ಕಳಲ್ಲ, ನಮ್ಮಲ್ಲಿ ಕೆಲವರು ಹಿರಿಯ ನಾಗರಿಕರೂ ಇದ್ದಾರೆ. ಸಭಾಪತಿಗಳ ಟೋನ್‌ ನನಗೆ ಬೇಸರ ತರಿಸಿದೆ. ಮುಖ್ಯವಾಗಿ ವಿರೋಧ ಪಕ್ಷದ ನಾಯಕರು ಮಾತನಾಡುವಾಗ ಮೈಕ್ ಆಫ್ ಮಾಡಲಾಗಿದೆ. ಇದು ಸಂಪ್ರದಾಯಕ್ಕೆ ವಿರುದ್ದ. ನೀವು ಪ್ರತಿಪಕ್ಷ ನಾಯಕರಿಗೆ ಮಾತನಾಡಲು ಅವಕಾಶ ನೀಡಬೇಕು” ಎಂದು ಹೇಳಿದರು.

ಮುಂದಿನ ನಡೆಯೇನು? ಎಂದು ಪತ್ರಕರ್ತರು ಕೇಳಿದ್ದಕ್ಕೆ “ಸಭಾಪತಿಗಳು ನಮ್ಮ ಕ್ಷಮೆ ಕೇಳಬೇಕು. ಅವರು ನಮ್ಮನ್ನು ಕೇರ್ ಮಾಡುವುದಿಲ್ಲ ಎಂದಿದ್ದಾರೆ. ಅವರು ಕೇರ್ ಮಾಡಲೇಬೇಕು, ಏಕೆಂದರೆ ನಾವು ಸಂಸತ್ತಿನ ಸದಸ್ಯರು” ಎಂದರು.

ಇದನ್ನೂ ಓದಿ : ಮುಂಬೈ | ಖಾಸಗಿ ಕಾಲೇಜು ಹೇರಿದ್ದ ಹಿಜಾಬ್ ನಿಷೇಧಕ್ಕೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...