Homeಕರ್ನಾಟಕಕೊಪ್ಪಳ | ಅಂಗನವಾಡಿ ಮಕ್ಕಳ ಮೊಟ್ಟೆ ಕಸಿದುಕೊಂಡ ವಿಡಿಯೋ ವೈರಲ್ : ಇಬ್ಬರು ಅಮಾನತು

ಕೊಪ್ಪಳ | ಅಂಗನವಾಡಿ ಮಕ್ಕಳ ಮೊಟ್ಟೆ ಕಸಿದುಕೊಂಡ ವಿಡಿಯೋ ವೈರಲ್ : ಇಬ್ಬರು ಅಮಾನತು

- Advertisement -
- Advertisement -

ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ಬಳಿಕ ವಾಪಸ್ ಕಸಿದುಕೊಂಡ ಆರೋಪದ ಮೇಲೆ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕೇಂದ್ರ 2ರ ಕಾರ್ಯಕರ್ತೆ ಮತ್ತು ಸಹಾಯಕಿಯನ್ನು ಸೇವೆಯಿಂದ (ಗೌರವಧನದ ಸೇವೆ) ಅಮಾನತು ಮಾಡಲಾಗಿದೆ.

ಮಧ್ಯಾಹ್ನ ಊಟಕ್ಕೆ ಕುಳಿತಿದ್ದ ಮಕ್ಕಳ ತಟ್ಟೆಗೆ ಅಂಗನವಾಡಿ ಸಹಾಯಕಿ ಮೊದಲು ಮೊಟ್ಟೆ ಹಾಕಿದ್ದರು. ಮಕ್ಕಳು ಅದನ್ನು ತಿನ್ನಬೇಕು ಎನ್ನುವಷ್ಟರಲ್ಲಿ ವಾಪಸ್ ಕಸಿದುಕೊಂಡಿದ್ದರು. ಈ ಕುರಿತು ಕನ್ನಡ ಮಾಧ್ಯಮವೊಂದು ವರದಿ ಪ್ರಕಟಿಸಿತ್ತು. ಬಳಿಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದನ್ನು ಗಮನಿಸಿದ ಸಾರ್ವಜನಿಕರು ತಪ್ಪಿತಸ್ಥ ಅಂಗನವಾಡಿ ಸಿಬ್ಬಂದಿ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದರು.

ಈ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಅವರು ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮಿ ಜೆ ಮತ್ತು ಸಹಾಯಕಿ ಶೈನಜಾ ಬೇಗಂ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

‘ಗುಂಡೂರು-2ನೇ ಅಂಗನವಾಡಿ ಕೇಂದ್ರಕ್ಕೆ ಪೂರೈಕೆಯಾಗಿರುವ ಮೊಟ್ಟೆಗಳನ್ನು ಫಲಾನುಭವಿಗಳಿಗೆ ವಿತರಿಸದೆ, ಅವರು ಸೇವಿಸುವ ಸಮಯದಲ್ಲಿ ವಾಪಸ್ ಪಡೆದು ದುರುಪಯೋಗಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ : ಶೋಷಿತರು ಅಧಿಕಾರ ನಡೆಸುವುದನ್ನು ಮನುವಾದಿಗಳು ಸಹಿಸಲ್ಲ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಮೋದಿ, ಅಮಿತ್ ಶಾ ರಾಜೀನಾಮೆಗೆ ಖರ್ಗೆ ಒತ್ತಾಯ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ದ ಜಾರಿ ನಿರ್ದೇನಾಲಯ (ಇಡಿ) ದಾಖಲಿಸಿದ್ದ ಹಣ ಅಕ್ರಮ ವರ್ಗಾವಣೆ (ಪಿಎಂಎಲ್‌ಎ) ದೂರು ಸ್ವೀಕರಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿರುವುದನ್ನು ಕಾಂಗ್ರೆಸ್‌ ಸ್ವಾಗತಿಸಿದೆ. ಬಿಜೆಪಿ...

ಹಿಜಾಬ್ ಎಳೆದ ನಿತೀಶ್ ಕುಮಾರ್: ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ ವೈದ್ಯೆ?

ಆಯುಷ್ ವೈದ್ಯೆ ನುಸ್ರತ್ ಪರ್ವೀನ್ ಇತ್ತೀಚೆಗೆ ತಮ್ಮ ನೇಮಕಾತಿ ಪತ್ರವನ್ನು ಪಡೆದಿದ್ದರೂ ಬಿಹಾರ ಸರ್ಕಾರಿ ಸೇವೆಗೆ ಸೇರದಿರಲು ನಿರ್ಧರಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಪಾಟ್ನಾದಲ್ಲಿ ನಡೆದ ಸಕಾfರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ...

ಮಹಿಳೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನ ವಕೀಲರಿಂದ ದೂರು

ಬೆಂಗಳೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳೆಯೊಬ್ಬರ ಹಿಜಾಬ್ ಅನ್ನು ಹಿಡಿದ ಎಳೆದ ವಿಚಾರಕ್ಕೆ ಸಂಬಂಧ ಪಟ್ಟಂತೆ ಅವರ ವಿರುದ್ಧ ಬೆಂಗಳೂರು ಮೂಲದ ವಕೀಲರೊಬ್ಬರು ಮಂಗಳವಾರ ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್...

ಕೇರಳ| ನಿರ್ಗಮಿತ ದಲಿತ ಪಂಚಾಯತ್ ಅಧ್ಯಕ್ಷರ ವಿರುದ್ಧ ‘ಶುದ್ಧೀಕರಣ ಆಚರಣೆ’; ವರದಿ ಕೇಳಿದ ಎಸ್‌ಸಿ/ಎಸ್‌ಟಿ ಆಯೋಗ

ಕೋಝಿಕ್ಕೋಡ್‌ನ ಪೆರಂಬ್ರಾದ ಚಂಗರೋತ್ ಪಂಚಾಯತ್ ಕಚೇರಿಯ ಮುಂದೆ ದಲಿತ ಸಮುದಾಯಕ್ಕೆ ಸೇರಿದ ನಿರ್ಗಮಿತ ಅಧ್ಯಕ್ಷ ಉನ್ನಿ ವೆಂಗೇರಿ ಅವರನ್ನು ಅವಮಾನಿಸಲು "ಶುದ್ಧೀಕರಣ ಆಚರಣೆ" ನಡೆಸಲಾಗಿದೆ ಎಂಬ ಆರೋಪದ ಮೇಲೆ ಕೇರಳ ರಾಜ್ಯ ಪರಿಶಿಷ್ಟ...

ಬೆಳ್ತಂಗಡಿ | ಆಭರಣ ಮಳಿಗೆ ವ್ಯವಸ್ಥಾಪಕನಿಂದ ಮೂವರು ವಿದ್ಯಾರ್ಥಿಗಳಿಗೆ ಹಲ್ಲೆ : ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪಟ್ಟಣದಲ್ಲಿ ಸೋಮವಾರ (ಡಿ.16) ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಂ ವಿದ್ಯಾರ್ಥಿಗಳಿಗೆ ಆಭರಣ ಮಳಿಗೆಯ ವ್ಯವಸ್ಥಾಪಕ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ...

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ರಾಜೀನಾಮೆ

ಡಿಸೆಂಬರ್ 13ರಂದು ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಭೇಟಿ ನೀಡಿದ ಸಂದರ್ಭದಲ್ಲಿ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅವ್ಯವಸ್ಥೆ ಉಂಟಾದ ಹಿನ್ನೆಲೆ, ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಅವರು ತನ್ನ...