Homeಕರ್ನಾಟಕಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ...

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆದ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್

- Advertisement -
- Advertisement -

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.

ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ವಾಪಸ್ ಪಡೆದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕ್ರಮ ಪ್ರಶ್ನಿಸಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ವಿಭಾಗೀಯ ಪೀಠ ನಡೆಸಿದೆ.

ಯತ್ನಾಳ್‌ ಅವರನ್ನು ಪ್ರತಿನಿಧಿಸಿದ್ದ ವಕೀಲ ವೆಂಕಟೇಶ್‌ ದಳವಾಯಿ ಅವರು “ಒಮ್ಮೆ ಸಿಬಿಐ ತನಿಖೆಗೆ ಒಪ್ಪಿಗೆ ನೀಡಿ ಅದನ್ನು ಹಿಂಪಡೆದರೆ ತನಿಖೆ ಮೊಟಕಾಗಲಿದೆಯೇ ಎಂಬುವುದು ನ್ಯಾಯಾಲಯ ಮುಂದಿರುವ ಪ್ರಶ್ನೆ. ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಅಪರಾಧದ ತನಿಖೆ ನಡೆಸಲು ಸಿಬಿಐ ಸಂಪೂರ್ಣ ಸ್ವತಂತ್ರವಾಗಿರುತ್ತದೆ. ಇಲ್ಲಿ ಅರ್ಜಿದಾರರಿಗೆ ಸಂವಿಧಾನದ 131ನೇ ವಿಧಿ ಅನ್ವಯಿಸುವುದು ಊರ್ಜಿತವಾಗುವುದಿಲ್ಲ. ಒಮ್ಮೆ ಸಿಬಿಐ ಪ್ರಕರಣ ದಾಖಲಿಸಿದ ಮೇಲೆ ಅದು ತಾರ್ಕಿಕ ಅಂತ್ಯ ಕಾಣಬೇಕು. ಸಿಬಿಐ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ವಜಾ ಮಾಡಬೇಕು. ಇದರಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಪಾತ್ರ ಇರುವುದಿಲ್ಲ” ಎಂದು ಹೇಳಿದ್ದಾರೆ.

ಸಿಬಿಐ ಪರವಾಗಿ ವಾದ ಮಂಡಿಸಿರುವ ವಿಶೇಷ ಸರ್ಕಾರಿ ಅಭಿಯೋಜಕ ಪಿ ಪ್ರಸನ್ನಕುಮಾರ್‌, “ರಾಜ್ಯ ಸರ್ಕಾರ ಸಿಬಿಐಗೆ ನೀಡಿರುವ ಅನುಮತಿ ಹಿಂಪಡೆದರೂ ಸಿಬಿಐ ಎಫ್‌ಐಆರ್‌ ಬಾಕಿ ಉಳಿಯಲಿದೆ. ಇದು ಪ್ರಮುಖ ವಿಚಾರವಾಗಿದೆ. ಇನ್ನು ಸಿಬಿಐ ಎಫ್‌ಐಆರ್‌ ಪ್ರಶ್ನಿಸಿ ಡಿಕೆ ಶಿವಕುಮಾರ್‌ ಸಲ್ಲಿಸಿದ್ದ ವಿಶೇಷ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್‌ “ಸಿಬಿಐ ಕೇಂದ್ರ ಸರ್ಕಾರದ ಒಂದು ಘಟಕ, ಅದು ಸ್ವತಂತ್ರ ಸಂಸ್ಥೆಯಲ್ಲ. ಸಿಬ್ಬಂದಿ ಮತ್ತು ತರಬೇತಿ ಇಲಾಖೆಯಡಿ ಬರುವ ಸಿಬಿಐಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡುತ್ತದೆ. ಪಶ್ಚಿಮ ಬಂಗಾಳ ಪ್ರಕರಣದಲ್ಲಿ ಸಿಬಿಐ ಸೂಕ್ತ ಪಕ್ಷಕಾರರಲ್ಲ, ಕೇಂದ್ರ ಸರ್ಕಾರ ಸೂಕ್ತ ಪಕ್ಷಕಾರ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಮುಂದೆ ಡಿಕೆ ಶಿವಕುಮಾರ್‌ ಅವರು ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿದ್ದರು. ಇಲ್ಲಿ ರಾಜ್ಯ ಸರ್ಕಾರದ ಪಾತ್ರ ಇರಲಿಲ್ಲ. ಸಿಬಿಐ ಮತ್ತು ಶಿವಕುಮಾರ್‌ ಪಕ್ಷಕಾರರಾಗಿದ್ದರು. ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಪ್ರಕರಣದ ವಿಚಾರವಾಗಿರಲಿಲ್ಲ” ಎಂದಿದ್ದಾರೆ.

“ಸಿಬಿಐಗೆ ಅನುಮತಿ ನೀಡುವ ವಿಚಾರದಲ್ಲಿ ಈ ಪ್ರಕರಣದಲ್ಲಿ ಸರ್ಕಾರ ವಂಚಿಸಿದೆ. ಹಿಂದಿನ ಬಿಜೆಪಿ ಸರ್ಕಾರದ (ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ) ಮೌಖಿಕ ನಿರ್ದೇಶನದ ಮೂಲಕ ಸಿಬಿಐಗೆ ಅನುಮತಿಸಿತ್ತು. ಈಗ ಸರ್ಕಾರ ಬದಲಾಗಿದ್ದು, ನ್ಯಾಯಾಲಯದ ಮುಂದೆ ಬಂದಿದೆ. ಎಫ್‌ಐಆರ್‌ ರದ್ದತಿ ವಿಚಾರದಲ್ಲಿ ಹೈಕೋರ್ಟ್‌ ಆದೇಶವು ಶಿವಕುಮಾರ್‌ಗೆ ಅನ್ವಯಿಸುತ್ತದೆಯೇ ವಿನಾ ರಾಜ್ಯ ಸರ್ಕಾರಕ್ಕಲ್ಲ. ಸಿಬಿಐಗೆ ವಾಸ್ತವಿಕ ವಿಚಾರಗಳು ನ್ಯಾಯಾಲಯದ ಮುಂದೆ ಬರುವುದು ಬೇಕಿಲ್ಲ” ಎಂದು ಹೇಳಿದ್ದಾರೆ.

ಸುದೀರ್ಘ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ. ಕೆಲ ತಿಂಗಳ ಹಿಂದೆಯೇ ಈ ಪ್ರಕರಣದ ಆದೇಶವನ್ನು ನ್ಯಾಯಾಲಯ ಕಾಯ್ದಿರಿಸಿತ್ತು. ಆದರೆ, ಕೆಲವು ವಿಚಾರಗಳಿಗೆ ಸ್ಪಷ್ಟನೆ ಬಯಸಿ ಮತ್ತೆ ಪ್ರಕರಣವನ್ನು ವಿಚಾರಣೆಗೆ ನಿಗದಿಪಡಿಸಿತ್ತು.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ಯುಜಿಸಿ-ನೆಟ್ ರದ್ದತಿ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...