Homeಮುಖಪುಟಗಂಭೀರ ಪ್ರಕರಣಗಳಲ್ಲೂ ಜಾಮೀನಿಗೆ ಆದ್ಯತೆ : ಸುಪ್ರೀಂ ಕೋರ್ಟ್‌

ಗಂಭೀರ ಪ್ರಕರಣಗಳಲ್ಲೂ ಜಾಮೀನಿಗೆ ಆದ್ಯತೆ : ಸುಪ್ರೀಂ ಕೋರ್ಟ್‌

"ಅರ್ಹ ಪ್ರಕರಣಗಳಲ್ಲಿ ಜಾಮೀನು ನಿರಾಕರಿಸುವುದು ಮೂಲಭೂತ ಹಕ್ಕಿನ ಉಲ್ಲಂಘನೆ"

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ 1967 ರಂತಹ ವಿಶೇಷ ಕಾನೂನುಗಳಲ್ಲಿಯೂ ಸಹ ‘ಜಾಮೀನು ನಿಯಮ, ಜೈಲು ವಿನಾಯಿತಿ’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಆಗಸ್ಟ್ 13) ಹೇಳಿದೆ.

ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ತರಬೇತಿ ಶಿಬಿರ ನಡೆಸಲು ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಗೆ ತನ್ನ ಮನೆಯನ್ನು ಬಾಡಿಗೆಗೆ ನೀಡಿದ ಪ್ರಕರಣ ಆರೋಪಿಗೆ ಜಾಮೀನು ನೀಡುವ ವೇಳೆ ಮೇಲಿನಂತೆ ತಿಳಿಸಿದೆ.

“ಜಾಮೀನು ಮಂಜೂರಾತಿ ನೀಡುವ ಪ್ರಕರಣವಿದ್ದಾಗ ನ್ಯಾಯಾಲಯವು ಜಾಮೀನು ನೀಡಲು ಹಿಂಜರಿಯಬಾರದು. ಪ್ರಾಸಿಕ್ಯೂಷನ್‌ನ ಆರೋಪಗಳು ತುಂಬಾ ಗಂಭೀರವಾಗಿರಬಹುದು, ಆದರೆ ನ್ಯಾಯಾಲಯದ ಕರ್ತವ್ಯವು ಕಾನೂನಿನ ಪ್ರಕಾರ ಜಾಮೀನಿಗಾಗಿ ಪ್ರಕರಣವನ್ನು ಪರಿಗಣಿಸುವುದು.  ನ್ಯಾಯಾಲಯಗಳು ಅರ್ಹ ಪ್ರಕರಣಗಳಲ್ಲಿ ಜಾಮೀನು ನಿರಾಕರಿಸಲು ಪ್ರಾರಂಭಿಸಿದರೆ, ಅದು ಆರ್ಟಿಕಲ್ 21 ರ ಅಡಿಯಲ್ಲಿ ನೀಡಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ” ಎಂದು ನ್ಯಾಯಾಧೀಶ ಅಭಯ್ ಓಕಾ ಅವರು ಹೇಳಿದ್ದಾರೆ.

ಜಾಮೀನು ನಿರಾಕರಿಸಿದ ಪಾಟ್ನಾ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ ಜಲಾಲುದ್ದೀನ್ ಖಾನ್‌ಗೆ ನ್ಯಾಯಾಲಯ ಜಾಮೀನು ನೀಡಿದೆ.

ಮೇಲ್ಮನವಿದಾರ ಜಲಾಲುದ್ದೀನ್ ಖಾನ್ ಅವರು ಬಿಹಾರಕ್ಕೆ ಪ್ರಧಾನಿ ಮೋದಿಯವರ ಭೇಟಿಗೆ ಅಡ್ಡಿಪಡಿಸುವ ಯೋಜನೆಗಳಲ್ಲಿ ಭಾಗಿಯಾಗಿದ್ದಾರೆ ಮತ್ತು ನಿಷೇಧಿತ ಪಿಎಫ್‌ಐಗೆ ಸಂಬಂಧಿಸಿದ ಇತರ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ವಿರುದ್ಧ ಐಪಿಸಿಯ ಸೆಕ್ಷನ್ 120, 120 ಬಿ, 121,121 ಎ, 153 ಎ, 153 ಬಿ, 34 ಮತ್ತು ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಲಾಲುದ್ದೀನ್ ಖಾನ್ ಅವರು ಬಾಡಿಗೆಗೆ ನೀಡಿದ್ದ ಮನೆಗೆ ಪೊಲೀಸರು ದಾಳಿ ನಡೆಸಿದಾಗ ಕಾನೂನುಬಾಹಿರ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಅವರು ಜುಲೈ 6 ಮತ್ತು 7, 2022 ರಂದು ಪಿಎಫ್‌ಐ ತರಬೇತಿ ಶಿಬಿರಕ್ಕೆ ತಮ್ಮ ಮನೆಯ ಮೊದಲ ಮಹಡಿಯನ್ನು ಬಾಡಿಗೆಗೆ ನೀಡಿದ್ದರು. ಬಿಹಾರದ ಹೊರಗಿನ ವ್ಯಕ್ತಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.

ಪ್ರಾಸಿಕ್ಯೂಷನ್ ಪ್ರಕಾರ, ಈ ತರಬೇತಿ ಶಿಬಿರವು ನಿಷೇಧಿತ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ ಮತ್ತು ಪಿಎಫ್‌ಐ ಮಾಜಿ ಸದಸ್ಯರನ್ನು ಹೊಸ ಗುಂಪಾಗಿ ಮರುಸಂಘಟಿಸುವ ವಿಶಾಲ ಯೋಜನೆಯ ಭಾಗವಾಗಿದ್ದು, ಭಾರತದಲ್ಲಿ ಮುಸ್ಲಿಮರ ವಿರುದ್ಧದ ದೌರ್ಜನ್ಯಗಳಿಗೆ ಪ್ರತೀಕಾರವಾಗಿ ಹಿಂಸಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವ ಉದ್ದೇಶ ಹೊಂದಿತ್ತು.

ಮೇಲ್ಮನವಿದಾರ ಜಲಾಲುದ್ದೀನ್ ತಾನು ಪಿಎಫ್‌ಐ ಅಥವಾ ಯಾವುದೇ ನಿಷೇಧಿತ ಸಂಘಟನೆಯೊಂದಿಗೆ ಸಂಬಂಧ ಹೊಂದಿಲ್ಲ. ನನ್ನ ಮನೆಯನ್ನು ಬಾಡಿಗೆಗೆ ನೀಡಿದ್ದೆ ಅಷ್ಟೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಈ ಹಿಂದೆ ವಿಶೇಷ ಎನ್‌ಐಎ ನ್ಯಾಯಾಲಯವೂ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಇದನ್ನೂ ಓದಿ : ಪೂರ್ಣಗೊಳ್ಳದ ಅದಾನಿ ವಿರುದ್ದದ ಸೆಬಿ ತನಿಖೆ : ಮತ್ತೊಮ್ಮೆ ಕೋರ್ಟ್‌ ಮೆಟ್ಟಿಲೇರಿದ ವಕೀಲ ವಿಶಾಲ್ ತಿವಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...