Homeಮುಖಪುಟವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ತನಿಖೆಗೆ ವಹಿಸಿದ ಕಲ್ಕತ್ತಾ ಹೈಕೋರ್ಟ್

ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ತನಿಖೆಗೆ ವಹಿಸಿದ ಕಲ್ಕತ್ತಾ ಹೈಕೋರ್ಟ್

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದಿರುವ ದ್ವಿತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯ ಅಮಾನುಷ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ವರ್ಗಾಯಿಸಿದೆ.

ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಹಿರಣ್ಮಯ್ ಭಟ್ಟಾಚಾರ್ಯ ಅವರ ವಿಭಾಗೀಯ ಪೀಠವು, ತನಿಖೆಯನ್ನು ಸ್ವತಂತ್ರ ಏಜೆನ್ಸಿಗೆ ವರ್ಗಾಯಿಸುವಂತೆ ಕೋರಿ ಸಂತ್ರಸ್ತೆಯ ಪೋಷಕರು ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದೆ.

ಅರ್ಜಿಗಳ ವಿಚಾರಣೆ ವೇಳೆ ರಾಜ್ಯ ಪೊಲೀಸರ ತನಿಖೆಯ ಪ್ರಗತಿಯ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, “ಈ ರೀತಿ ತನಿಖೆ ಮುಂದುವರೆದರೆ, ಅದು ಹಳಿ ತಪ್ಪಲಿದೆ ಎಂಬ ಆತಂಕ ಸಂತ್ರಸ್ತೆಯ ಪೋಷಕರಲ್ಲಿದೆ. ಆದ್ದರಿಂದ ಅವರು ಉನ್ನತ ಪರಿಹಾರಕ್ಕಾಗಿ ಕೋರಿದ್ದಾರೆ. ಈ ಪ್ರಕರಣದಲ್ಲಿ ಮತ್ತೊಂದು ಆತಂಕಕಾರಿ ಅಂಶವೆಂದರೆ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ. ಯಾವುದೇ ದೂರು ಇಲ್ಲದಿದ್ದಾಗ ಅಂತಹ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಮೃತರು ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರೂ ಪ್ರಾಂಶುಪಾಲರು ಏಕೆ ದೂರು ನೀಡಿಲ್ಲ ಎಂಬುವುದು ಅಚ್ಚರಿ ಮೂಡಿಸಿದೆ. ತನಿಖೆಯಲ್ಲಿ ಯಾವುದೇ ಮಹತ್ವದ ಪ್ರಗತಿಯಾಗಿಲ್ಲ. ಆಡಳಿತವು ಸಂತ್ರಸ್ತೆ ಅಥವಾ ಆಕೆಯ ಕುಟುಂಬದೊಂದಿಗೆ ಇರಲಿಲ್ಲ. ಪ್ರಾಂಶುಪಾಲರು ಹೇಳಿಕೆಯನ್ನೂ ನೀಡಿಲ್ಲ. ತನಿಖೆಯಲ್ಲಿ ಗಮನಾರ್ಹ ಪ್ರಗತಿಯಿಲ್ಲದೆ, ಸಾಕ್ಷಿ ನಾಶವಾಗುತ್ತದೆ ಎಂಬ ಸಂತ್ರಸ್ತೆಯ ಪೋಷಕರ ಅಳಲನ್ನು ನಾವು ಪರಿಗಣಿಸುತ್ತಿದ್ದೇವೆ. ಆದ್ದರಿಂದ ಅರ್ಜಿದಾರರಿಗೆ ನ್ಯಾಯ ಒದಗಿಸಲು ಮತ್ತು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ನಾವು ತನಿಖೆಯನ್ನು ಸಿಬಿಐಗೆ ವರ್ಗಾಯಿಸುತ್ತೀದ್ದೇವೆ” ಎಂದು ಹೇಳಿದೆ.

ಸ್ಥಳೀಯ ವರದಿಗಳ ಪ್ರಕಾರ, ತರಬೇತಿ ವೈದ್ಯೆಯು ತನ್ನ ರಾತ್ರಿ ಪಾಳಿಯನ್ನು ಮುಗಿಸಿ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ವಿಶ್ರಾಂತಿ ಪಡೆಯಲು ಹೋಗಿದ್ದರವರು ಆಗಸ್ಟ್ 9 ರ ಮುಂಜಾನೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಪ್ರಾಥಮಿಕ ತನಿಖೆಯ ನಂತರ, ಕೋಲ್ಕತ್ತಾ ಪೊಲೀಸರು ಸ್ಥಳೀಯ ಪೊಲೀಸ್ ಪಡೆಯೊಂದಿಗೆ ಕೆಲಸ ಮಾಡಿದ ‘ನಾಗರಿಕ ಸ್ವಯಂಸೇವಕ’ನನ್ನು ಬಂಧಿಸಿದ್ದರು. ಇದು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಎಂದು ಆಕ್ರೋಶ ವ್ಯಕ್ತವಾಗಿತ್ತು.

ಈ ಬಂಧನವನ್ನು ಮುಚ್ಚಿಹಾಕಲಾಗಿದೆ ಎಂದು ಬಣ್ಣಿಸಲಾಗಿದೆ, ರಾಜ್ಯ ಪೊಲೀಸರ ತನಿಖೆಯು ದೋಷಪೂರಿತವಾಗಿದೆ ಎಂದು ವಕೀಲರು ಪ್ರತಿಪಾದಿಸಿದ್ದಾರೆ ಮತ್ತು ಅವರು ನೈಜ ಸಂಗತಿಗಳನ್ನು ಮುಚ್ಚಿಡುವ ಪ್ರಯತ್ನದಲ್ಲಿ ಆರೋಪಿಗಳಿಂದ ಬಲಿಪಶು ಮಾಡಲು ಪ್ರಯತ್ನಿಸುತ್ತಿದ್ದಾರೆ.

ಮೃತ ವೈದ್ಯೆಯ ಪೋಷಕರ ಪರ ವಾದ ಮಂಡಿಸಿದ ಹಿರಿಯ ವಕೀಲ ವಿಕಾಶ್ ರಂಜನ್ ಭಟ್ಟಾಚಾರ್ಯ ಅವರು, ಆಕೆ ಅನಾರೋಗ್ಯದಿಂದ ಬಳಲುತ್ತಿದ್ದಾಳೆ ಎಂದು ಆರಂಭದಲ್ಲಿ ದೂರವಾಣಿ ಕರೆ ಬಂದಿದ್ದು, ಕಾಲೇಜಿಗೆ ತಲುಪಿದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿಸಲಾಗಿತ್ತಾದರೂ, ಮೂರು ಗಂಟೆಗಳ ಕಾಲ ಕಾದರೂ ಆಕೆಯ ಶವ ನೋಡಲು ಅವಕಾಶ ನೀಡಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂನ ಓದಿ : ಆರ್‌ಜಿ ಕರ್ ವೈದ್ಯಕೀಯ ಕಾಲೇಜು ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ; ಘಟನೆ ರಾತ್ರಿ ನಡೆದಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...