Homeಮುಖಪುಟಅದಾನಿಗೆ ಅನುಕೂಲ ಮಾಡಿಕೊಡಲು ವಿದ್ಯುತ್ ರಫ್ತು ಮಾರ್ಗಸೂಚಿಗಳನ್ನು ತಿದ್ದುಪಡಿ ಮಾಡಿದ ಕೇಂದ್ರ ಸರ್ಕಾರ : ವರದಿ

ಅದಾನಿಗೆ ಅನುಕೂಲ ಮಾಡಿಕೊಡಲು ವಿದ್ಯುತ್ ರಫ್ತು ಮಾರ್ಗಸೂಚಿಗಳನ್ನು ತಿದ್ದುಪಡಿ ಮಾಡಿದ ಕೇಂದ್ರ ಸರ್ಕಾರ : ವರದಿ

- Advertisement -
- Advertisement -

ಬಾಂಗ್ಲಾದೇಶಕ್ಕೆ ಪೂರೈಸುವುದಾಗಿ ಒಪ್ಪಂದ ಮಾಡಿಕೊಂಡಿರುವ ವಿದ್ಯುತ್ ಅನ್ನು ಭಾರತದೊಳಗೆ ಮಾರಾಟ ಮಾಡಲು ಅದಾನಿ ಪವರ್‌ಗೆ ಅವಕಾಶ ನೀಡುವ ಸಲುವಾಗಿ ಕೇಂದ್ರ ಸರ್ಕಾರವು ವಿದ್ಯುತ್ ರಫ್ತು ಮಾರ್ಗಸೂಚಿಗಳನ್ನು ತಿದ್ದುಪಡಿ ಮಾಡಿದೆ ಎಂದು ರಾಯಿಟರ್ಸ್ ಬುಧವಾರ ವರದಿ ಮಾಡಿದೆ.

ಈ ಕ್ರಮವು ಬಾಂಗ್ಲಾದೇಶದ ರಾಜಕೀಯ ಬಿಕ್ಕಟ್ಟಿನಿಂದ ಉಂಟಾಗುವ ಸಂಭವನೀಯ ಸಮಸ್ಯೆಗಳಿಂದ ಅದಾನಿ ಪವರ್ ಅನ್ನು ರಕ್ಷಿಸಲು ಸಹಾಯ ಮಾಡುತ್ತದೆ ಎಂದು ವರದಿ ತಿಳಿಸಿದೆ.

ಬಾಂಗ್ಲಾದೇಶಕ್ಕೆ ಪ್ರತ್ಯೇಕವಾಗಿ ವಿದ್ಯುತ್ ಸರಬರಾಜು ಮಾಡುವ ಜನರೇಟರ್‌ಗಳ ಕುರಿತು 2018ರಲ್ಲಿ ಕೇಂದ್ರ ಸರ್ಕಾರವು ಮಾರ್ಗಸೂಚಿಗಳನ್ನು ರೂಪಿಸಿತ್ತು. ಅದರನ್ವಯ ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿರುವ ಅದಾನಿ ಪವರ್‌ನ 1,600-ಮೆಗಾವ್ಯಾಟ್ ವಿದ್ಯುತ್ ಸ್ಥಾವರವು ಪ್ರಸ್ತುತ ಅದು ಉತ್ಪಾದಿಸುವ ಎಲ್ಲಾ ವಿದ್ಯುಚ್ಛಕ್ತಿಯನ್ನು ಮತ್ತೊಂದು ದೇಶಕ್ಕೆ ಪೂರೈಸುವ ಸಾಮರ್ಥ್ಯವನ್ನು ಹೊಂದಿದೆ ಮತ್ತು ಬಾಂಗ್ಲಾದೇಶಕ್ಕೆ ವಿದ್ಯುತ್ ಪೂರೈಸುತ್ತಿದೆ.

ಆಗಸ್ಟ್ 12ರಂದು ಕೇಂದ್ರ ವಿದ್ಯುತ್ ಸಚಿವಾಲಯವು ಮಾರ್ಗಸೂಚಿಗಳನ್ನು ತಿದ್ದುಪಡಿ ಮಾಡಿದ್ದು, ಇದರಿಂದ ಭಾರತದೊಳಗೆ ವಿದ್ಯುತ್ ಮಾರಾಟಕ್ಕೆ ಅನುಕೂಲವಾಗುವಂತೆ ವಿದ್ಯುತ್ ಉತ್ಪಾದನಾ ಕೇಂದ್ರವನ್ನು ಭಾರತೀಯ ಗ್ರಿಡ್‌ಗೆ ಸಂಪರ್ಕಿಸಲು ಸರ್ಕಾರವು ಅನುಮತಿ ನೀಡಬಹುದು ರಾಯಿಟರ್ಸ್ ಹೇಳಿದೆ.

ರಾಯಿಟರ್ಸ್ ಪ್ರಕಾರ, ಹೊರ ದೇಶದಿಂದ ಪಾವತಿ ವಿಳಂಬವಾದರೆ ಭಾರತೀಯ ಗ್ರಿಡ್‌ಗೆ ವಿದ್ಯುತ್ ಮಾರಾಟ ಮಾಡಲು ತಿದ್ದುಪಡಿ ಅನುಮತಿಸುತ್ತದೆ. ಮಾರ್ಗಸೂಚಿಗಳ ತಿದ್ದಪಡಿ ಭಾರತದಲ್ಲಿ ಒಟ್ಟಾರೆ ವಿದ್ಯುತ್ ಲಭ್ಯತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಅದಾನಿ ಗ್ರೂಪ್ ಸಮರ್ಥಿಸಿಕೊಂಡಿದೆ. ಆದರೆ, ಇದು ಅದಾನಿಯನ್ನು ರಕ್ಷಿಸುವ ಪ್ರಯತ್ನ ಎಂದು ವರದಿಗಳು ಹೇಳಿವೆ.

ಬಾಂಗ್ಲಾದೇಶದಲ್ಲಿ ಅದಾನಿ ಪವರ್‌ನ ವಿದ್ಯುಚ್ಛಕ್ತಿ ರಫ್ತು ವಿವಾದದ ಕೇಂದ್ರವಾಗಿದೆ. ಅದಾನಿ ಹೆಚ್ಚಿನ ಬೆಲೆಗೆ ವಿದ್ಯುತ್ ಮಾರುತ್ತಿದೆ ಎಂದು ಬಾಂಗ್ಲಾದ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅದಾನಿ ಸಮೂಹ ಸಂಸ್ಥೆಯು 2017ರಲ್ಲಿ ಸಹಿ ಮಾಡಿದ ಒಪ್ಪಂದದ ಪ್ರಕಾರ, ಅದು ನೆರೆಯ ಬಾಂಗ್ಲಾದೇಶಕ್ಕೆ ವಿದ್ಯುತ್ ಮಾರಾಟ ಮಾಡುತ್ತಿದೆ. ಆದರೆ, ಕಳೆದ ವರ್ಷ, ಬಾಂಗ್ಲಾದೇಶದ ವಿದ್ಯುತ್ ಅಭಿವೃದ್ಧಿ ಮಂಡಳಿಯು ಒಪ್ಪಂದವನ್ನು ಪರಿಷ್ಕರಿಸುವಂತೆ ಕೋರಿ ಕಂಪನಿಗೆ ಪತ್ರ ಬರೆದಿತ್ತು. ಆದರೆ, ಪರಿಷ್ಕರಣೆಯ ಬಗ್ಗೆ ಇದುವರೆಗೆ ಯಾವುದೇ ವರದಿಯಾಗಿಲ್ಲ.

ಇದನ್ನೂ ಓದಿ : ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿಯಿಂದ 100ಕ್ಕೂ ಹೆಚ್ಚು ‘ಇಸ್ಲಾಮೋಫೋಬಿಕ್’ ಹೇಳಿಕೆ: ಹ್ಯೂಮನ್ ರೈಟ್ಸ್ ವಾಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...