Homeಕರ್ನಾಟಕಪ್ರಗತಿಪರ ಚಿಂತಕ, ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ ಮಹೇಶ್‌ ಚಂದ್ರಗುರು ನಿಧನ; ಸಿಎಂ ಸೇರಿದಂತೆ ಹಲವರಿಂದ ಸಂತಾಪ

ಪ್ರಗತಿಪರ ಚಿಂತಕ, ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ ಮಹೇಶ್‌ ಚಂದ್ರಗುರು ನಿಧನ; ಸಿಎಂ ಸೇರಿದಂತೆ ಹಲವರಿಂದ ಸಂತಾಪ

- Advertisement -
- Advertisement -

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಪ್ರಾಧ್ಯಾಪಕ, ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ಅವರು ಮೈಸೂರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎಚ್‌ಸಿ ಮಹದೇವಪ್ಪ ಸೇರಿದಂತೆ ಅವರ ಅಪಾರ ಪ್ರಮಾಣದ ಶಿಷ್ಯವೃಂದ ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಗ್ಯಾಂಗ್ರೀನ್‌ ಕಾರಣದಿಂದ ಕಾಲುನೋವಿನ ಸಮಸ್ಯೆ ಎದುರಿಸುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ (ಆ.17) ಸಂಜೆ 7:30ರ ಸುಮಾರಿಗೆ ಅವರು ಹೃದಯಘಾತದಿಂದ ತಮ್ಮ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ.

ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಪ್ರೊ.ಮಹೇಶ್ ಚಂದ್ರಗುರು ನಂತರ ಮಂಗಳೂರು ವಿ.ವಿಯ ಪತ್ರಿಕೋದ್ಯಮ ಪ್ರಾಧ್ಯಾಪಕರಾಗಿದ್ದರು. ನಂತರ ಮೈಸೂರು ವಿವಿಗೆ ವರ್ಗಾವಣೆಗೊಂಡು ವಿವಿಯ ಪತ್ರಿಕೋದ್ಯಮದಲ್ಲಿ ಹಲವಾರು ಕಾರ್ಯಗಳನ್ನು ಕೈಗೊಳ್ಳಲಾಯಿತು. ಜೊತೆಗೆ ಸದಾಕಾಲ ವಿದ್ಯಾರ್ಥಿ ಸ್ನೇಹಿತರಾಗಿದ್ದ ಅವರು, ವಿವಿ ಅಷ್ಟೇ ಅಲ್ಲದೆ ರಾಜ್ಯದಾದ್ಯಂತ ಅಪಾರ ಪ್ರಮಾಣದ ವಿದ್ಯಾರ್ಥಿ ಬಳಗವನ್ನೇ ಸಂಪಾದಿಸಿದ್ದರು. 2019ರಲ್ಲಿ ಸೇವೆಯಿಂದ ನಿವೃತ್ತರಾದ ಅವರು, ಸಾಮಾಜಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಕೋಮುವಾದದ ವಿರುದ್ಧ ಗಟ್ಟಿ ಧ್ವನಿಯಲ್ಲಿ ಮಾತನಾಡುತ್ತಿದ್ದರು. ಜೊತೆಗೆ, ಮೈಸೂರು ದಸರಾ ವೇಳೆ ಮಹಿಷಾ ದಸರಾ ಆಚರಣೆಯಲ್ಲಿ ಇವರ ಪಾತ್ರ ಪ್ರಮುಖವಾದದ್ದು.

ಸಂತಾಪ ಸೂಚಿಸಿದ ಸಿಎಂ

ಪ್ರೊ. ಮಹೇಶ್‌ ಚಂದ್ರ ಗುರು ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಡಾ.ಮಹೇಶ್ ಚಂದ್ರ ಗುರು ಅವರ ನಿಧನದಿಂದ ಸಮಾಜ ಒಬ್ಬ ಚಿಂತನಶೀಲ ಮಾರ್ಗದರ್ಶಕನನ್ನು ಕಳೆದುಕೊಂಡಿದೆ” ಎಂದು ಕಂಬನಿ ಮಿಡಿದಿದ್ದಾರೆ.

“ನನಗೆ ಆತ್ಮೀಯರಾಗಿದ್ದ ಮೈಸೂರಿನ ಪ್ರಗತಿಪರ ಚಿಂತಕ ಡಾ.ಮಹೇಶ್ ಚಂದ್ರಗುರು ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಮಹೇಶ್ ಚಂದ್ರ ಗುರು ಅವರು ತರಗತಿಗಳಿಂದ ಹೊರಗೆ ಕೂಡಾ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು. ಬುದ್ದ, ಬಸವ, ಅಂಬೇಡ್ಕರ್ ಚಿಂತನೆಗಳಿಂದ ಪ್ರಭಾವಿತರಾಗಿದ್ದ ಡಾ.ಮಹೇಶ್ ಚಂದ್ರ ಗುರು ಎಂದೂ ಮೌನಕ್ಕೆ ಮೊರೆಹೋಗದೆ ಮತ್ತು ಪರಿಣಾಮವನ್ನೂ ಲೆಕ್ಕಿಸದೆ ನೇರವಾಗಿ ಮತ್ತು ನಿಷ್ಠುರವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು. ಡಾ.ಮಹೇಶ್ ಚಂದ್ರ ಗುರು ಅವರ ನಿಧನದಿಂದ ಸಮಾಜ ಒಬ್ಬ ಚಿಂತನಶೀಲ ಮಾರ್ಗದರ್ಶಕನನ್ನು ಕಳೆದುಕೊಂಡಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಹೇಳಿದ್ದಾರೆ.

“ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿ, ಪ್ರಸ್ತುತ ವಿದ್ಯಮಾನಗಳಿಗೆ ಪ್ರಖರವಾಗಿ ಸ್ಪಂದಿಸುತ್ತಿದ್ದ ಸೈದ್ಧಾಂತಿಕ ವ್ಯಕ್ತಿ, ಆತ್ಮೀಯರೂ ಆಗಿದ್ದ ಪ್ರೊ.ಮಹೇಶ್ ಚಂದ್ರ ಗುರು ಅವರು ನಮ್ಮನ್ನು ಅಗಲಿದ್ದು ಅತ್ಯಂತ ನೋವಿನ ಸಂಗತಿ.
ಇನ್ನಷ್ಟು ಕಾಲ ಅವರು ನಮ್ಮೊಡನೆ ಮಾರ್ಗದರ್ಶಿ ಶಕ್ತಿಯಾಗಿ ಇರಬೇಕಿತ್ತು. ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಅವರ ವಿದ್ಯಾರ್ಥಿಗಳು, ಸ್ನೇಹಿತರು ಮತ್ತು ಕುಟುಂಬ ವರ್ಗದವರಿಗೆ ದೊರೆಯಲಿ ಎಂದು ನಾನು ಪ್ರಾರ್ಥಿಸುವೆನು” ಎಂದು ಸಚಿವ ಎಚ್‌ಸಿ ಮಹದೇವಪ್ಪ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಆರ್‌ಜಿ ಕರ್ ಹಾಸ್ಪಿಟಲ್ ಕ್ರೈಮ್ ಸ್ಪಾಟ್ ನವೀಕರಣ; ‘ಅವಸರ ಏನಿತ್ತು..?’ ಎಂದು ಪ್ರಶ್ನಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...