Homeಕರ್ನಾಟಕಕಟಿಂಗ್ ಮಾಡಲು ಒತ್ತಾಯಿಸಿದ ದಲಿತ ಯುವಕನನ್ನು ಕತ್ತರಿಯಿಂದ ಇರಿದು ಕೊಂದ ಕ್ಷೌರಿಕ

ಕಟಿಂಗ್ ಮಾಡಲು ಒತ್ತಾಯಿಸಿದ ದಲಿತ ಯುವಕನನ್ನು ಕತ್ತರಿಯಿಂದ ಇರಿದು ಕೊಂದ ಕ್ಷೌರಿಕ

- Advertisement -
- Advertisement -

ದಲಿತ ಯುವಕನೊಬ್ಬ ತನಗೆ ಕ್ಷೌರ ಮಾಡಲು ಒತ್ತಾಯಿಸಿದ ನಂತರ, ಮಾತಿಗೆ ಮಾತು ಬೆಳೆದು ಕ್ಷೌರಿಕ ಕೊಲೆ ಮಾಡಿರುವ ಘಟನೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿದೆ. ಯಮನೂರಪ್ಪ ಬಂಡಿಹಾಳ (23) ಕೊಲೆಯಾದ ಮೃತ ದಲಿತ ಯುವಕನಾಗಿದ್ದಾನೆ.

ಯಮನೂರಪ್ಪ ಕ್ಷೌರ ಮಾಡಿಸಿಕೊಳ್ಳಲು ಸೆಲೂನ್‌ಗೆ ಹೋಗಿದ್ದ ಈ ವೇಳೆ ಸೆಲೂನ್ ಮಾಲೀಕ ಮುದುಕಪ್ಪ ಅಂದಪ್ಪ ಹಡಪದ ಅವರು, ‘ನೀನು ದಲಿತ. ಹಾಗಾಗಿ, ನಾವು ಕ್ಷೌರ ಮಾಡುವುದಿಲ್ಲ’ ಎಂದು ಹೇಳಿದ್ದಾನೆ. ಇದನ್ನ ಯುವಕ ಪ್ರಶ್ನಿಸಿದ್ದು, ಮಾತಿಗೆ ಮಾತು ಬೆಳೆದು ಮುದುಕಪ್ಪ ಹಡಪದ ಕೈಯ್ಯಲ್ಲಿದ್ದ ಕತ್ತರಿಯಿಂದ ಯಮನೂರಪ್ಪ ಹೊಟ್ಟೆಗೆ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಸ್ಥಳೀಯ ಯುವಕ ಧರ್ಮರಾಜ್ ಮಾಹಿತಿ ನೀಡಿದ್ದಾನೆ.

ಸಂಗನಾಳ ಗ್ರಾಮದ ಇಡೀ ದಲಿತ ಸಮುದಾಯದವರನ್ನು ಹೇರ್ ಕಟ್ಟಿಂಗ್ ಮಾಡಿಸಲು ಅವಕಾಶ ನೀಡುತ್ತಿಲ್ಲ. ಯಲಬುರ್ಗಾ ತಾಲೂಕಿಗೆ ಹೋಗಿ ಹೇರ್ ಕಟ್ ಮಾಡಿಸುತ್ತಾ ಬಂದಿದ್ದೇವೆ. ದಲಿತರೆಂಬ ಕಾರಣಕ್ಕೆ ಅಸ್ಪೃಶ್ಯತೆ ಆಚರಣೆ ನಡೆಯುತ್ತಿದೆ ಎಂದು ಗ್ರಾಮದ ದಲಿತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಲವಾರು ಸಮುದಾಯಗಳ ಜನರ ಕ್ಷೌರ ಮಾಡಲಾಗುತ್ತದೆ. ಆದರೆ, ದಲಿತ ಸಮುದಾಯದವರಿಗೆ ಮಾತ್ರ ಮಾಡಲ್ಲ. ಯಾವ ಕಾರಣಕ್ಕೆ ಅಂತ ಪ್ರಶ್ನಿಸಿದರೆ, ಕೊಲೆ ಮಾಡುವ ಹಂತಕ್ಕೆ ಬಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಗನಾಳ‌ ಗ್ರಾಮಕ್ಕೆ ಕೊಪ್ಪಳ ಎಸ್‌ಪಿ ರಾಮ ಎಲ್ ಅರಸಿದ್ದಿ ಭೇಟಿ ನೀಡಿ ಪ್ರಾಥಮಿಕ ಮಾಹಿತಿ ಪಡೆದುಕೊಂಡಿದ್ದಾರೆ. ಈ ಸಂಬಂಧ ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ; ಪ್ರಗತಿಪರ ಚಿಂತಕ, ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ ಮಹೇಶ್‌ ಚಂದ್ರಗುರು ನಿಧನ; ಸಿಎಂ ಸೇರಿದಂತೆ ಹಲವರಿಂದ ಸಂತಾಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...