ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದರ ಪೈಕಿ ಒಬ್ಬರಾದ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಸಿದ್ದರಾಮಯ್ಯ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಇಂದು (ಆ.19) ಬೆಳಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಿರುವ ಕೃಷ್ಣ ಅವರು, ಸಿದ್ದರಾಮಯ್ಯನವರು ಸಲ್ಲಿಸಿರುವ ರಿಟ್ ಅರ್ಜಿಗಳನ್ನು ವಿಚಾರಣೆಗೆತ್ತಿಗೊಳ್ಳದಂತೆ ಕೆಳ ಹಂತದ ನ್ಯಾಯಾಲಯಕ್ಕೆ ಸೂಚನೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಅತ್ತ ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಇಂದು ಬೆಳಿಗ್ಗೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ ನಡೆಯುವ ಸಾಧ್ಯತೆ ಇದೆ.
ಸುಪ್ರೀಂ ಕೋರ್ಟ್‌ನಲ್ಲಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೂಡ ಇಂದೇ ಮಧ್ಯಾಹ್ನ 2.30ರ ಸುಮಾರಿಗೆ ವಿಚಾರಣೆಗೆ ಬರಲಿದೆ ಎನ್ನಲಾಗುತ್ತಿದೆ. ಹಾಗಾಗಿ, ಎರಡೂ ಅರ್ಜಿಗಳ ಆದೇಶ ಏನು ಬರಲಿದೆ ಎಂಬ ಕುತೂಹಲ ಮೂಡಿದೆ.
ಇದನ್ನೂ ಓದಿ : ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಒಪ್ಪಿಗೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸಿದ್ದರಾಮಯ್ಯ; ಇಂದು ಮಧ್ಯಾಹ್ನ ವಿಚಾರಣೆ


