Homeಕರ್ನಾಟಕರಾಜ್ಯಪಾಲರ ವಿರುದ್ದ ಹಲವೆಡೆ ಪ್ರತಿಭಟನೆ : ಮಂಗಳೂರಿನಲ್ಲಿ ಬಸ್‌ಗೆ ಕಲ್ಲು ತೂರಾಟ

ರಾಜ್ಯಪಾಲರ ವಿರುದ್ದ ಹಲವೆಡೆ ಪ್ರತಿಭಟನೆ : ಮಂಗಳೂರಿನಲ್ಲಿ ಬಸ್‌ಗೆ ಕಲ್ಲು ತೂರಾಟ

- Advertisement -
- Advertisement -

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್‌ ಗೆಹ್ಲೋಟ್ ಅವರ ಕ್ರಮ ಖಂಡಿಸಿ ರಾಜ್ಯದ ವಿವಿದೆಡೆ ಪ್ರತಿಭಟನೆ ನಡೆಸಲಾಗುತ್ತಿದೆ.

ಸಿಎಂ ವಿರುದ್ದ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದರ ಹಿಂದೆ ಬಿಜೆಪಿ-ಜೆಡಿಎಸ್‌ ಕೈವಾಡ ಇದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಭಾನುವಾರ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರ ಶಿಕಾರಿಪುರದ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು.

ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಾ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದರು.

ಇಂದು (ಆ.19) ಮಂಗಳೂರು ನಗರದಲ್ಲಿ ಖಾಸಗಿ ಬಸ್‌ ಮೇಲೆ ಕಲ್ಲೂ ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ. ನಗರದ ಸ್ಟೇಟ್ ಬ್ಯಾಂಕ್‌ನಿಂದ ಜೋಕಟ್ಟೆಗೆ ತೆರಳುವ ಮೌಲಾ ‘2’ಸಿಟಿ ಬಸ್‌ಗೆ ಲಾಲ್‌ಬಾಗ್‌ನಲ್ಲಿ ಕಲ್ಲು ತೂರಲಾಗಿದೆ ಎಂದು ತಿಳಿದು ಬಂದಿದೆ.

ಮತ್ತೊಂದೆಡೆ ನಗರದ ಲಾಲ್‌ಬಾಗ್‌ನ ಪಾಲಿಕೆ ಕಚೇರಿ ಎದುರು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ರಸ್ತೆ ತಡೆದು, ಟೈರ್ ಸುಟ್ಟು ಪ್ರತಿಭಟಿಸಿದ್ದಾರೆ. ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ಕಲಬುರಗಿಯಲ್ಲಿ ಕಾಂಗ್ರೆಸ್‌ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ.

ನಗರದ ಕಾಂಗ್ರೆಸ್ ಕಚೇರಿಯಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯಲ್ಲಿ ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಕನೀಝ್ ಫಾತಿಮಾ, ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನಪರಿಷತ್ ಸದಸ್ಯ ಜಗದೇವ್ ಕಾಳಗಿ, ಕಲಬುರಗಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಹಜರ್ ಆಲಂ ಖಾನ್, ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ರಾಜ್ಯಪಾಲರ ವಿರುದ್ದ ಬೃಹತ್ ಪ್ರತಿಭಟನೆ ನಡೆಸಲಾಗಿದೆ.

ನಗರದ ಗಾಂಧಿ ವೃತ್ತ ಸಮೀಪ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌.ಸಿ ಮಹದೇವಪ್ಪ ಮಾತನಾಡಿದರು. ಶಾಸಕರಾದ ತನ್ವೀರ್ ಸೇಠ್, ಕೆ. ಹರೀಶ್ ಗೌಡ, ರವಿಶಂಕರ್, ದರ್ಶನ್ ಧ್ರುವನಾರಾಯಣ, ಅನಿಲ್ ಚಿಕ್ಕಮಾದು, ವಿಧಾನಪರಿಷತ್ ಸದಸ್ಯ ಡಿ. ತಿಮ್ಮಯ್ಯ, ಮಾಜಿ ಸಚಿವೆ ಉಮಾಶ್ರೀ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದೆ. ನಗರದ ಶಿವಪ್ಪ ನಾಯಕ ವೃತ್ತದಿಂದ ಆರಂಭಗೊಂಡ ಮೆರವಣಿಗೆಯಲ್ಲಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ವಿಧಾನಪರಿಷತ್ ಸದಸ್ಯ ಬಲ್ಕಿಷ್ ಬಾನು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್‌. ಪ್ರಸನ್ನ ಕುಮಾರ್, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್‌.ಎಂ ಮಂಜುನಾಥ್ ಗೌಡ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಮುಡಾ ಪ್ರಕರಣ | ಸಿಎಂ ಅರ್ಜಿಗಳನ್ನು ವಿಚಾರಣೆ ನಡೆಸದಂತೆ ಸೂಚಿಸಲು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...