Homeಮುಖಪುಟಮಲಯಾಳಂ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ 'ಜಸ್ಟೀಸ್ ಹೇಮಾ ಸಮಿತಿ' ವರದಿ

ಮಲಯಾಳಂ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

- Advertisement -
- Advertisement -

ಮಲಯಾಳಂ ಸಿನಿಮಾ ರಂಗದಲ್ಲಿ 2017ರಲ್ಲಿ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಕೇರಳ ಸರ್ಕಾರ, ಮಲಯಾಳಂ ಚಿತ್ರರಂಗದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳ ಕುರಿತಂತೆ ವರದಿ ನೀಡಲು ನ್ಯಾಯಮೂರ್ತಿ ಕೆ ಹೇಮಾ ಸಮಿತಿಯನ್ನು ರಚಿಸಿತ್ತು.

ಈ ಸಮಿತಿಯು 2019ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆದರೆ, ಅದರ ಬಹಿರಂಗಕ್ಕೆ ವಿರೋಧ ವ್ಯಕ್ತವಾಗಿತ್ತು. ನಂತರ ಸುದೀರ್ಘ ಸಮಯದ ಕಾನೂನು ಸಮರದ ಬಳಿಕ ಇಂದು (ಆಗಸ್ಟ್ 19, 2024) ಸರ್ಕಾರ ವರದಿ ಬಹಿರಂಗಗೊಳಿಸಿದೆ. ವರದಿಯಲ್ಲಿನ ಅಂಶಗಳು ಮಾಲಿವುಡ್‌ನಲ್ಲಿ ಸಂಚಲನ ಸೃಷ್ಟಿಸಿದೆ.

ವರದಿಯಲ್ಲಿ ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಹೊಸ ಶಾಸನ ಜಾರಿಗೊಳಿಸುವ ಮೂಲಕ ಮತ್ತು ಕುಂದುಕೊರತೆಗಳನ್ನು ಆಲಿಸಲು ಸ್ವತಂತ್ರ ನ್ಯಾಯಮಂಡಳಿ ರಚಿಸುವ ಮೂಲಕ ಮಾತ್ರ ಪರಿಹರಿಸಬಹುದು ಎಂದು ನ್ಯಾಯಮೂರ್ತಿ ಹೇಮಾ ಸಮಿತಿ ಸಲಹೆ ನೀಡಿದೆ.

ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಲೈಂಗಿಕ ಬೇಡಿಕೆಗಳು, ಲೈಂಗಿಕ ಕಿರುಕುಳ, ದುರುಪಯೋಗ ಮತ್ತು ಕೆಲಸದ ಸ್ಥಳದಲ್ಲಿ ಆಕ್ರಮಣ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಸಮಿತಿಯ ಅಧ್ಯಯನವು ಬಹಿರಂಗಪಡಿಸಿದೆ.

ಮಹಿಳೆಯರು ಸಾರಿಗೆ ಮತ್ತು ವಸತಿ ಸಮಸ್ಯೆಗಳನ್ನು ಕೂಡ ಎದುರಿಸುತ್ತಾರೆ. ಅವರಿಗೆ ಶೌಚಾಲಯಗಳು ಮತ್ತು ಚಲನಚಿತ್ರ ಸೆಟ್‌ಗಳಲ್ಲಿ ಬಟ್ಟೆ ಬದಲಾಯಿಸುವ ಕೊಠಡಿಗಳಂತಹ ಮೂಲಭೂತ ಸೌಲಭ್ಯಗಳ ಕೊರತೆಯು ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗುತ್ತದೆ ಎಂದು ವರದಿ ಹೇಳಿದೆ. ಹೆಚ್ಚುವರಿಯಾಗಿ, ವರದಿಯು ಮಹಿಳೆಯರಿಗೆ ಸುರಕ್ಷತೆ ಮತ್ತು ಭದ್ರತೆಯ ಕೊರತೆ, ಲಿಂಗ ತಾರತಮ್ಯ, ಪುರುಷ ಪ್ರಾಬಲ್ಯದ ಸಮಸ್ಯೆಗಳನ್ನು ಎತ್ತಿ ತೋರಿಸಿದೆ.

ಮದ್ಯಪಾನ ಮತ್ತು ಮಾದಕ ವಸ್ತುಗಳ ಸೇವನೆ, ಅಸಭ್ಯ ಕಾಮೆಂಟ್‌ಗಳು, ಸೈಬರ್ ಕಿರುಕುಳ, ಪಾವತಿ ಅಸಮಾನತೆ ಇತ್ಯಾದಿಗಳಿಂದ ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ. ಮಹಿಳೆಯರಿಗೆ ತಮ್ಮ ಹಕ್ಕುಗಳ ಬಗ್ಗೆ ತಿಳಿದಿಲ್ಲ. ಅವರ ಕುಂದುಕೊರತೆಗಳನ್ನು ನಿವಾರಿಸಲು ಕಾನೂನುಬದ್ಧವಾಗಿ ರಚಿಸಲಾದ ಪ್ರಾಧಿಕಾರ ಅಗತ್ಯವಿದೆ ಎಂದಿದೆ.

ಚಿತ್ರರಂಗದಲ್ಲಿ ಆಂತರಿಕ ದೂರು ಸಮಿತಿ (ಐಸಿಸಿ) ರಚಿಸುವುದರಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಸಮಿತಿ ಸಲಹೆ ನೀಡಿದೆ. ಐಸಿಸಿಯನ್ನು ವಿಶಾಕಾ VS ರಾಜಸ್ಥಾನದ ಸರ್ಕಾರ (1997) ಮತ್ತು ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ಕಾಯಿದೆ- 2013ರ ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ಮಾಡಲಾಗಿದೆ. ಸಿನಿಮಾದಲ್ಲಿ ಕೆಲಸ ಮಾಡುವ ವ್ಯಕ್ತಿಗಳು ಐಸಿಸಿಯ ಅಧ್ಯಕ್ಷರು ಮತ್ತು ಸದಸ್ಯರಾಗಿರುವುದರಿಂದ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಐಸಿಸಿ ಪರಿಹರಿಸಲು ಸಾಧ್ಯವಿಲ್ಲ. ಐಸಿಸಿಯ ಸದಸ್ಯರು ಚಲನಚಿತ್ರೋದ್ಯಮದವರೇ ಆಗಿದ್ದಲ್ಲಿ ಮಹಿಳೆಯರು ಕಿರುಕುಳದ ವಿವರಗಳನ್ನು ಬಹಿರಂಗಪಡಿಸಲು ಹೆದರುತ್ತಾರೆ ಎಂದು ವರದಿ ಹೇಳಿದೆ.

ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಇತರ ಸಲಹೆಗಳನ್ನು ನೀಡುವ ಮೂಲಕ ವರದಿಯನ್ನು ಮುಕ್ತಾಯಗೊಳಿಸಲಾಗಿದೆ.

ನ್ಯಾಯಮೂರ್ತಿ ಹೇಮಾ ಸಮಿತಿಯು ತನ್ನ ವರದಿಯನ್ನು 2019 ರಲ್ಲಿ ಮುಖ್ಯಮಂತ್ರಿಗೆ ಸಲ್ಲಿಸಿತ್ತು. ವರದಿಯನ್ನು ಸಾರ್ವಜನಿಕಗೊಳಿಸುವ ನಿರ್ಧಾರವನ್ನು ಜುಲೈ 5, 2024ರಲ್ಲಿ ತೆಗೆದುಕೊಳ್ಳಲಾಗಿತ್ತು. ಆದರೆ, ಚಿತ್ರ ನಿರ್ಮಾಪಕ ಸಜಿಮೋನ್ ಪರಾಯಿಲ್ ಸಲ್ಲಿಸಿದ್ದ ರಿಟ್ ಅರ್ಜಿ ಆಧರಿಸಿ ವರದಿ ಸಾರ್ವಜನಿಕಗೊಳಿಸುವುದಕ್ಕೆ ಕೇರಳ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಬಳಿಕ ಹೈಕೋರ್ಟ್‌ನ ಏಕಸದಸ್ಯ ಪೀಠ ರಿಟ್ ಅರ್ಜಿಯನ್ನು ವಜಾಗೊಳಿಸಿ ವರದಿಯನ್ನು ಸಾರ್ವಜನಿಕಗೊಳಿಸಬಹುದು ಎಂದು ಆದೇಶಿಸಿತ್ತು. ಈ ನಡುವೆ ವರದಿಯ ಕುರಿತು ಸಲ್ಲಿಕೆಯಾಗಿದ್ದ ಅನೇಕ ಆರ್‌ಟಿಐ ಅರ್ಜಿಗಳನ್ನು ಸರ್ಕಾರ ತಿರಸ್ಕರಿಸಿತ್ತು. ವರದಿಯ ಮಾಹಿತಿ ನೀಡಿದರೆ, ಹಲವರ ಗೌಪ್ಯತೆಗೆ ಧಕ್ಕೆಯಾಗಲಿದೆ ಎಂದಿತ್ತು.

ರಿಟ್ ಅರ್ಜಿಯಲ್ಲಿ ಕಕ್ಷಿದಾರರಲ್ಲದಿದ್ದರೂ ಚಲನಚಿತ್ರ ನಟಿ ರೆಂಜಿನಿ ಅವರು ಅರ್ಜಿ ಬಹಿರಂಗಗೊಳಿಸಲು ಇದ್ದ ತಡೆ ತೆಗೆದು ಹಾಕಿರುವ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ ಮತ್ತು ಹೊಸ ರಿಟ್ ಅರ್ಜಿಯನ್ನು ಸಲ್ಲಿಸಲು ಅವರಿಗೆ ಅವಕಾಶ ನೀಡಿದೆ. ಏಕ ಸದಸ್ಯ ಪೀಠ ರಿಟ್ ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಸರ್ಕಾರ ವರದಿ ಬಹಿರಂಗಗೊಳಿಸಿದೆ.

ಇದನ್ನೂ ಓದಿ : ತ್ರಿವಳಿ ತಲಾಖ್ ನಿಷೇಧ : ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...