Homeಮುಖಪುಟಸುಪ್ರೀಂ ಕೋರ್ಟ್‌ನ ಒಳಮೀಸಲಾತಿ ತೀರ್ಪು ವಿರೋಧಿಸಿ ಇಂದು ಭಾರತ್ ಬಂದ್‌

ಸುಪ್ರೀಂ ಕೋರ್ಟ್‌ನ ಒಳಮೀಸಲಾತಿ ತೀರ್ಪು ವಿರೋಧಿಸಿ ಇಂದು ಭಾರತ್ ಬಂದ್‌

- Advertisement -
- Advertisement -

ಪರಿಶಿಷ್ಟ ಜಾತಿ ಮತ್ತು ಪಂಗಡದ (ಎಸ್‌ಸಿ/ಎಸ್‌ಟಿ) ಒಳ ಮೀಸಲಾತಿ ಸಂಬಂಧ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿರುವ ತೀರ್ಪು ವಿರೋಧಿಸಿ ‘ಮೀಸಲಾತಿ ಬಚಾವೋ ಸಂಘರ್ಷ ಸಮಿತಿ’ಯು ಇಂದು (ಆ. 21) ಭಾರತ ಬಂದ್‌ಗೆ ಕರೆ ನೀಡಿದೆ. ದಲಿತ, ಆದಿವಾಸಿ ಸಂಘಟನೆಗಳು ಮತ್ತು ಕೆಲ ರಾಜಕೀಯ ಪಕ್ಷಗಳು ಬೆಂಬಲಿಸಿವೆ.

ಎಸ್‌ಸಿ, ಎಸ್‌ಟಿ ವರ್ಗಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ಇತ್ತೀಚೆಗೆ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು. ಇದರ ವಿರುದ್ದ ಉತ್ತರ ಭಾರತದಲ್ಲಿ ಮುಖ್ಯವಾಗಿ ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರಗಳಲ್ಲಿ ಅಸಮಧಾನ ವ್ಯಕ್ತವಾಗಿದೆ. ಹಾಗಾಗಿ, ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ. ಕರ್ನಾಟಕದಲ್ಲಿ ಪೂರ್ಣ ಪ್ರಮಾಣದಲ್ಲಿ ಬಂದ್ ಆಗದಿದ್ದರೂ, ಅಲ್ಲಲ್ಲಿ ಪ್ರತಿಭಟನೆಗಳು ನಡೆಯುವ ಸಾಧ್ಯತೆಯಿದೆ.

ಮೀಸಲಾತಿ ವಿಷಯ ಮಾತ್ರವಲ್ಲದೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ನ್ಯಾಯ ಮತ್ತು ಸಮಾನತೆ ಒದಗಿಸುವುದೂ ಸೇರಿದಂತೆ ಹಲವು ಬೇಡಿಕೆಗಳ ಪಟ್ಟಿಯನ್ನು ದಲಿತ ಮತ್ತು ಆದಿವಾಸಿ ಸಂಘಟನೆಗಳ ರಾಷ್ಟ್ರೀಯ ಒಕ್ಕೂಟವು (ಎನ್‌ಎಸಿಡಿಎಒಆರ್‌) ಸರ್ಕಾರದ ಮುಂದಿಟ್ಟಿದೆ.

ಬಂದ್‌ ವೇಳೆ ದೇಶದಾದ್ಯಂತ, ಮುಖ್ಯವಾಗಿ ರಾಜಸ್ಥಾನದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಪೊಲೀಸರು ಸಿದ್ದತೆ ಮಾಡಿಕೊಂಡಿದ್ದಾರೆ. ರಾಜಸ್ಥಾನದ ಪೊಲೀಸ್ ಮಹಾನಿರ್ದೇಶಕ ಯು.ಆರ್ ಸಾಹೂ ಅವರು ಎಲ್ಲಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಬಂದ್‌ಗೆ ಕರೆ ಕೊಟ್ಟಿರುವ ಸಂಘಟನೆಗಳ ಜೊತೆ ಮಾತುಕತೆ ನಡೆಸುವಂತೆ ಸೂಚಿಸಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

ಬಂದ್‌ ವೇಳೆ ಆಸ್ಪತ್ರೆಗಳು, ತುರ್ತು ಆಂಬ್ಯುಲೆನ್ಸ್ ಸೇವೆಗಳು, ವೈದ್ಯಕೀಯ ಸೇವೆಗಳು, ಪೊಲೀಸ್ ಸೇವೆಗಳು ಎಂದಿನಂತೆ ಇರಲಿದೆ. ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು, ಶಾಲಾ-ಕಾಲೇಜುಗಳು ಕೂಡಾ ತೆರೆದಿರಲಿದೆ ಎಂದು ವರದಿಯಾಗಿದೆ. ಪಶ್ಚಿಮ ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ಕಾವು ಹೆಚ್ಚಾಗಿರುವ ಸಾಧ್ಯತೆ ಹಿನ್ನೆಲೆ, ಪೊಲೀಸರು ಅಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ರಾಹುಲ್ ಪೌರತ್ವ ಪ್ರಶ್ನಿಸಿ ಸುಬ್ರಮಣಿಯನ್ ಸ್ವಾಮಿ ಅರ್ಜಿ; ಪಿಐಎಲ್ ಪೀಠಕ್ಕೆ ವರ್ಗಾಯಿಸಿದ ದೆಹಲಿ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....