Homeಮುಖಪುಟಛತ್ತೀಸ್‌ಗಢ: ರಾಯಗಢದಲ್ಲಿ ಬುಡಕಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; 6 ಜನರ ಬಂಧನ

ಛತ್ತೀಸ್‌ಗಢ: ರಾಯಗಢದಲ್ಲಿ ಬುಡಕಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; 6 ಜನರ ಬಂಧನ

- Advertisement -
- Advertisement -

ಛತ್ತೀಸ್‌ಗಢ ರಾಜ್ಯದ ರಾಯಗಢ ಜಿಲ್ಲೆಯಲ್ಲಿ 27 ವರ್ಷದ ಬುಡಕಟ್ಟು ಮಹಿಳೆ ಮೇಲೆ ಆರು ಮಂದಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಪುಸೌರ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಸೋಮವಾರ ಸಂತ್ರಸ್ತೆ ರಕ್ಷಾಬಂಧನ ಹಬ್ಬವನ್ನು ಆಚರಿಸಿದ ನಂತರ ಸ್ಥಳೀಯ ಜಾತ್ರೆಗೆ ಭೇಟಿ ನೀಡಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಇಲ್ಲಿನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸಂಬಂಧ ಮಂಗಳವಾರ ಮಹಿಳೆ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು. ದೂರಿನ ಪ್ರಕಾರ, ಕೆಲವು ವ್ಯಕ್ತಿಗಳು ಆಕೆಯನ್ನು ಅಡ್ಡಗಟ್ಟಿ ಬಲವಂತವಾಗಿ ಹತ್ತಿರದ ಕೊಳದ ದಡಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಇದುವರೆಗೆ ಆರು ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 70(1) ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಘಟನೆಯನ್ನು ಅತ್ಯಂತ ಗಂಭೀರವಾಗಿದೆ ಮತ್ತು ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

“ರಾಯಗಢ್‌ನ ಪುಸೌರ್ ಪ್ರದೇಶದಲ್ಲಿ ನಡೆದ ಅತ್ಯಾಚಾರ ಘಟನೆಯು ತುಂಬಾ ಗಂಭೀರವಾಗಿದೆ. ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಬೇಕು ಮತ್ತು ಆರೋಪಿಗಳಿಗೆ ಶಿಕ್ಷೆಯಾಗುವವರೆಗೆ ಸಂತ್ರಸ್ತೆಗೆ ರಕ್ಷಣೆ ನೀಡಬೇಕು. ಸಂತ್ರಸ್ತೆಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಬೇಕು” ಎಂದು ಬಘೇಲ್ ತಮ್ಮ ‘ಎಕ್ಸ್’ ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...