ಅಗತ್ಯ ಬಿದ್ದರೆ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸಿಎಂ, “ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ, ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ” ಎಂದಿದ್ದಾರೆ.
“ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ನನ್ನ ವಿರುದ್ಧ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲದೆ ಮತ್ತೇನು?” ಎಂದು ಸಿಎಂ ಪ್ರಶ್ನಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ.@hd_kumaraswamy ಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ನನ್ನ ವಿರುದ್ಧ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.…
— CM of Karnataka (@CMofKarnataka) August 21, 2024
“ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್‌ಐಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದ್ದಾಗ್ಯೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ಐಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ” ಎಂದಿದ್ದಾರೆ.
ಕುಮಾರಸ್ವಾಮಿ ಸುದ್ದಿಗೋಷ್ಠಿ
ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಬೆನ್ನಲ್ಲೇ, ಗಣಿ ಅಕ್ರಮ ಪ್ರಕರಣದಲ್ಲಿ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಎಸ್ಐಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ. ಈ ಹಿನ್ನೆಲೆ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ನಡೆಸಿದರು.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಹೆಚ್‌ಡಿಕೆ, “ಯಾವುದೋ ಸತ್ತು ಹೋಗಿರುವ ಪ್ರಕರಣ ಇಟ್ಟುಕೊಂಡು ನನ್ನ ಹಣಿಯಲು ಪ್ರಯತ್ನಿಸುತ್ತಿದ್ದಾರೆ. ಹಿಡಿದರೆ ಸ್ವಲ್ಪ ದೊಡ್ಡ ಕೇಸ್‌ಗಳನ್ನು ಹಿಡಿಯಿರಿ” ಎಂದು ವ್ಯಂಗ್ಯವಾಡಿದರು.
ಏನಾದರೂ ಮಾಡಿ ಕುಮಾರಸ್ವಾಮಿಯನ್ನು ಜೈಲಿಗೆ ಕಳುಹಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಕುತಂತ್ರ ಹೆಣೆದಿದ್ದಾರೆ. ನಾನು ಒಂದು ದಿನವಾದರೂ ಜೈಲಿನಲ್ಲಿರಬೇಕು ಎಂಬುದು ಅವರ ಆಸೆ ಎಂದು ಆರೋಪಿಸಿದರು.
ಇದನ್ನೂ ಓದಿ : ಸಿಎಂ ವಿರುದ್ದ ತನಿಖೆಗೆ ಅನುಮತಿ : ರಾಜ್ಯಪಾಲರ ನಡೆ ಖಂಡಿಸಿ ಇಂದು ಪಂಜಿನ ಮೆರವಣಿಗೆ



MAADIDDUNNO MAHARAYA