Homeಮುಖಪುಟನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ | ಮೂವರು ಆರೋಪಿಗಳ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಕುಟುಂಬ

ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ | ಮೂವರು ಆರೋಪಿಗಳ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಕುಟುಂಬ

- Advertisement -
- Advertisement -

ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಅವರ ಕುಟುಂಬ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದೆ.

ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ-ದೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರ ವಿಭಾಗೀಯ ಪೀಠವು ದಾಭೋಲ್ಕರ್ ಕುಟುಂಬದ ಮೇಲ್ಮನವಿ ಪುರಸ್ಕರಿಸಿದ್ದು, ಆರೋಪಿಗಳಾದ ವೀರೇಂದ್ರಸಿನ್ಹ ತಾವಡೆ, ಸಚಿನ್ ಅಂದುರೆ, ಶರದ್ ಕಲಾಸ್ಕರ್, ವಕೀಲ ಸಂಜೀವ್ ಪುನಾಲೇಕರ್ ಮತ್ತು ವಿಕ್ರಮ್ ಭಾವೆ ಅವರಿಗೆ ನೋಟಿಸ್ ಜಾರಿ ಮಾಡಿದೆ. ಇವರು ಬಲಪಂಥೀಯ ಗುಂಪುಗಳಾದ ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು ಎನ್ನಲಾಗಿದೆ.

ಪೀಠವು ಮಹಾರಾಷ್ಟ್ರ ಸರ್ಕಾರ ಮತ್ತು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಕೂಡ ನೋಟಿಸ್ ಜಾರಿಗೊಳಿಸಿದೆ. ವಕೀಲ ವಿವೇಕ್ ಪಾಟೀಲ್ ಮೂಲಕ ದಾಭೋಲ್ಕರ್ ಕುಟುಂಬ ಮೇಲ್ಮನವಿ ಸಲ್ಲಿಸಿದೆ.

ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ ಸಂಬಂಧ ಮೇ 10, 2024 ರಂದು ತೀರ್ಪು ನೀಡಿದ್ದ ವಿಶೇಷ ನ್ಯಾಯಾಲಯ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು ಸೆಕ್ಷನ್ 34ರ (ಸಾಮಾನ್ಯ ಉದ್ದೇಶ) ಅಡಿ ಸಚಿನ್ ಅಂದುರೆ ಮತ್ತು ಶರದ್ ಕಲಾಸ್ಕರ್ ಅವರನ್ನು ದೋಷಿಗಳೆಂದು ಘೋಷಿಸಿದೆ.

ಕೊಲೆ, ಸಾಮಾನ್ಯ ಉದ್ದೇಶ ಮತ್ತು ಕ್ರಿಮಿನಲ್ ಪಿತೂರಿ ಆರೋಪಗಳನ್ನು ಎದುರಿಸುತಿದ್ದ ಇತರ ಮೂವರು ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಇನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ)ನ ಸೆಕ್ಷನ್ 16 (ಭಯೋತ್ಪಾದಕ ಕೃತ್ಯ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳಡಿ ಐವರು ಆರೋಪಿಗಳಲ್ಲಿ ಯಾರನ್ನೂ ದೋಷಿ ಎಂದು ಘೋಷಿಸಿಲ್ಲ.

ಆರೋಪಿಗಳು ದಾಭೋಲ್ಕರ್ ಅವರನ್ನು ಕೊಲ್ಲುವ ಉದ್ದೇಶ ಹೊಂದಿದ್ದರು ಮತ್ತು ಅದಕ್ಕಾಗಿ ಸಂಚು ರೂಪಿಸಿದ್ದರು ಎಂಬ ವಿಶೇಷ ನ್ಯಾಯಾಲಯ ಉಲ್ಲೇಖಿಸಿದ ಅಂಶಗಳನ್ನು ದಾಭೋಲ್ಕರ್ ಕುಟುಂಬ ತಮ್ಮ ಮೇಲ್ಮನವಿಯಲ್ಲಿ ಎತ್ತಿ ತೋರಿಸಿದೆ. ಅಂತಿಮವಾಗಿ ಆರೋಪಿಗಳನ್ನು ಐಪಿಸಿ ಮತ್ತು ಇತರ ನಿಬಂಧನೆಗಳಡಿ ದೋಷಿಗಳು ಎಂದು ಘೋಷಿಸುವಲ್ಲಿ ಕೆಳ ನ್ಯಾಯಾಲಯ ಎಡವಿದೆ ಎಂದು ದೂರಿದೆ.

ಪ್ರಕರಣದಲ್ಲಿ ಯುಎಪಿಎ ಕಾನೂನಿನ ಅನ್ವಯಕ್ಕೆ ಸಂಬಂಧಿಸಿದಂತೆ ಸಾಕ್ಷ್ಯವನ್ನು ಸರಿಯಾಗಿ ವಿಚಾರಣೆ ನಡೆಸುವಲ್ಲಿ ವಿಶೇಷ ನ್ಯಾಯಾಲಯ ವಿಫಲವಾಗಿದೆ ಎಂದು ದಾಭೋಲ್ಕರ್ ಕುಟುಂಬ ಆರೋಪಿಸಿದೆ. ಕೊಲೆ, ಕ್ರಿಮಿನಲ್ ಪಿತೂರಿ, ಯುಎಪಿಎ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಲ್ಲಾ ಐವರು ಆರೋಪಿಗಳನ್ನು ದೋಷಿ ಎಂದು ಘೋಷಿಸಲು ಹೈಕೋರ್ಟ್‌ಗೆ ಒತ್ತಾಯಿಸಿದೆ.

ಇದನ್ನೂ ಓದಿ : ಮಹಿಳೆಯರ ಮೇಲಿನ ಅಪರಾಧ ಪ್ರಕರಣ ಎದುರಿಸುತ್ತಿರುವ 151 ಸಂಸದರು-ಶಾಸಕರು, 16 ಜನರ ಮೇಲೆ ರೇಪ್ ಕೇಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...