Homeಕರ್ನಾಟಕರಾಜ್ಯಪಾಲರು ಸಂವಿಧಾನ ವಿರೋಧಿ ಕೆಲಸದಲ್ಲಿ ತೊಡಗಿದ್ದಾರೆ : ಎದ್ದೇಳು ಕರ್ನಾಟಕ ಕಿಡಿ

ರಾಜ್ಯಪಾಲರು ಸಂವಿಧಾನ ವಿರೋಧಿ ಕೆಲಸದಲ್ಲಿ ತೊಡಗಿದ್ದಾರೆ : ಎದ್ದೇಳು ಕರ್ನಾಟಕ ಕಿಡಿ

- Advertisement -
- Advertisement -

ರಾಜ್ಯಪಾಲರು ಪ್ರಜಾಪ್ರಭುತ್ವದ ಆಶಯವನ್ನು ಭಗ್ನಗೊಳಿಸಿ ಸಂವಿಧಾನ ವಿರೋಧಿಗಳಂತೆ ನಡೆದುಕೊಂಡಿರುವುದು ಖಂಡನೀಯ ಎಂದು ಎದ್ದೇಳು ಕರ್ನಾಟಕ ಸಂಘಟನೆ ಕಿಡಿಕಾರಿದೆ.

ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಇಂದು (ಆ.22) ಸುದ್ದಿಗೋಷ್ಠಿ ನಡೆಸಿದ ಮಾತನಾಡಿದ ಸಂಘಟನೆಯ ಪ್ರಮುಖರು,”ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ರಾಜ್ಯ ವಿರೋಧಿ ಹಾಗೂ ಜನ ವಿರೋಧಿ ನಡೆ ಖಂಡನೀಯ. ಕಾಂಗ್ರೆಸ್‌ ಪಕ್ಷ ತನ್ನ ಮಂಪರಿನಿಂದ ಹೊರಬರಬೇಕು. ದೇಶ ಒಡೆಯುವ ಶಕ್ತಿಗಳ ವಿರುದ್ದ ಕಠಿಣ ಕ್ರಮಗಳಿಗೆ ಮುಂದಾಗಬೇಕು. ಜನಪರ ಆಡಳಿತ ನೀಡುವ ಮೂಲಕ ಅವರ ಸಂಚುಗಳನ್ನು ವಿಫಲಗೊಳಿಸಬೇಕು” ಎಂದರು.

ನ್ಯಾಯಾಲಯವು ರಾಜ್ಯಪಾಲರ ಕೀಳುಮಟ್ಟದ ರಾಜಕೀಯ ನಡೆಯನ್ನು ತಿರಸ್ಕರಿಸುವ ಮೂಲಕ ದೇಶದ ಸಂವಿಧಾನಿಕ ಮೌಲ್ಯಗಳ ಘನತೆಯನ್ನು ಕಾಪಾಡಬೇಕು. ರಾಜ್ಯ ಸರ್ಕಾರ ಜನಪರ ದಿಕ್ಕಿನಲ್ಲಿ ಸಾಗುವಂತೆ ನೋಡಿಕೊಳ್ಳುವುದು ವಿರೋಧ ಪಕ್ಷಗಳ ಜವಾಬ್ದಾರಿ. ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಕಳೆದ 15 ತಿಂಗಳಲ್ಲಿ ಜನರ ಬದುಕಿನ ಒಂದೇ ಒಂದು ಸಮಸ್ಯೆಯನ್ನು ಕೈಗೆತ್ತಿಕೊಂಡು ವಿಧಾನಸಭೆಯಲ್ಲಿ ಗಟ್ಟಿ ದನಿ ಎತ್ತಿಲ್ಲ ಅಥವಾ ಬೀದಿಗಿಳಿದು ಹೋರಾಟ ನಡೆಸಿಲ್ಲ. ಅದು ಮಾಡುತ್ತಿರುವ ಏಕೈಕ ಕೆಲಸವೆಂದರೆ ಜನರು ಆಯ್ಕೆ ಮಾಡಿರುವ ಸಂವಿಧಾನಿಕ ಸರ್ಕಾರವನ್ನು ಬುಡಮೇಲು ಮಾಡಲು ಯತ್ನಿಸುವುದು. ಇದು ರಾಜ್ಯದ್ರೋಹಿ ಹಾಗೂ ಜನ ವಿರೋಧಿ ಕೆಲಸವಾಗಿದೆ ಎಂದು ಆರೋಪಿಸಿದರು.

ಭ್ರಷ್ಟ ಹಾಗೂ ದುಷ್ಟ ಶಕ್ತಿಗಳಿಗೆ ಆಶ್ರಯತಾಣವಾಗಿರುವ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಮಾತನಾಡುವುದು ಹಾಸ್ಯಾಸ್ಪದ ವಿಚಾರವಾಗಿದೆ. ಸಿಬಿಐ, ಇಡಿ, ಐಟಿಗಳಂತಹ ಸಂವಿಧಾನಿಕ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ತಳ್ಳುವುದು, ಆಪರೇಷನ್‌ ಕಮಲ ಮಾಡಿ ಜನರು ಆಯ್ಕೆ ಮಾಡಿದ ಸರ್ಕಾರಗಳನ್ನು ಕೆಡವುದು ಅದರ ಹವ್ಯಾಸವಾಗಿಬಿಟ್ಟಿದೆ. ಇಲ್ಲಿ ಈ ಬಾರಿ ರಾಜ್ಯಪಾಲರನ್ನು ಬಳಸಿಕೊಂಡು ಜನರು ಆರಿಸಿದ ಸರ್ಕಾರವನ್ನು ಕೆಡವುವ ಪ್ರಯತ್ನದಲ್ಲಿ ತೊಡಗಿದೆ ಎಂದು ಹೇಳಿದರು.

ಅವಕಾಶವಾದವನ್ನು ಅರೆದು ಕುಡಿದಿರುವ ಜೆಡಿಎಸ್‌ ಆತ್ಮವಂಚನೆ ಮಾಡಿಕೊಳ್ಳುತ್ತಾ ಬಿಜೆಪಿಯ ದುಷ್ಟ ರಾಜಕಾರಣಕ್ಕೆ ವೇದಿಕೆಯನ್ನು ಒದಗಿಸುತ್ತಿದೆ. ಈ ಎರಡು ಪಕ್ಷಗಳ ಕಪಟ ರಾಜಕಾರಣವನ್ನು ನಾವು ತೀವ್ರ ರೀತಿಯಲ್ಲಿ ಖಂಡಿಸುತ್ತೇವೆ. ಈ ನಡತೆಯನ್ನು ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಈ ಕೂಡಲೇ ತಿದ್ದಿಕೊಳ್ಳದಿದ್ದಲ್ಲಿ ರಾಜ್ಯದ ಜನತೆಯಿಂದ ಇನ್ನೂ ತೀವ್ರ ಸ್ವರೂಪದ ಆಕ್ರೋಶವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಾವು ಕಾಂಗ್ರೆಸ್‌ ಪಕ್ಷದ ಆಡಳಿತದಿಂದ ಸಂತುಷ್ಟರಾಗಿದ್ದೇವೆ ಎಂದಲ್ಲ. 2023ರ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡುವುದರಲ್ಲಿ ನಾಗರಿಕ ಸಂಘಟನೆಗಳ ದೊಡ್ಡ ಪಾತ್ರವಿದೆ. ನಮ್ಮೆಲ್ಲರ ನಿರೀಕ್ಷೆಗೆ ತಕ್ಕಂತೆ ಕಾಂಗ್ರೆಸ್‌ ಆಡಳಿತ ನೀಡುತ್ತಿಲ್ಲ ಎಂಬ ಪ್ರಜ್ಞೆ ನಮಗಿದೆ. ಸೂಕ್ತ ಸಂದರ್ಭದಲ್ಲಿ ನಾವದನ್ನು ಮುಂದಿಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷದ ಗಮನಕ್ಕೆ ಒಂದು ಮುಖ್ಯ ವಿಚಾರ ತರಲೇಬೇಕಿದೆ. ಬಿಜೆಪಿ ಮತ್ತು ಸಂಘಪರಿವಾರದ ಶಕ್ತಿಗಳ ಬಗೆಗಿನ ನಿಮ್ಮ ಮೃದು ಧೋರಣೆಯನ್ನು ಈಗಲಾದರೂ ಕೈಬಿಡಿ. ನಿಮ್ಮ ಪಕ್ಷದ ಹಲವು ಸ್ತರಗಳಲ್ಲಿ ಬಲಪಂಥೀಯ ಶಕ್ತಿಗಳ ಜೊತೆ ಮುಂದುವರೆಸಿಕೊಂಡು ಬರುತ್ತಿರುವ ಒಳ ಸಂಬಂಧಗಳನ್ನು, ಒಳ ಒಪ್ಪಂದಗಳನ್ನು ಈಗಲಾದರೂ ತುಂಡರಿಸಿಕೊಳ್ಳಿ. ಸಂವಿಧಾನಿಕ ಆಶಯಗಳ ಜೊತೆ ದೃಢವಾಗಿ ನಿಲ್ಲಿ. ದೇಶ ಒಡೆಯುವ ಶಕ್ತಿಗಳ ಮೇಲೆ ಕಠಿಣ ಕ್ರಮಗಳಿಗೆ ಮುಂದಾಗಿ. ನಿಜವಾಗಿಯೂ ನೀವು ಬಿಜೆಪಿಗಿಂತ ಭಿನ್ನ ಎಂಬುವುದನ್ನು ಸಾಬೀತುಪಡಿಸುವಂತಹ ಜನಪರ ನಡತೆಗಳ ಮೂಲಕ ಆ ಶಕ್ತಿಗಳಿಗೆ ಈ ರಾಜ್ಯದಲ್ಲಿ ಜಾಗವಿಲ್ಲದಂತೆ ಮಾಡಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಪ್ರಕರಣ : ಆರೋಪಿ ಮೋಹನ್ ನಾಯಕ್ ಜಾಮೀನು ರದ್ದುಗೊಳಿಸಲು ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...