Homeಮುಖಪುಟವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ: ಸಿಎಂ ಸಿದ್ದರಾಮಯ್ಯ

ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ಧರ್ಮ-ಜಾತಿಯ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ. ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು; ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯ್ತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ “21ನೇ ಶತಮಾನಕ್ಕೆ ಮಹಾತ್ಮ ಗಾಂಧೀಜಿ” ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಗಾಂಧೀಜಿಯವರ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಈಗಿನ ಕಾಲಕ್ಕೂ ಪ್ರಸ್ತುತವಾಗಿವೆ.‌ ಗಾಂಧೀಜಿಯವರು ಶಾಂತಿ, ಸತ್ಯ, ನ್ಯಾಯ ಮತ್ತು ಬ್ರಾತೃತ್ವವನ್ನು ಬದುಕಿನುದ್ದಕ್ಕೂ ಆಚರಿಸಿಕೊಂಡು ಬಂದಿದ್ದಾರೆ. ಇಡೀ ವಿಶ್ವವೇ ಪರಸ್ಪರ ಪ್ರೀತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮ್ಮದಿಯಿಂದ ಇರಬಹುದು” ಎಂದರು.

“ಮನುಷ್ಯ ತನ್ನ ನೆಮ್ಮದಿಗಾಗಿ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎನ್ನುವ ಸ್ಟೀಫನ್ ಹಾಕಿಂಗ್ ಅವರ ಮಾತು ನೂರಕ್ಕೆ ನೂರರಷ್ಟು ಸತ್ಯ. ಮನುಷ್ಯ-ಮನುಷ್ಯರ ನಡುವೆ ಸಹಿಷ್ಣುತೆ, ಸೌಹಾರ್ದತೆ ರೂಢಿಸಿಕೊಳ್ಳದಿದ್ದರೆ ಜಗತ್ತು ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕುವೆಂಪು ಅವರ ವಿಶ್ವ ಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ” ಎಂದು ಅವರು ಹೇಳಿದರು.

“ಪ್ರಕೃತಿ ನಮ್ಮ ಅಗತ್ಯಗಳನ್ನು ಈಡೇರಿಸುತ್ತದೆಯೇ ಹೊರತು, ದುರಾಸೆಗಳನ್ನು ಅದು ಪೂರೈಸುವುದಿಲ್ಲ ಎನ್ನುವುದು ಗಾಂಧಿಯವರ ನಂಬಿಕೆಯಾಗಿತ್ತು. ಕೇರಳದ ವಯನಾಡ್ ಮತ್ತು ರಾಜ್ಯದ ನಾನಾ ಕಡೆ ನಡೆಯುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣವಾಗಿದೆ” ಎಂದರು.

“ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ ಅವರ ಕಾಲ್ಗುಣದಿಂದ ರಾಜ್ಯಕ್ಕೆ ಬರಗಾಲ ಬರುತ್ತದೆ ಎಂದು ಸಾರ್ವಜನಿಕ ವ್ಯಕ್ತಿಗಳೇ ಮೌಡ್ಯ ಬಿತ್ತುವ ಕುಟಿಲ ಪ್ರಯತ್ನ ಮಾಡಿದ್ದರು. ಆದರೆ, ಈಗ ಸಿಕ್ಕಾಪಟ್ಟೆ ಮಳೆ ಬರುತ್ತಿದೆ. ಬಹಳ ಮಂದಿ ಶಿಕ್ಷಿತರೇ ಕಂದಾಚಾರ, ಕರ್ಮ ಸಿದ್ಧಾಂತ, ಮೌಡ್ಯವನ್ನು ಆಚರಿಸುತ್ತಾರೆ. ಇದಕ್ಕೆ ಸರಿಯಾದ ವೈಜ್ಞಾನಿಕ ಶಿಕ್ಷಣದ ಕೊರತೆಯೇ ಕಾರಣ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಕರ್ಮ ಸಿದ್ಧಾಂತವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದರು. ಆದರೆ, ಈಗಿನ ಕೆಲವು ಶಿಕ್ಷಿತರೇ ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದಾರೆ” ಎಂದರು ಸಿಎಂ ಬೇಸರ ವ್ಯಕ್ತಪಡಿಸಿದರು.

“ನೆಹರೂ ಅವರು ವೈಜ್ಞಾನಿಕ ಮತ್ತು ವೈಚಾರಿಕ ಮಾರ್ಗದಲ್ಲಿ ಸಮಾಜವನ್ನು ಸನ್ನದ್ದಗೊಳಿಸಿ ದೇಶವನ್ನು ಮುನ್ನಡೆಸುತ್ತಿದ್ದರು. ಸರ್ವರನ್ನೂ ಒಳಗೊಳ್ಳುವ ಮತ್ತು ಅಹಿಂಸೆ ಗಾಂಧಿಯವರ ಮಾರ್ಗವಾಗಿತ್ತು. ಇದನ್ನು ಯುವಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ” ಎಂದರು.

“ದೇಶದ ಶೇ.85 ರಷ್ಟು ಆಸ್ತಿ ಶೇ.1 ಶ್ರೀಮಂತರ ಕೈಗೆ ಸೇರುತ್ತಿದೆ. ಇದು ಅಪಾಯಕಾರಿ. ಈ ಆರ್ಥಿಕ ಅಸಮಾನತೆ ಹೋಗಲಾಡಿಸಲು ಗಾಂಧಿಯವರು ವಿಚಾರಗಳಲ್ಲಿ ಮಾರ್ಗಗಳಿವೆ. ಮಹಾತ್ಮಗಾಂಧಿಯವರು‌ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸುತ್ತೇವೆ.
ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಈಡೇರಿಸಬೇಕಾಗಿದೆ.‌ ಗಾಂಧಿಯವರ ಆಶಯದಂತೆ ರಾತ್ರಿ 12 ಗಂಟೆಗೂ ನಮ್ಮ ಹೆಣ್ಣು ಮಕ್ಕಳು ನಿರ್ಭಯದಿಂದ ಓಡಾಡುವಂತಾಗಬೇಕಿದೆ” ಎಂದು ಹೇಳಿದರು.

ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ರಾಮಚಂದ್ರ ರಾಹಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಕಾರ್ಯಾಧ್ಯಕ್ಷರಾದ ವಿಶುಕುಮಾರ್, ನವದೆಹಲಿ ಸ್ಮಾರಕ ನಿಧಿ ಅಧ್ಯಕ್ಷರಾದ ಸಂಜೋಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ; ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ತಂದೆ-ಮಗನ ವಿರುದ್ಧ 2,144 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...