Homeಅಂತರಾಷ್ಟ್ರೀಯಗಾಜಾದಲ್ಲಿ ಪತ್ರಕರ್ತರ ಹತ್ಯೆ: ಇಸ್ರೇಲ್‌ ಜೊತೆಗಿನ ಸಹಕಾರ ಒಪ್ಪಂದ ಅಮಾನತಿಗೆ ಮಾಧ್ಯಮ ಹಕ್ಕುಗಳ ಸಂಘಟನೆಗಳಿಂದ ಒತ್ತಾಯ

ಗಾಜಾದಲ್ಲಿ ಪತ್ರಕರ್ತರ ಹತ್ಯೆ: ಇಸ್ರೇಲ್‌ ಜೊತೆಗಿನ ಸಹಕಾರ ಒಪ್ಪಂದ ಅಮಾನತಿಗೆ ಮಾಧ್ಯಮ ಹಕ್ಕುಗಳ ಸಂಘಟನೆಗಳಿಂದ ಒತ್ತಾಯ

- Advertisement -
- Advertisement -

“ಇಸ್ರೇಲ್‌ನೊಂದಿಗಿನ ಸಹಕಾರ ಒಪ್ಪಂದವನ್ನು ಅಮಾನತುಗೊಳಿಸಬೇಕು” ಎಂದು ಯುರೋಪಿಯನ್ ಒಕ್ಕೂಟವನ್ನು ಸುಮಾರು 60 ಮಾಧ್ಯಮಗಳು ಮತ್ತು ಹಕ್ಕುಗಳ ಸಂಘಟನೆಗಳು ಸೋಮವಾರ ಒತ್ತಾಯಿಸಿವೆ. ಗಾಜಾದಲ್ಲಿ ಪತ್ರಕರ್ತರ ಹತ್ಯೆ ನಡೆಸುತ್ತಿದೆ ಎಂದು ಎಂದು ಆರೋಪಿಸಿ ನಿರ್ಬಂಧಕ್ಕೆ ಆಗ್ರಹಿಸಿವೆ.

“ಹಮಾಸ್‌ನೊಂದಿಗಿನ ಯುದ್ಧದ ಪ್ರಾರಂಭದಿಂದಲೂ ಇಸ್ರೇಲಿ ಪಡೆಗಳಿಂದ ಹತ್ತಾರು ಸಂಖ್ಯೆಯ ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ. ಈ ರೀತಿಯು ಪುನರಾವರ್ತಿತ ಪತ್ರಿಕಾ ಸ್ವಾತಂತ್ರ್ಯದ ಉಲ್ಲಂಘನೆಗಳಿಗೆ ಪ್ರತಿಕ್ರಿಯೆಯಾಗಿ, ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್‌) ಮತ್ತು 59 ಇತರ ಸಂಸ್ಥೆಗಳು ತನ್ನ ಸಂಘದ ಒಪ್ಪಂದವನ್ನು ಅಮಾನತುಗೊಳಿಸುವಂತೆ ಯುರೋಪಿಯನ್ ಒಕ್ಕೂಟಕ್ಕೆ ಕರೆ ನೀಡುತ್ತಿವೆ. ಇಸ್ರೇಲ್‌ನೊಂದಿಗೆ ಮತ್ತು ಹೊಣೆಗಾರರ ​​ವಿರುದ್ಧ ಉದ್ದೇಶಿತ ನಿರ್ಬಂಧಗಳನ್ನು ಅಳವಡಿಸಿಕೊಳ್ಳಬೇಕು” ಎಂದು ಪತ್ರಕರ್ತರ ಗುಂಪುಗಳು ಜಂಟಿ ಹೇಳಿಕೆಯಲ್ಲಿ ತಿಳಿಸಿವೆ. ಆಗಸ್ಟ್ 29 ರಂದು ಬ್ರಸೆಲ್ಸ್‌ನಲ್ಲಿ ನಡೆಯುವ ಇಯು ವಿದೇಶಾಂಗ ಮಂತ್ರಿಗಳ ಸಭೆಗೆ ಮುಂಚಿತವಾಗಿ ಈ ಬೇಡಿಕೆ ಬಂದಿದೆ.

ಅಕ್ಟೋಬರ್ 7, 2023 ರಂದು ಇಸ್ರೇಲ್‌ನ ಮೇಲೆ ಹಮಾಸ್‌ನ ದಾಳಿಯ ನಂತರದ ಗಾಜಾ ಪಟ್ಟಿಯ ಮೇಲೆ ಇಸ್ರೇಲ್‌ನ ವಿನಾಶಕಾರಿ ಪ್ರತೀಕಾರದ ಆಕ್ರಮಣವು “ದಶಕಗಳಲ್ಲಿ ಪತ್ರಕರ್ತರಿಗೆ ಮಾರಣಾಂತಿಕವಾಗಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

“ಅಕ್ಟೋಬರ್ 7 ರಿಂದ ಗಾಜಾದಲ್ಲಿ 130 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ ಪತ್ರಕರ್ತರು ಮತ್ತು ಮಾಧ್ಯಮ ವೃತ್ತಿಪರರು ಇಸ್ರೇಲಿ ಸಶಸ್ತ್ರ ಪಡೆಗಳಿಂದ ಕೊಲ್ಲಲ್ಪಟ್ಟಿದ್ದಾರೆ. ಅವರಲ್ಲಿ ಕನಿಷ್ಠ 30 ಜನರು ತಮ್ಮ ಕೆಲಸದ ಸಂದರ್ಭದಲ್ಲಿ ಕೊಲ್ಲಲ್ಪಟ್ಟರು, ಮೂವರು ಲೆಬನಾನಿನ ಪತ್ರಕರ್ತರು ಮತ್ತು ಇಸ್ರೇಲಿ ಪತ್ರಕರ್ತರು ಸಹ (ಕೊಲ್ಲಲ್ಪಟ್ಟಿದ್ದಾರೆ) ಅದೇ ಅವಧಿಯಲ್ಲಿ ಸಾವನ್ನಪ್ಪಿದ್ದಾರೆ” ಎಂದು ಪತ್ರದಲ್ಲಿ ಹೇಳಲಾಗಿದೆ.

“ಉದ್ದೇಶಪೂರ್ವಕವಾಗಿ ಅಥವಾ ಅಜಾಗರೂಕತೆಯಿಂದ ಪತ್ರಕರ್ತರನ್ನು ಗುರಿಯಾಗಿಸಿ, ವಿವೇಚನಾರಹಿತವಾಗಿ ಕೊಲ್ಲುವುದು ಯುದ್ಧ ಅಪರಾಧ” ಎಂದು ಅದು ಹೇಳಿದೆ.

ಸದಸ್ಯರಲ್ಲದ ದೇಶಗಳೊಂದಿಗೆ ಇಯು ನ ಅಸೋಸಿಯೇಷನ್ ​​ಒಪ್ಪಂದಗಳು ವ್ಯಾಪಾರ ಸೇರಿದಂತೆ ದ್ವಿಪಕ್ಷೀಯ ಸಂಬಂಧಗಳನ್ನು ನಿಯಂತ್ರಿಸುವ ಒಪ್ಪಂದಗಳಾಗಿವೆ.

ಒಪ್ಪಂದದ ಆರ್ಟಿಕಲ್ 2 “ಮಾನವ ಹಕ್ಕುಗಳು ಮತ್ತು ಪ್ರಜಾಸತ್ತಾತ್ಮಕ ತತ್ವಗಳಿಗೆ ಗೌರವವನ್ನು” ನಿಗದಿಪಡಿಸುತ್ತದೆ ಎಂದು ಆರ್‌ಎಸ್‌ಎಫ್‌ನ ಬ್ರಸೆಲ್ಸ್ ಕಚೇರಿಯ ಮುಖ್ಯಸ್ಥ ಜೂಲಿ ಮಜೆರ್ಜಾಕ್ ಹೇಳಿದ್ದಾರೆ.

“ಇಸ್ರೇಲಿ ಸರ್ಕಾರವು ಈ ನಿಲಯಮವನ್ನು ಸ್ಪಷ್ಟವಾಗಿ ತುಳಿಯುತ್ತಿದೆ. ಇಸ್ರೇಲ್‌ನ ಪ್ರಮುಖ ವ್ಯಾಪಾರ ಪಾಲುದಾರರಾಗಿರುವ ಇಯು, ಇದರಿಂದ ಅಗತ್ಯ ತೀರ್ಮಾನಗಳನ್ನು ತೆಗೆದುಕೊಳ್ಳಬೇಕು ಮತ್ತು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸರ್ಕಾರವು ಪತ್ರಕರ್ತರನ್ನು ಹತ್ಯೆ ಮಾಡುವುದನ್ನು ನಿಲ್ಲಿಸುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲವನ್ನೂ ಮಾಡಬೇಕು. ಗಾಜಾಕ್ಕೆ ಮಾಧ್ಯಮ ಪ್ರವೇಶವನ್ನು ತೆರೆಯುವ ಮೂಲಕ ಪತ್ರಿಕಾ ಸ್ವಾತಂತ್ರ್ಯ ಮತ್ತು ಮಾಹಿತಿಯ ಹಕ್ಕನ್ನು ಗೌರವಿಸಬೇಕು” ಎಂದು ಅವರು ಹೇಳಿದರು.

ಸಹಿ ಮಾಡಿದವರಲ್ಲಿ ಕಮಿಟಿ ಟು ಪ್ರೊಟೆಕ್ಟ್ ಜರ್ನಲಿಸ್ಟ್ಸ್ (ಸಿಪಿಜೆ) ಮತ್ತು ಹ್ಯೂಮನ್ ರೈಟ್ಸ್ ವಾಚ್ (ಎಚ್‌ರ್‌ಡಬ್ಲ್ಯೂ) ಸೇರಿವೆ.

ಇದನ್ನೂ ಓದಿ; ಜೈಲಿನಲ್ಲಿ ಸಿಗರೇಟ್ ಸೇದುತ್ತಿರುವ ದರ್ಶನ್; ಆಪ್ತರಿಗೆ ವೀಡಿಯೊ ಕರೆ ಮಾಡಿರುವ ಕ್ಲಿಪ್ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...