ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಪರಪ್ಪನ ಆಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದ ಆರೋಪದಡಿ 7 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲರ್‌ಗಳಾದ ಶರಣಪ್ಪ, ಪ್ರಭು ಎಸ್ ಖಂಡೇಲ್ ವಾಲ್, ಅಸಿಸ್ಟೆಂಟ್ ಜೈಲರ್‌ಗಳಾದ ಎಲ್.ಎಸ್ ತಿಪ್ಪೇಸ್ವಾಮಿ, ಶ್ರೀಕಾಂತ್ ತಲ್ವಾರ್, ಹೆಡ್ ವಾರ್ಡರ್‌ಗಳಾದ ವೆಂಕಪ್ಪ, ಸಂಪತ್ ಕುಮಾರ್, ವಾರ್ಡರ್ ಬಸಪ್ಪ ತೇಲಿ ಎಂಬವರನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.
ದರ್ಶನ್ ಸೇರಿ ಇನ್ನಿತರರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ಸಿಎಂ ತಾಕೀತು
ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ @siddaramaiah ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ.
ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ…
— CM of Karnataka (@CMofKarnataka) August 26, 2024
ನಟ ದರ್ಶನ್ ಜೈಲಿನೊಳಗೆ ಬೆಡ್ ಮೇಲೆ ಕುಳಿತು ವಿಡಿಯೋ ಕಾಲ್ ಮೂಲಕ ಮಾತನಾಡಿರುವ ವಿಡಿಯೋ ಮತ್ತು ಇತರ ಆರೋಪಿಗಳಾದ ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ಹಾಗೂ ಮ್ಯಾನೇಜರ್ ನಾಗರಾಜ್ ಜೊತೆ ಕುಳಿತು ಸಿಗರೇಟ್ ಸೇದುತ್ತಾ ಹರಟೆ ಹೊಡೆಯುತ್ತಿದ್ದ ಫೋಟೋ ವೈರಲ್ ಆಗಿತ್ತು.
ಇದನ್ನೂ ಓದಿ : ಜೈಲಿನಲ್ಲಿ ಸಿಗರೇಟ್ ಸೇದುತ್ತಿರುವ ದರ್ಶನ್; ಆಪ್ತರಿಗೆ ವೀಡಿಯೊ ಕರೆ ಮಾಡಿರುವ ಕ್ಲಿಪ್ ವೈರಲ್


