Homeಫ್ಯಾಕ್ಟ್‌ಚೆಕ್FACT CHECK : KPSC ಪರೀಕ್ಷೆ ಕುರಿತು ಸುಳ್ಳು ಸುದ್ದಿ ಹಂಚಿಕೊಂಡ ಬಿಜೆಪಿ ಐಟಿ ಸೆಲ್...

FACT CHECK : KPSC ಪರೀಕ್ಷೆ ಕುರಿತು ಸುಳ್ಳು ಸುದ್ದಿ ಹಂಚಿಕೊಂಡ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ

- Advertisement -
- Advertisement -

“ಕರ್ನಾಟಕ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಆಡಳಿತ ಸೇವೆಗಳ ಪರೀಕ್ಷೆಗಳಲ್ಲಿನ ಹಗರಣಗಳ ವಿರುದ್ದ ಶೂ ಪಾಲಿಶ್ ಮಾಡುವ ಮೂಲಕ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಮೂರು ಬಾರಿ ಪರಾಜಿತರಾಗಿರುವ ರಾಹುಲ್ ಗಾಂಧಿ, ಇತ್ತೀಚೆಗೆ ಸ್ವಚ್ಛ ಪರೀಕ್ಷೆಗಳ ಹೋರಾಟಗಾರ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿರುವ ಬಗ್ಗೆ ಅವರು ಮೌನವಾಗಿದ್ದಾರೆ” ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಆಗಸ್ಟ್ 25ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದರು.

“ಕಾಂಗ್ರೆಸ್‌ ಆಡಳಿತದ ಕರ್ನಾಟಕದಲ್ಲಿ ಕೆಪಿಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಆದರೆ, ರಾಹುಲ್ ಗಾಂಧಿ ಮೌನವಾಗಿದ್ದಾರೆ” ಎಂಬುವುದಾಗಿದೆ ಅಮಿತ್ ಮಾಳವೀಯ ಪೋಸ್ಟ್‌ನ ಅರ್ಥ. ಈಗಲೂ ಆ ಪೋಸ್ಟ್ ಮಾಳವೀಯ ಅವರ ಖಾತೆಯಲ್ಲಿ ಇದೆ.

ಫ್ಯಾಕ್ಟ್‌ಚೆಕ್ : ಅಮಿತ್ ಮಾಳವೀಯ ಎಕ್ಸ್‌ ಪೋಸ್ಟ್‌ನಲ್ಲಿ ಕರ್ನಾಟಕದ ಕುರಿತು ಮಾಡಿರುವ ಆರೋಪ ಸುಳ್ಳು.

ಅಸಲಿಗೆ, ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇಂದು (ಆ. 27) ನಡೆಸಲಿರುವ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಆಗಸ್ಟ್ 24ರಂದು ಆಕಾಂಕ್ಷಿಗಳು ಶೂ ಪಾಲಿಶ್ ಮಾಡುವ ಮೂಲಕ ಪ್ರತಿಭಟಿಸಿದ್ದರು. ಆ ಪ್ರತಿಭಟನೆಯ ಫೋಟೋ ಆಗಿದೆ ಅಮಿತ್ ಮಾಳವೀಯ ಹಂಚಿಕೊಂಡಿರುವುದು.

ವಿದ್ಯಾರ್ಥಿ ಸಂಘದ ಪ್ರತಿಭಟನೆಯ ಕುರಿತು ಪ್ರಜಾವಾಣಿ ಮಾಡಿರುವ ವರದಿಯನ್ನು ಇಲ್ಲಿ ಓದಬಹುದು.

ಇಲ್ಲಿ, ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳ ಸಣ್ಣ ಗುಂಪೊಂದು ಪ್ರತಿಭಟನೆ ಮಾಡಿದ ಫೋಟೋ ಬಳಸಿಕೊಂಡು ಕರ್ನಾಟಕದಲ್ಲಿ ಕೆಪಿಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಅಮಿತ್ ಮಾಳವಿಯಾ ಸುಳ್ಳು ಸುದ್ದಿ ಹರಡಿದ್ದಾರೆ.

ಇದನ್ನೂ ಓದಿ : FACT CHECK : ಕೋಲ್ಕತ್ತಾದಲ್ಲಿ ಪ್ರತಿಭಟನೆಯಿಂದ ಹಿಂದಿರುಗುತ್ತಿದ್ದ ಯುವತಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎನ್ನುವುದು ಕಟ್ಟುಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...