Homeಕರ್ನಾಟಕಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ : ಸಚಿವ ಜಾರ್ಜ್‌ಗೆ ಕ್ಲೀನ್ ಚಿಟ್ ನೀಡಿದ್ದ ಸಿಬಿಐ ವರದಿ...

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ : ಸಚಿವ ಜಾರ್ಜ್‌ಗೆ ಕ್ಲೀನ್ ಚಿಟ್ ನೀಡಿದ್ದ ಸಿಬಿಐ ವರದಿ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ ಜಾರ್ಜ್‌ ಅವರಿಗೆ ಸಿಬಿಐ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಂಡಿದೆ

ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ ಜಾರ್ಜ್ ಅವರ ಪಾತ್ರವಿಲ್ಲ ಎಂದು ಸಿಬಿಐ/ಸಿಐಡಿ ತನಿಖಾ ವರದಿಗಳು ಹೇಳಿದ್ದವು. ಬಳಿಕ ಹೈಕೋರ್ಟ್​ ಕೂಡ ಜಾರ್ಜ್​ ಅವರ ಪಾತ್ರವಿಲ್ಲ ಎಂದು ತೀರ್ಪು ನೀಡಿತ್ತು. ಸಿಬಿಐ ಕ್ಲೀನ್ ಚಿಟ್ ನೀಡಿದ್ದನ್ನು ಪ್ರಶ್ನಿಸಿ ಗಣಪತಿ ಸಹೋದರಿ ಸಬಿತಾ ಮತ್ತಿತರರು ಸಲ್ಲಿಸಿದ್ದ ವಿಶೇಷ ಕ್ರಿಮಿನಲ್ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬೇಲಾ ಎಂ.ತ್ರಿವೇದಿ ಮತ್ತು ಸತೀಶ್ಚಂದ್ರ ಶರ್ಮ ಅವರನ್ನೊಳಗೊಂಡ ಪೀಠ ಇಂದು (ಆ.27) ವಜಾಗೊಳಿಸಿದೆ.

2016ರ ಜು.17ರಂದು ಡಿವೈಎಸ್ಪಿ ಎಂ.ಕೆ ಗಣಪತಿ ಅವರು ಕೊಡಗಿನ ಹೋಟೆಲ್ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಮಾಡಿದ್ದ ವಿಡಿಯೋದಲ್ಲಿ ಅವರು ಆಗ ಗೃಹ ಸಚಿವರಾಗಿದ್ದ ಕೆ.ಜೆ ಜಾರ್ಜ್ ಅವರ ಹೆಸರು ಪ್ರಸ್ತಾಪಿಸಿದ್ದರು. ಹೀಗಾಗಿ, ಸಚಿವರ ಕಿರುಕುಳದಿಂದ ಬೇಸತ್ತು ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾದ ಹಿನ್ನೆಲೆ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.

ಸುದೀರ್ಘ ತನಿಖೆ ನಡೆಸಿದ್ದ ಸಿಬಿಐ, 2019ರಲ್ಲಿ ವರದಿ ನೀಡಿ ಸಚಿವ ಕೆ.ಜೆ ಜಾರ್ಜ್ ಅವರಿಗೆ ಕ್ಲೀನ್ ಚಿಟ್ ನೀಡಿತ್ತು. ಅಲ್ಲದೆ, ಗಣಪತಿ ಆತ್ಮಹತ್ಯೆಗೆ ಕಿರುಕುಳ ಕಾರಣವಲ್ಲ. ಬದಲಾಗಿ ಒಂದೆರಡು ಬಾರಿ ಸಚಿವ ಜಾರ್ಜ್ ಅವರು ಗಣಪತಿಗೆ ನೆರವು ನೀಡಿದ್ದರು ಎಂದು ಹೇಳಿತ್ತು.

ಗೃಹ ಸಚಿವರಾಗಿದ್ದಾಗ ಮಂಗಳೂರಿಗೆ ಬಂದಿದ್ದ ಜಾರ್ಜ್‌ ಅವರಿಗೆ ಕ್ರೈಸ್ತ ಸಂಘಟನೆಗಳು ಗಣಪತಿ ವಿರುದ್ಧ ದೂರು ನೀಡಿದ್ದವು. ಇದನ್ನೇ ಕಾರಣವಾಗಿಟ್ಟುಕೊಂಡು ಅವರು ದ್ವೇಷ ಸಾಧಿಸುತ್ತಿದ್ದರು ಎಂದು ಪೊಲೀಸ್‌ ಅಧಿಕಾರಿ ಭಾವಿಸಿದ್ದನ್ನು ಒಪ್ಪತಕ್ಕದ್ದಲ್ಲ. ಅಲ್ಲದೆ, ಈ ಪ್ರಕರಣ 2011ರಲ್ಲೇ ಮುಕ್ತಾಯಗೊಂಡಿತ್ತು. ಐದು ವರ್ಷಗಳ ಬಳಿಕ ಜಾರ್ಜ್‌ ಮೇಲೆ ಆರೋಪ ಮಾಡಿರುವುದಕ್ಕೆ ಯಾವುದೇ ಮಹತ್ವವಿಲ್ಲ ಎಂದೂ ಸಿಬಿಐ ಸ್ಪಷ್ಟಪಡಿಸಿತ್ತು. ಇದಲ್ಲದೆ, ಬೆಂಗಳೂರು ಅಪರಾಧ ವಿಭಾಗದ ಐ.ಜಿ ಪ್ರಣಬ್‌ ಮೊಹಂತಿ ಹಾಗೂ ಮಂಗಳೂರು ಐ.ಜಿ ಆಗಿದ್ದ ಎ.ಎಂ ಪ್ರಸಾದ್‌ ಅವರ ವಿರುದ್ಧ ಗಣ‍‍ಪತಿ ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ ಎಂದೂ ಹೇಳಿತ್ತು.

ಇದಕ್ಕೂ ಮುನ್ನ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ವಿಚಾರಣೆಗೆ ನ್ಯಾ. ಕೆ.ಎನ್‌ ಕೇಶವನಾರಾಯಣ ನೇತೃತ್ವದಲ್ಲಿ ರಚಿಸಿದ್ದ ಏಕಸದಸ್ಯ ಆಯೋಗವು 2018ರ ಫೆಬ್ರವರಿ 27ರಂದು ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿತ್ತು. ವರದಿಯಲ್ಲಿ ಸಚಿವ ಕೆ.ಜೆ ಜಾರ್ಜ್‌ ಹಾಗೂ ಐಪಿಎಸ್‌ ಅಧಿಕಾರಿಗಳಾದ ಪ್ರಣಬ್‌ ಮೊಹಂತಿ, ಎ.ಎಂ. ಪ್ರಸಾದ್‌ಗೆ ಕ್ಲೀನ್‌ ಚಿಟ್‌ ನೀಡಲಾಗಿತ್ತು.

ಇದನ್ನೂ ಓದಿ : ಮುಡಾ ಪ್ರಕರಣ | ವೈಟ್ನರ್ ಹಿಂದಿರುವುದೇನು? ವಿಡಿಯೋ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...