Homeಮುಖಪುಟಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

ಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

- Advertisement -
- Advertisement -

ಉತ್ತರ ಪ್ರದೇಶದ ಬರೇಲಿಯ ಹಿಂದೂ ಪ್ರಾಬಲ್ಯ ಪ್ರದೇಶದಲ್ಲಿ ಮುಸ್ಲಿಂ ಕುಟುಂಬವೊಂದು ಮನೆ ಖರೀದಿಸಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಹಾಗಾಗಿ, ಖರೀದಿಸಿದ ಕೆಲವೇ ದಿನಗಳಲ್ಲಿ ಮುಸ್ಲಿಂ ಕುಟುಂಬ ಮನೆ ಮಾರಲು ನಿರ್ಧರಿಸಿದೆ ಎಂದು ದಿ ವೈರ್ ವರದಿ ಮಾಡಿದೆ.

ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡಿರುವ ವಿಶಾಲ್ ಸಕ್ಸೇನಾ ಎಂಬವರು ಪೊಲೀಸರಿಗೆ ಪತ್ರವೊಂದನ್ನು ಬರೆದಿದ್ದು, “ಹಿಂದುತ್ವ ಸಂಘಟನೆಯೊಂದಿಗೆ ಸೇರಿಕೊಂಡು ಸ್ಥಳೀಯರು ಮನೆ ಮಾರಾಟದ ಬಗ್ಗೆ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ಕೋಮು ಸೌಹಾರ್ದತೆಯನ್ನು ಕೆಡಿಸುವ ಸಲುವಾಗಿ ಸಾಮೂಹಿಕ ವಲಸೆಯ ಬೆದರಿಕೆ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ದಿ ವೈರ್ ಜೊತೆ ಮಾತನಾಡಿರುವ ಸಕ್ಸೇನಾ ಅವರು ” ಈ ಹಿಂದೆ 10-12 ಮಂದಿ ನನ್ನ ಮನೆ ಖರೀದಿಸಲು ಬಂದಿದ್ದರು. ಆದರೆ, ಮನೆ ಸೂಫಿ ಸಂತರ ದರ್ಗಾ ಮತ್ತು ಮುಸ್ಲಿಂ ಬಾಹುಳ್ಯದ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ಅವರು ಮನೆ ಖರೀದಿಸಿಲ್ಲ” ಎಂದು ತಿಳಿಸಿದ್ದಾರೆ.

“ನನಗೆ ಮನೆ ವಾಪಸ್ ಬೇಡ, ಆದರೆ ಮುಸ್ಲಿಂ ಕುಟುಂಬಕ್ಕೆ ಮನೆ ಕೊಟ್ಟಿರುವುದನ್ನು ವಿರೋಧಿಸುವುದರ ಹಿಂದೆ ನಗರದ ಹೆಸರನ್ನು ಹಾಳು ಮಾಡುವ ಉದ್ದೇಶವಿದೆ” ಎಂದು ಸಕ್ಸೇನಾ ಆರೋಪಿಸಿದ್ದಾರೆ.

ಸಕ್ಸೇನಾ ಅವರು ಪೊಲೀಸರಿಗೆ ಬರೆದಿರುವ ಪತ್ರದಲ್ಲಿ ಅವರ ಮನೆ ಮಾರಾಟದ ಬಗೆಗಿನ ಸುಳ್ಳು ಆರೋಪಗಳನ್ನು ವಿವರಿಸಿಲ್ಲ. ಆದರೆ, ಖರೀದಿ ಒಪ್ಪಂದದಲ್ಲಿ ಸ್ಥಳೀಯ ಮಸೀದಿಯನ್ನು ಅಕ್ರಮ ಸ್ವಾಧೀನದಲ್ಲಿಟ್ಟುಕೊಂಡಿರುವ ಅಸ್ಸಾಮಿ ಮೌಲಾನಾ ಒಬ್ಬರು ಭಾಗಿಯಾಗಿದ್ದಾರೆ ಎಂದು ಕೆಲ ಸ್ಥಳೀಯ ನಿವಾಸಿಗಳು ಹೇಳಿರುವುದಾಗಿ ದಿ ವೈರ್ ತಿಳಿಸಿದೆ.

ಈ ಎಲ್ಲಾ ಗೊಂದಲಗಳ ನಡುವೆ ಸಕ್ಸೇನಾ ಅವರಿಂದ ಮನೆ ಖರೀದಿಸಿರುವ ಶಬ್ನಂ ಎಂಬ ಮುಸ್ಲಿಂ ಮಹಿಳೆಯ ಕುಟುಂಬ, ಸೂಕ್ತ ಬೆಲೆ ನೀಡಲು ಸಿದ್ದರಿರುವ ಯಾವುದೇ ಸನಾತನಿ ಹಿಂದೂಗಳಿಗೆ ಮನೆ ಮಾರಾಟ ಮಾಡಲು ಸಿದ್ದ ಎಂದಿದೆ. ಶಬ್ನಂ ಕುಟುಂಬ ಕೆಲ ದಿನಗಳ ಹಿಂದೆಯಷ್ಟೇ ಸಕ್ಸೇನಾ ಅವರಿಂದ ಮನೆ ಖರೀದಿಸಿತ್ತು. ಅದು ಬರೇಲಿಯಾ ಹಿಂದೂ ಪ್ರಾಬಲ್ಯ ಪ್ರದೇಶ ಪಂಜಾಬ್ ಪುರದಲ್ಲಿದೆ.

ಹಿಂದೂ ಪ್ರಾಬಲ್ಯ ಪ್ರದೇಶದಲ್ಲಿ ಮನೆ ಖರೀದಿಸುವಾಗ ಶಬ್ನಂ ಕುಟುಂಬ ತಲೆ ಮಾರುಗಳಿಂದ ಕಾಪಾಡಿಕೊಂಡು ಬಂದಿರುವ ನಗರದ ಕೋಮು ಸಾಮರಸ್ಯವನ್ನು ನಂಬಿತ್ತು. ಆದರೆ, ಅವರ ನಂಬಿಕೆ ಹುಸಿಯಾಗಿದೆ. ಮನೆ ಖರೀದಿಸಿದ ಬೆನ್ನಲ್ಲೇ ಪಂಜಾಬ್‌ ಪುರದ ಹಿಂದೂಗಳು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮನೆಯ ನೋಂದಣಿ ಮಾಡಬಾರದು ಎಂದಿದ್ದಾರೆ. ಮುಸ್ಲಿಂ ಕುಟುಂಬಕ್ಕೆ ಮನೆ ಕೊಟ್ಟರೆ ‘ಸಾಮೂಹಿಕ ವಲಸೆ’ ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ವರದಿ ವಿವರಿಸಿದೆ.

ಕೆಲ ಹಿಂದೂ ನಿವಾಸಿಗಳು ತಮ್ಮ ಮನೆಯ ಕಾಂಪೌಡ್ ಮೇಲೆ ‘ಸಾಮೂಹಿಕ್ ಪಲಾಯನ್’ (ಸಾಮೂಹಿಕ ಪಲಾಯನ) ಎಂಬ ಪೋಸ್ಟರ್ ಅಂಟಿಸಿ ಶಬ್ನಂ ಕುಟುಂಬಕ್ಕೆ ಮನೆ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮುಸ್ಲಿಮರಿಗೆ ಮನೆ ಕೊಟ್ಟರೆ ಅದು ‘ಲವ್‌ ಜಿಹಾದ್‌’ಗೆ ಅವಕಾಶ ಕೊಟ್ಟಂತಾಗುತ್ತದೆ ಎಂದು ಕೆಲವರು ಹೇಳಿದ್ದಾರೆ, ಇನ್ನೂ ಕೆಲವರು ಮುಸ್ಲಿಮರ ಆಹಾರ ಪದ್ದತಿಗೆ ಆಕ್ಷೇಪ ಎತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಶಬ್ನಂ ಕುಟುಂಬಕ್ಕೆ ಮನೆ ಕೊಟ್ಟಿರುವುದನ್ನು ವಿರೋಧಿಸುತ್ತಿರುವ ಜನರನ್ನು ದಿ ವೈರ್ ಮಾತನಾಡಿಸಿದ್ದು,” ಒಬ್ಬ ವ್ಯಕ್ತಿ ಶಬ್ನಂ ಅವರ ಸಹೋದರ ನಸೀಮ್ 2010 ರ ಬರೇಲಿ ಗಲಭೆಯ ಮಾಸ್ಟರ್ ಮೈಂಡ್ ಎಂದು ಘೋಷಿಸುವ ಮಟ್ಟಕ್ಕೆ ಹೋಗಿದ್ದಾರೆ. ಇನ್ನೊಬ್ಬರು ಅಸ್ಸಾಮಿಗಳು ಮತ್ತು ಬಾಂಗ್ಲಾದೇಶಿಯರ ಬಗ್ಗೆ ಜಾಗರೂಕರಾಗಿರುವಂತೆ ಮುಖ್ಯಮಂತ್ರಿ ಮತ್ತು ಪ್ರಧಾನಿ ಹೇಳಿದ್ದಾರೆ ಎಂದಿದ್ದಾರೆ. ಆದರೆ, ಸಿಎಂ ಮತ್ತು ಪ್ರಧಾನಿ ಆ ರೀತಿ ಹೇಳಿರುವುದು ನಮಗೆ ಕಂಡು ಬಂದಿಲ್ಲ ಎಂದು ದಿ ವೈರ್ ವಿವರಿಸಿದೆ.

ಒಟ್ಟಿನಲ್ಲಿ ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಹಿಂದೂ ವ್ಯಕ್ತಿಯೇ ಮುಸ್ಲಿಂ ಕುಟುಂಬಕ್ಕೆ ಮನೆ ಮಾರಾಟ ಮಾಡಿರುವುದಕ್ಕೆ ಸ್ಥಳೀಯ ಹಿಂದೂಗಳಿಂದ ವಿರೋಧ ವ್ಯಕ್ತವಾಗಿದೆ. ಇದರ ಹಿಂದೆ ಹಿಂದುತ್ವ ಸಂಘಟನೆಯ ಕುಮ್ಮಕ್ಕು ಇದೆ ಎಂದು ಮನೆ ಮಾರಿರುವ ಸಕ್ಸೇನಾ ಹೇಳಿದ್ದಾರೆ. ವಿರೋಧ ವ್ಯಕ್ತವಾದ ಹಿನ್ನೆಲೆ, ನಗರದ ಸಾಮರಸ್ಯ ಕಾಪಾಡಲು ಮುಸ್ಲಿಂ ಕುಟುಂಬ ಮನೆ ಮಾರಾಟಕ್ಕೆ ಮುಂದಾಗಿದೆ ಎಂದು ದಿ ವೈರ್ ವಿವರಿಸಿದೆ.

ಇದನ್ನೂ ಓದಿ : ಅಸ್ಸಾಂ | ‘ಮುಸ್ಲಿಂ ವಿವಾಹ, ವಿಚ್ಛೇದನ ನೋಂದಣಿ ಕಡ್ಡಾಯ’ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...