Homeಮುಖಪುಟ'ಬುಲ್ಡೋಝರ್ ಕಾರ್ಯಾಚರಣೆ' ವಿರುದ್ದ ತುರ್ತು ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

‘ಬುಲ್ಡೋಝರ್ ಕಾರ್ಯಾಚರಣೆ’ ವಿರುದ್ದ ತುರ್ತು ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಅಧಿಕಾರಿಗಳು ಬುಲ್ಡೋಝರ್ ಕಾರ್ಯಾಚರಣೆ ಅಥವಾ ಮನೆಗಳ ಧ್ವಂಸ ನಡೆಸುತ್ತಿರುವುದರ ವಿರುದ್ದ ತುರ್ತು ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಇಂದು ಎರಡು ಅರ್ಜಿಗಳು ಸಲ್ಲಿಕೆಯಾಗಿದೆ. ಈ ಅರ್ಜಿಗಳ ವಿಚಾರಣೆ ಸೆಪ್ಟೆಂಬರ್ 2 ರಂದು ನಡೆಯಲಿದೆ.

ಒಂದು ಅರ್ಜಿಯನ್ನು ಹಿರಿಯ ವಕೀಲ ಸಿಯು ಸಿಂಗ್ ಅವರು, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠದ ಮುಂದೆ ಪ್ರಸ್ತಾಪಿಸಿದ್ದು, ಅದನ್ನು ಬೃಂದಾ ಕಾರಟ್ VS ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಇತರರು ಪ್ರಕರಣದ ಮುಂದಿನ ವಿಚಾರಣೆಯ ವೇಳೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ 2022ರಲ್ಲಿ ಕೈಗೊಂಡ ಧ್ವಂಸ ಕಾರ್ಯಾಚರಣೆ ಪ್ರಶ್ನಿಸಿ ಬೃಂದಾ ಕಾರಟ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಯುತ್ತಿದೆ.

ಮತ್ತೊಂದು ಅರ್ಜಿಯನ್ನು ಅಡ್ವೊಕೇಟ್ ಪೌಝಿಯಾ ಶಕೀಲ್ ಸಲ್ಲಿಸಿದ್ದಾರೆ. ಈ ಅರ್ಜಿ ರಾಜಸ್ಥಾನದ ಉದಯಪುರದಲ್ಲಿ ಬಾಡಿಗೆದಾರನ ಮಗನ ಮೇಲೆ ಕ್ರಿಮಿನಲ್ ಪ್ರಕರಣವಿದೆ ಎಂಬ ಕಾರಣಕ್ಕೆ ತನ್ನ ಮನೆಯನ್ನು ಕೆಡವಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದಾಗಿದೆ. ಈ ಅರ್ಜಿಯಲ್ಲಿ ಮಧ್ಯಂತರ ಆದೇಶಕ್ಕೆ ಅರ್ಜಿದಾರ ಕೋರಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.

ನ್ಯಾಯಾಧೀಶರು ಎರಡೂ ಪ್ರಕರಣಗಳನ್ನು ಸೆಪ್ಟೆಂಬರ್ 2ರಂದು ವಿಚಾರಣೆಗೆ ಪಟ್ಟಿ ಮಾಡುವಂತೆ ಸೂಚಿಸಿದ್ದಾಗಿ ಲೈವ್ ಲಾ ವರದಿ ಮಾಡಿದೆ.

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಏಪ್ರಿಲ್ 2022ರಲ್ಲಿ ಕಟ್ಟಡಗಳ ಧ್ವಂಸ ಕಾರ್ಯಾಚರಣೆಗೆ ಮುಂದಾಗಿದ್ದ ಅಧಿಕಾರಿಗಳ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹಲವು ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಧ್ವಂಸ ಕಾರ್ಯಾಚರಣೆಗೆ ತಡೆ ನೀಡಿದೆ. ಆದರೆ, ಅರ್ಜಿದಾರರು ಆರೋಪ ಕೇಳಿ ಬಂದ ತಕ್ಷಣ ಬುಲ್ಡೋಝರ್ ಮೂಲಕ ಕಟ್ಟಡ ಕೆಡವುವ ಕ್ರಮವನ್ನು ತಡೆಯುಂತೆ ನ್ಯಾಯಾಲಯವನ್ನು ಕೋರಿದ್ದಾರೆ.

ಅರ್ಜಿದಾರರಲ್ಲಿ ಒಬ್ಬರಾದ ಮಾಜಿ ರಾಜ್ಯಸಭಾ ಸಂಸದೆ ಮತ್ತು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಅವರು, ಏಪ್ರಿಲ್‌ 2022ರಲ್ಲಿ ಶೋಭಾ ಯಾತ್ರೆಯ ಮೆರವಣಿಗೆ ಮೇಲೆ ಕಲ್ಲು ತೂರಾಟದಿಂದ ಉಂಟಾದ ಕೋಮು ಹಿಂಸಾಚಾರದ ಬಳಿಕ, ಜಹಾಂಗೀರ್‌ಪುರಿ ಪ್ರದೇಶದಲ್ಲಿ ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಕಟ್ಟಡಗಳನ್ನು ನೆಲಸಮ ಮಾಡಿದ್ದನ್ನು ಪ್ರಶ್ನಿಸಿದ್ದರು.

2023ರ ಸೆಪ್ಟೆಂಬರ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆದಾಗ, ಹಿರಿಯ ವಕೀಲ ದುಶ್ಯಂತ್ ದವೆ (ಕೆಲ ಅರ್ಜಿದಾರರ ಪರ ವಾದ ಮಂಡಿಸಿದವರು) ರಾಜ್ಯ ಸರ್ಕಾರಗಳು ಅಪರಾಧಗಳ ಆಪಾದಿತ ಜನರ ಮನೆಗಳನ್ನು ಕೆಡವುವ ಪ್ರವೃತ್ತಿ ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ‘ಮನೆ’ ಎಂಬುವುದು ಜನರ ಹಕ್ಕು ಎಂದು ಒತ್ತಿ ಹೇಳಿದ್ದರು. ಅದು ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಬದುಕುವ ಹಕ್ಕಿನ ಭಾಗ ಎಂದು ವಾದಿಸಿದ್ದರು. ಅಲ್ಲದೆ ಕೆಡವಿದ ಮನೆಗಳ ಪುನರ್ ನಿರ್ಮಾಣಕ್ಕೆ ನ್ಯಾಯಾಲಯ ಆದೇಶ ನೀಡಬೇಕು ಎಂದು ಕೋರಿದ್ದರು.

ಇದನ್ನೂ ಓದಿ : ಹಿಂದುತ್ವವಾದಿಗಳಿಂದ ಪ್ರತಿಭಟನೆ : ಖರೀದಿಸಿದ ಬೆನ್ನಲ್ಲೇ ಮನೆ ಮಾರಾಟಕ್ಕಿಟ್ಟ ಮುಸ್ಲಿಂ ಕುಟುಂಬ ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...