Homeಕರ್ನಾಟಕಮುಡಾ ಪ್ರಕರಣ | ಕಾಂಗ್ರೆಸ್‌ ನಾಯಕರಿಂದ 'ರಾಜಭವನ ಚಲೋ'

ಮುಡಾ ಪ್ರಕರಣ | ಕಾಂಗ್ರೆಸ್‌ ನಾಯಕರಿಂದ ‘ರಾಜಭವನ ಚಲೋ’

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ತುರ್ತಾಗಿ ಅನುಮತಿ ನೀಡಿದಂತೆ, ರಾಜ್ಯಪಾಲರು ತಮ್ಮ ಮುಂದೆ ಬಾಕಿ ಇರುವ ಇತರ ಪ್ರಕರಣಗಳಲ್ಲೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್‌ ನಾಯಕರು ಇಂದು (ಆ.31) ‘ರಾಜಭವನ ಚಲೋ’ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ಕಾಲ್ನಡಿಗೆ ಮೂಲಕ ತೆರಳಿದ ಕಾಂಗ್ರೆಸ್‌ ನಾಯಕರು, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿಯಾದರು.

ಅದಕ್ಕೂ ಮೊದಲು ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಂಪುಟದ ಎಲ್ಲಾ ಸಚಿವರು, ಕಾಂಗ್ರೆಸ್ ಶಾಸಕರು, ವಿಧಾನಪರಿಷತ್‌ ಸದಸ್ಯರು ಮತ್ತು ಮಾಜಿ ಸಂಸದ ವೀರಪ್ಪ ಮೊಯ್ಲಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಾಸಕರಾದ ಶಶಿಕಲಾ ಜೊಲ್ಲೆ ಮತ್ತು ಜನಾರ್ದನ ರೆಡ್ಡಿ ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿಯೂ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡುವಂತೆ ಕಾಂಗ್ರೆಸ್‌ ನಾಯಕರು ಒತ್ತಾಯಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯಪಾಲರು “ಬೇರೆಯವರ ದೂರಿನ ಆಧಾರದ ಮೇಲೆ ನಾನು ತನಿಖೆಗೆ ಅನುಮತಿ ನೀಡಿದ್ದೇನೆ. ನಾನಾಗಿಯೇ ನೀಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಬಾಕಿ ಉಳಿದ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ” ಎಂದು ವರದಿಯಾಗಿದೆ.

ಇದನ್ನೂ ಓದಿ : ಪೋಕ್ಸೋ ಪ್ರಕರಣ : ಯಡಿಯೂರಪ್ಪ ಅರ್ಜಿ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...

ಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ – ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...

ಸ್ಪೇನ್‌ನಲ್ಲಿ ಅತಿ ವೇಗದ ರೈಲುಗಳ ನಡುವೆ ಡಿಕ್ಕಿ; ಕನಿಷ್ಠ 46 ಮಂದಿ ಸಾವು

ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಎರಡು ಅತಿ ವೇಗದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಪೇನ್‌ನ ಎಬಿಸಿ (ಎಬಿಸಿ) ಸುದ್ದಿ ಸಂಸ್ಥೆ ವರದಿ ಮಾಡಿದೆ....

ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಜೆರುಸಲೇಮ್‌ನಲ್ಲಿರುವ ಲಿಕುಡ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಹೂದಿ ಮತ್ತು ಝಿಯೋನಿಸ್ಟ್...

ದೆಹಲಿ: 2020ರ ಮುಸ್ಲಿಂ ವಿರೋಧಿ ಹಿಂಸಾಚಾರದಲ್ಲಿ 22 ವರ್ಷದ ಯುವಕನ ಹತ್ಯೆ: ಐವರು ಹಿಂದುತ್ವವಾದಿಗಳಿಗೆ ಏಳು ವರ್ಷ ಜೈಲು ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರದ ಸಂದರ್ಭದಲ್ಲಿ 22 ವರ್ಷದ ಮುಸ್ಲಿಂ ಯುವಕ ಮೋನಿಷ್  ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಐವರು ಹಿಂದುತ್ವವಾದಿ ಪುರುಷರಿಗೆ ವಿಧಿಸಲಾಗಿದ್ದ ಏಳು ವರ್ಷಗಳ...

ಅರ್ನಬ್ ಚಂಡಮಾರುತ: ಆಂಧ್ರಪ್ರದೇಶದಲ್ಲಿ ಮೂವರ ಸಾವು; ಹಲವು ಮನೆಗಳಿಗೆ ಹಾನಿ

ಅರ್ನಬ್ ಚಂಡಮಾರುತವು ಆಂಧ್ರಪ್ರದೇಶದಲ್ಲಿ ಭಾರೀ ಹಾನಿಯನ್ನುಂಟುಮಾಡಿದೆ. ಚಂಡಮಾರುತದಿಂದಾಗಿ ಮೂವರು ಮೃತಪಟ್ಟಿದ್ದು, 31 ಮನೆಗಳು ಹಾನಿಗೀಡಾಗಿವೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್‌)ಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಸ್ತುತ ಚಂಡಮಾರುತವು ಪುದುಚೇರಿಯ ಯಾನಂ ಸಮೀಪದ...